ಮಂಡ್ಯ: ಮಾಜಿ ಪ್ರಧಾನಿ ದೇವೇಗೌಡರನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಿಂದ ಸ್ಪರ್ಧಿಸುವಂತೆ ಈ ಹಿಂದೆಯೇ ಮನವಿ ಮಾಡಿಕೊಂಡಿರುವುದಾಗಿ ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಹೇಳಿದ್ದು, ಇದರಿಂದ ದೇವೇಗೌಡರು ಜಿಲ್ಲೆಯಲ್ಲಿ ಸ್ಪರ್ಧಿಸುವ ಬಗ್ಗೆ ಚರ್ಚೆ ಶುರುವಾಗಿದೆ.
ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಂಡ್ಯ ಜನರಿಗೆ ದೇವೇಗೌಡರ ಮೇಲೆ ಅಪಾರ ಪ್ರೀತಿ ಇದೆ. ಹೀಗಾಗಿ ದೇವೇಗೌಡರ ಬಳಿ ನಾವು ಮಾತನಾಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಿಂದ ಸ್ಪರ್ಧಿಸುವಂತೆ ಕೇಳಿಕೊಂಡಿದ್ದೇವೆ. ಕಡೆಗಾಲದಲ್ಲಿ ಮಂಡ್ಯ ಜಿಲ್ಲೆಯ ಜನರಿಗೆ ಆಸೆ ಪೂರೈಸಿ. ಯಾಕಂದರೆ ಇಲ್ಲಿನ ಜನರಿಗೆ ನಿಮ್ಮ ಮೇಲೆ ಅಪಾರ ಪ್ರೀತಿ ವಿಶ್ವಾಸ ಇದೆ ಎಂದು ಎಚ್‍ಡಿಡಿ ಅವರಲ್ಲಿ ಕೇಳಿಕೊಂಡಿದ್ದೇವೆ. ಈ ಬಗ್ಗೆ ದೇವೇಗೌಡರು ಏನೂ ಹೇಳಿಲ್ಲ. ಮಂಡ್ಯದಿಂದ ಸ್ಪರ್ಧಿಸುವ ತೀರ್ಮಾನ ಗೌಡರಿಗೆ ಬಿಟ್ಟಿದ್ದು. ಅವರು ಬಂದರೆ ಸಂತೋಷ ಎಂದು ಹೇಳಿದ್ದಾರೆ.
Advertisement
Advertisement
ಇದೇ ವೇಳೆ ಮಾತನಾಡಿದ ಅವರು ಪ್ರಜ್ವಲ್ ರೇವಣ್ಣ, ಮಂಡ್ಯದಿಂದ ಸ್ಪರ್ಧಿಸುವ ಬಗ್ಗೆ ನಮಗೆ ಗೊತ್ತಿಲ್ಲ. ಮದ್ದೂರು ಪುರಸಭೆಯಲ್ಲಿ ಜೆಡಿಎಸ್‍ಗೆ ಸರಳ ಬಹುಮತ ಬಂದಿದ್ದು, ಜೆಡಿಎಸ್ ಪಕ್ಷದ ಟಿಕೆಟ್ ಸಿಗದೇ ಹಲವರು ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಅವರಲ್ಲಿ ನಾಲ್ಕು ಮಂದಿ ಈಗಾಗಲೇ ಪಕ್ಷಕ್ಕೆ ಬರುತ್ತೇವೆ ಅಂತಿದ್ದಾರೆ. ಅವರು ಪಕ್ಷಕ್ಕೆ ಬಂದರೆ ಸ್ವಾಗತ ಎಂದು ತಿಳಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv