ನವದೆಹಲಿ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಇಂದು ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು.
ದೆಹಲಿಯ ಸಂಸತ್‌ನಲ್ಲಿರುವ ಪ್ರಧಾನಿ ಕಾರ್ಯಾಲಯದಲ್ಲಿ ಪ್ರಧಾನಿ ಮೋದಿ ಅವರನ್ನು ಎಚ್.ಡಿ.ದೇವೇಗೌಡರು ಭೇಟಿಯಾದರು. ಕೆಲಕಾಲ ಮೋದಿ ಅವರೊಂದಿಗೆ ಚರ್ಚೆ ನಡೆಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಯಾವಾಗ ಕುಡಿತಾರೋ, ಯಾವಾಗ ಕುಡಿಯಲ್ಲೊ ಗೊತ್ತಿಲ್ಲ: ಕೆ.ಎಸ್.ಈಶ್ವರಪ್ಪ
Advertisement
Advertisement
ಪ್ರಧಾನಿ ಭೇಟಿ ಕುರಿತು ಮಾತನಾಡಿದ ಎಚ್‌ಡಿಡಿ, ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗಲೂ ನನ್ನೊಂದಿಗೆ ಆತ್ಮೀಯತೆಯಿಂದ ನಡೆದುಕೊಳ್ಳುತ್ತಾರೆ. ಚುನಾವಣೆ ವೇಳೆ ಆರೋಪ ಪ್ರತ್ಯಾರೋಪ ಮಾಡುತ್ತೇವೆ. ಅದೆಲ್ಲವೂ ಗಂಭೀರ ಅಲ್ಲ. ವೈಯಕ್ತಿಕ ಭೇಟಿ ವೇಳೆ ಪ್ರತಿ ಬಾರಿಯೂ ಪ್ರೀತಿಯಿಂದ ಮಾತನಾಡಿಸುತ್ತಾರೆ. ಭೇಟಿ ವೇಳೆ ಎಂದೂ ಅವರಲ್ಲಿ ದ್ವೇಷ, ಸಿಟ್ಟು ಕಂಡಿಲ್ಲ ಎಂದು ಪ್ರತಿಕ್ರಿಯಿಸಿದರು.
Advertisement
Advertisement
ಹಾಸನದಲ್ಲಿ ಐಐಟಿ ಸ್ಥಾಪನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದೆ. ಈ ಕುರಿತು ಹಿಂದೆ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೂ ಮನವಿ ಮಾಡಿದ್ದೆ. ಆದರೆ ಐಐಟಿ ಸ್ಥಾಪನೆ ಸಾಧ್ಯವಿಲ್ಲ ಎಂದು ಮರು ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ನೇರವಾಗಿ ಪ್ರಧಾನಿಗಳನ್ನು ಭೇಟಿ ಮಾಡಿ ಚರ್ಚಿಸಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ, ಜಿಟಿಡಿ ನಡುವಿನ ಹೊಸ ಲವ್ ಸಕ್ಸಸ್ ಆಗಲ್ಲ: ಎಸ್.ಟಿ. ಸೋಮಶೇಖರ್
ಅತ್ತ ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಮೂರು ಕೃಷಿ ಕಾಯ್ದೆಗಳ ಹಿಂಪಡೆಯುವ ಮಸೂದೆಯನ್ನು ಚರ್ಚೆಗೆ ಒಳಪಡಿಸಿದೇ ಕೇಂದ್ರ ಸರ್ಕಾರ ರದ್ದುಗೊಳಿಸಿರುವುದಕ್ಕೆ ವಿರೋಧ ಪಕ್ಷಗಳು ಆಕ್ರೋಶ ಹೊರಹಾಕಿವೆ. ಕಲಾಪ ಬಹಿಷ್ಕಾರದಂತಹ ಪ್ರಸಂಗವೂ ನಡೆದಿದೆ. ರೈತರ ಪ್ರತಿಭಟನೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸಂಸತ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಬೆನ್ನಲ್ಲೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ.