ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ (H.D.Deve Gowda) ಪತ್ನಿ ಚೆನ್ನಮ್ಮ (Chennamma) ಅವರು ಎರಡು ಬಾರಿ ಸಾವನ್ನು ಗೆದ್ದಿದ್ದರು.
2001ರಲ್ಲಿ ದೇವೇಗೌಡರ ತಮ್ಮನ ಮಗನಿಂದಲೇ ಆ್ಯಸಿಡ್ ದಾಳಿಗೆ ಒಳಗಾಗಿದ್ದರು. ಆಸ್ತಿ ವಿವಾದ ಹಾಗೂ ಕುಟುಂಬದ ವೈಷಮ್ಯವೇ ಈ ದಾಳಿಗೆ ಕಾರಣವಾಗಿತ್ತು. ದೇವೇಗೌಡರ ಸಂಬಂಧಿ ಲೋಕೇಶ್ (ಬಸವೇಗೌಡರ ಮಗ) ಎಂಬಾತನೇ ಈ ಕೃತ್ಯದ ಪ್ರಮುಖ ಆರೋಪಿಯಾಗಿದ್ದ. ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ನಡೆದಿದ್ದ ಈ ಘಟನೆ ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು. ಇದನ್ನೂ ಓದಿ: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ
ಜಗತ್ತನ್ನೇ ಕಾಡಿದ ಮಾರಕ ಕೊರೊನಾ ಸೋಂಕಿಗೂ ಚೆನ್ನಮ್ಮ ತುತ್ತಾಗಿದ್ದರು. ಅಲ್ಲದೇ, 2024-2025 ರಲ್ಲಿ ಎದೆ ಸಂಬಂಧಿತ ಸಮಸ್ಯೆ ಮತ್ತು ಉಸಿರಾಟದ ತೊಂದರೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.
ಹೀಗೆ, ಅಪಾಯದ ಸನ್ನಿವೇಶಗಳಿಂದ ಪಾರಾಗಿ ಬಂದಿದ್ದ ಚೆನ್ನಮ್ಮ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪತ್ನಿಯ ಅಗಲಿಕೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ: ಬಿಡದಿ ಟೌನ್‌ಶಿಪ್; ಅನಿತಾ ಕುಮಾರಸ್ವಾಮಿ, ನಿಖಿಲ್‌ಗೆ ಸೇರಿದ ಭೂಮಿಗೂ ಅಧಿಸೂಚನೆ
