ನವದೆಹಲಿ: ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿರುವ ರಾಷ್ಟ್ರೀಯ ಉಕ್ಕು ಕಾರ್ಖಾನೆ – RNIL (ವೈಜಾಗ್ ಸ್ಟೀಲ್ – Vizag Steel) ಯನ್ನು ಪುನಚ್ಚೇತನ ಮಾಡುವ ನಿಟ್ಟಿನಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ (H.D.Kumaraswamy) ಅವರು ಮಂಗಳವಾರ ತಡರಾತ್ರಿ ಮಹತ್ವದ ಸಭೆ ನಡೆಸಿದರು.
Today in New Delhi a significant discussion was held focusing on the revival of the RINL Steel Plant – (Vizag Steel) alongside Andhra Pradesh Chief Minister Shri @ncbn avaru.
This meeting aimed to address key strategies and initiatives to enhance the plant’s operations and ensure… pic.twitter.com/ZU8l7x7rB3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 8, 2024
Advertisement
ನವದೆಹಲಿಯ ನಾರ್ಥ್ ಬ್ಲಾಕ್ ನಲ್ಲಿರುವ ವಿತ್ತ ಸಚಿವಾಲಯದ ಕಚೇರಿಯಲ್ಲಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ (Nirmala Sitharaman) ಹಾಗೂ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಅವರೊಂದಿಗೆ ಹೆಚ್‌ಡಿಕೆ ಮಹತ್ವದ ಸಮಾಲೋಚನೆ ನಡೆಸಿದರು. ಇದನ್ನೂ ಓದಿ: 150 ವರ್ಷಗಳ ಇತಿಹಾಸವಿರುವ ಟ್ರಾಮ್ ರೈಲು ಸೇವೆ ಸ್ಥಗಿತಗೊಳಿಸಲು ಕೋಲ್ಕತ್ತಾ ನಿರ್ಧರಿಸಿದ್ದೇಕೆ? ಇಲ್ಲಿದೆ ಕಾರಣ
Advertisement
ಸುಮಾರು 1 ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ ಆರ್’ಐಎನ್’ಎಲ್ ಅನ್ನು ಉಳಿಸುವ ನಿಟ್ಟಿನಲ್ಲಿ ಕಂಡುಕೊಳ್ಳಬೇಕಾದ ಪರಿಹಾರೋಪಾಯಗಳು, ಮಾರ್ಗಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು. ಈ ಸಂದರ್ಭದಲ್ಲಿ ತಾವು ಖುದ್ದು ಕಾರ್ಖಾನೆಗೆ ಭೇಟಿ ನೀಡಿ ಸಂಗ್ರಹಿಸಿದ್ದ ಮಾಹಿತಿಯನ್ನು ಸಭೆಯಲ್ಲಿ ಹಂಚಿಕೊಂಡ ಕೇಂದ್ರ ಉಕ್ಕು ಸಚಿವರು, ಅದರಲ್ಲಿಯೂ ಕಾರ್ಮಿಕರು, ಕಾರ್ಮಿಕ ಸಂಘಟನೆಗಳ ಮುಖಂಡರು, ಆಡಳಿತ ಮಂಡಳಿ, ಸ್ಥಳೀಯ ಜನಪ್ರತಿನಿಧಿಗಳು ನೀಡಿದ್ದ ಮಾಹಿತಿಯ ಬಗ್ಗೆ ವಿವರಿಸಿದರು.
Advertisement
Advertisement
ಸಭೆಯ ಬಗ್ಗೆ ಮಾಹಿತಿ ನೀಡಿರುವ ಸಚಿವ ಕುಮಾರಸ್ವಾಮಿ ಅವರು, ವೈಜಾಗ್ ಸ್ಟೀಲ್ ಉಳಿಸುವ ನಿಟ್ಟಿನಲ್ಲಿ ಹಣಕಾಸು ಸಚಿವರು ಹಾಗೂ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೊಂದಿಗೆ ಫಲಪ್ರದ ಮಾತುಕತೆ ನಡೆಯಿತು. ಈಗಾಗಲೇ ನಾನು ಕಾರ್ಖಾನೆಗೂ ಭೇಟಿ ನೀಡಿದ್ದೆ ಹಾಗೂ ವಿತ್ತ ಸಚಿವರ ಜತೆಯೂ ಚರ್ಚೆ ನಡೆಸಿದ್ದೆ. ಸಚಿವಾಲಯದ ಮಟ್ಟದಲ್ಲಿ ಹಲವಾರು ಸಭೆಗಳನ್ನು ನಡೆಸಲಾಗಿತ್ತು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಿಡ್ನ್ಯಾಪ್ ಆಗಿದ್ದ ಇಬ್ಬರಲ್ಲಿ ಓರ್ವ ಯೋಧ ಶವವಾಗಿ ಪತ್ತೆ – ಗುಂಡಿಕ್ಕಿ ಹತ್ಯೆಗೈದಿರುವ ಶಂಕೆ