Tuesday, 15th October 2019

Recent News

ಪಾಲಿಕೆ ಮೇಯರ್ ಗಿರಿಗಾಗಿ ರಾಷ್ಟ್ರಮಟ್ಟದಲ್ಲಿ ನನ್ನ ಮರ್ಯಾದೆ ತೆಗಿಬೇಡಿ: ಎಚ್‍ಡಿಡಿ ಎಚ್ಚರಿಕೆ

ಮೈಸೂರು: ಪಾಲಿಕೆ ಮೇಯರ್ ಗಿರಿಗಾಗಿ ರಾಷ್ಟ್ರಮಟ್ಟದಲ್ಲಿ ನನ್ನ ಮರ್ಯಾದೆ ತೆಗೆಯಬೇಡಿ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ವಿಚಾರವಾಗಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮುಂದಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಇದರಿಂದಾಗಿ ಪಕ್ಷದ ಸಚಿವರಿಗೆ ಹಾಗೂ ಸ್ಥಳೀಯ ಮುಖಂಡರಿಗೆ ದೇವೇಗೌಡ ಅವರು ಸಂದೇಶ ರವಾನೆ ಮಾಡಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಇದನ್ನು ಓದಿ: ಮೈಸೂರಿನಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ – ಸುಳಿವು ಬಿಟ್ಟುಕೊಟ್ಟ ಸಚಿವ ಸಾರಾ ಮಹೇಶ್

ಬಿಜೆಪಿ ಜೊತೆಗೆ ಹೋಗುತ್ತೇವೆ ಅಂತಾ ಪರೋಕ್ಷವಾಗಿ ಯಾವತ್ತೂ ಹೇಳಕೂಡದು. ದೇಶದಲ್ಲಿ ತೃತೀಯ ರಂಗದ ರಾಜಕಾರಣ ಬಲವಾಗುತ್ತಿದೆ. ಈ ವೇಳೆ ಮೈತ್ರಿ ಧರ್ಮ ಮುರಿದರೆ ನನಗೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ಪಾಲಿಕೆ ಮೇಯರ್ ಗಿರಿಗಾಗಿ ರಾಷ್ಟ್ರಮಟ್ಟದಲ್ಲಿ ನನ್ನ ಮರ್ಯಾದೆ ಕಳೆಯಬೇಡಿ ಎಂದು ಸೂಚನೆ ನೀಡಿದ್ದಾರಂತೆ. ಇದನ್ನು ಓದಿ:  ಮೈಸೂರು ಮಹಾನಗರ ಪಾಲಿಕೆ ಅಧ್ಯಕ್ಷರ ಆಯ್ಕೆ – ಹಿಂದೆ ಸರಿದ್ರಾ ಸಿದ್ದರಾಮಯ್ಯ?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತಿಗೆ ನಾನು ಒಪ್ಪಿದ್ದೇನೆ. ಕಾಂಗ್ರೆಸ್‍ಗೆ ಮೇಯರ್ ಸ್ಥಾನ ಬಿಟ್ಟು ಕೊಡಿ. ಈ ವಿಚಾರದಲ್ಲಿ ಯಾವುದೇ ಗೊಂದಲ ಉಂಟಾದರೂ ನಾನು ಸಹಿಸುವುದಿಲ್ಲ ಎಂದು ಎಚ್.ಡಿ.ದೇವೇಗೌಡ ಅವರು, ಮೈಸೂರಿನ ಇಬ್ಬರು ಸಚಿವರಾದ ಸಾರಾ ಮಹೇಶ್ ಹಾಗೂ ಜಿ.ಟಿ.ದೇವೇಗೌಡ ಅವರಿಗೆ ಖಡಕ್ ಸೂಚನೆ ರವಾನಿಸಿದ್ದಾರೆ ಎನ್ನಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Leave a Reply

Your email address will not be published. Required fields are marked *