ನವದೆಹಲಿ: ಶಕ್ತಿ ಇದ್ದರೆ ಅವಿಶ್ವಾಸ ಗೊತ್ತುವಳಿ ಮಂಡಿಸಲಿ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ನಡವಳಿಕೆ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಸರ್ಕಾರ ಅಸ್ಥಿರಗೊಳಿಸಲು ಮುಂದಾದ ಅವರನ್ನು ಯಾರೂ ಹಿಡಿದಿಟ್ಟಿಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಹೀಗಾಗಿ ಕರ್ನಾಟಕದಲ್ಲಿಯೂ ಅವರೇ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.
Advertisement
Advertisement
ಕಲಾಪಕ್ಕೆ ಕಾಂಗ್ರೆಸ್ ಶಾಸಕರು ಗೈರಾಗಿರುವ ಕುರಿತು ಪ್ರತಿಕ್ರಿಯೆ ನೀಡಿದ ದೇವೇಗೌಡರು, ಮದುವೆ, ಕಾರ್ಯಕ್ರಮ, ವೈಯಕ್ತಿಕ ಕೆಲಸದ ಒತ್ತಡದಿಂದಾಗಿ ಅವರು ಇಂದು ಸದನಕ್ಕೆ ಹಾಜರಾಗಿಲ್ಲ. ನಾಳೆಯಿಂದ ಎಲ್ಲರೂ ಬರುತ್ತಾರೆ. ಆಗ ಬಿಜೆಪಿಯವರಿಗೆ ಅಗತ್ಯವಿದ್ದಲ್ಲಿ ಅವಿಶ್ವಾಸ ಮಂಡಿಸಲಿ ಎಂದು ಕುಟುಕಿದರು.
Advertisement
ಲೋಕಸಭೆಯಲ್ಲಿ ಕಾಂಗ್ರೆಸ್‍ನೊಂದಿಗೆ ಸೀಟು ಹಂಚಿಕೆ ಬಗ್ಗೆ ಯಾವುದೇ ಮಾತುಕತೆಯಾಗಿಲ್ಲ. ಬಜೆಟ್ ವಿಚಾರವಾಗಿ ಮಾತನಾಡಲು ದೆಹಲಿಗೆ ಬಂದಿರುವೆ. ಆದರೆ ಸಂಸತ್ ಕಲಾಪ ಮುಂದೂಡಿಕೆಯಾಗಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿಲ್ಲ ಎಂದು ತಿಳಿಸಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv