ಚೆನ್ನೈ: ತೀವ್ರ ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ತಮಿಳುನಾಡಿನ ಡಿಎಂಕೆ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರನ್ನು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಮುಖ್ಯಸ್ಥ ಎಚ್.ಡಿ.ದೇವೇಗೌಡರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಶುಕ್ರವಾರ ಸಂಜೆ ಚೆನ್ನೈನ ಕಾವೇರಿ ಆಸ್ಪತ್ರೆಗೆ ಭೇಟಿ ನೀಡಿದ ದೇವೇಗೌಡರು ಕರುಣಾನಿಧಿಯವರ ಪುತ್ರ ಸ್ಟಾಲಿನ್ ಹಾಗೂ ಪುತ್ರಿ ಕನಿಮೋಳಿಯೊಂದಿಗೆ ಮಾತುಕತೆ ನಡೆಸಿ ಕರುಣಾನಿಧಿಯವರ ಆರೋಗ್ಯದ ಕುರಿತು ಮಾಹಿತಿ ಪಡೆದುಕೊಂಡರು.
ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಕರುಣಾನಿಧಿಯವರು ಶೀಘ್ರವೇ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸಿಕೊಳ್ಳುತ್ತೇವೆ. ಅವರು ಶತಮಾನವನ್ನು ಪೂರೈಸುತ್ತಾರೆ ಎನ್ನುವ ನಂಬಿಕೆ ನನಗಿದೆ. ಕರುಣಾನಿಧಿಯವರು ರಾಷ್ಟ್ರದ ಹಿರಿಯ ರಾಜಕಾರಣಿಯಾಗಿದ್ದಾರೆ. ರಾಷ್ಟ್ರ ರಾಜಕಾರಣದಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದ್ದಾರೆ.
94 ವರ್ಷದ ಕರುಣಾನಿಧಿಯವರು ಮೂತ್ರನಾಳದ ಸೋಂಕು, ಜ್ವರ ಹಾಗೂ ವಯೋಸಹಜ ತೊಂದರೆಯಿಂದ ಬಳಲುತ್ತಿದ್ದ ಪರಿಣಾಮ ಅವರನ್ನು ಜುಲೈ 27ರಂದು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews