– ಈ ಹಿಂದಿದ್ದ ಅಸಮಾಧಾನ ಈಗ ಇಲ್ಲ : ಸೌಮ್ಯಾ ರೆಡ್ಡಿ
– ಸಿಎಲ್‍ಪಿ ಸಭೆಗೆ ಎಲ್ಲರೂ ಬರುತ್ತಾರೆ : ಎಂ.ಬಿ.ಪಾಟೀಲ್
ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರದ ಎಚ್.ಡಿ.ಕುಮಾರಸ್ವಾಮಿಯವರೇ ನಮ್ಮ ಮುಖ್ಯಮಂತ್ರಿ ಎಂದು ವಸತಿ ಸಚಿವ ಎಂಟಿಬಿ ನಾಗರಾಜ್ ಸ್ಪಷ್ಟನೆ ನೀಡಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ನಮ್ಮ ಸಿಎಂ ಎಂದು ಹೇಳಿರುವ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ನಾನು ಸಿದ್ದರಾಮಯ್ಯ ಅವರ ಅಭಿಮಾನಿ. ಅವರು ಸಿಎಲ್‍ಪಿ ನಾಯಕರು. ಆದರೆ ಕುಮಾರಸ್ವಾಮಿ ಅವರೇ ನಮ್ಮ ಮುಖ್ಯಮಂತ್ರಿ ಎಂದರು.
Advertisement
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿಚಾರವಾಗಿ ಮಾತನಾಡಿದ ಎಂಟಿಬಿ ನಾಗರಾಜ್, ರಮೇಶ್ ಜಾರಕಿಹೊಳಿ ನನ್ನ ಸ್ನೇಹಿತರು. ಅವರನ್ನು ಸೇರಿದಂತೆ ಅನೇಕ ಶಾಸಕರು ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ವಿಪ್ ಉಲ್ಲಂಘಿಸಿದವರ ವಿರುದ್ಧ ಪಕ್ಷದ ನಾಯಕರು ಕ್ರಮ ಕೈಗೊಳ್ಳುತ್ತಾರೆ ಎಂದರು.
Advertisement
Advertisement
ಅಧಿವೇಶನದ ಮೊದಲ ದಿನ ಗೈರು ಆಗಿರುವ ಕುರಿತು ಸ್ಪಷ್ಟನೆ ನೀಡಿದ ಶಾಸಕಿ ಸೌಮ್ಯಾ ರೆಡ್ಡಿ ಅವರು, ಕಾಂಗ್ರೆಸ್‍ನ ರಾಷ್ಟ್ರೀಯ ಮಹಿಳಾ ಘಟಕದ ಸಭೆ ನಿಮಿತ್ತವಾಗಿ ದೆಹಲಿಗೆ ಹೋಗಿದ್ದೆ. ಆದರೆ ಅಲ್ಲಿಂದ ವಾಪಾಸ್ ಬರುವಾಗ ಫ್ಲೈಟ್ ಮಿಸ್ ಆಯಿತು. ಹೀಗಾಗಿ ಸದನಕ್ಕೆ ಹಾಜರಾಗಿರಲಿಲ್ಲ ಎಂದು ತಿಳಿಸಿದರು.
Advertisement
ಫ್ಲೈಟ್ ಮಿಸ್ ಆಗಿರುವ ಕುರಿತು ಪಕ್ಷದ ನಾಯಕರಿಗೆ ಫೋನ್ ಮಾಡಿ ವಿಷಯ ತಿಳಿಸಿ ಅನುಮತಿ ಪಡೆದಿದ್ದೇನೆ. ನನಗೆ ಯಾವುದೇ ಅತೃಪ್ತಿ ಇಲ್ಲ. ನಮ್ಮ ತಂದೆ ರಾಮಲಿಂಗಾ ರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡದ್ದಕ್ಕೆ ಅಸಮಾಧಾನ ಇತ್ತು. ಆದರೆ ಈಗ ಇಲ್ಲ. ಅವರಿಗೆ ಸಚಿವ ಸ್ಥಾನ ಕೊಡುತ್ತಾರೆ ಎನ್ನವ ನಂಬಿಕೆ ಇದೆ ಎಂದು ಪಬ್ಲಿಕ್ ಟಿವಿಗೆ ತಿಳಿಸಿದರು.
ಕಾಂಗ್ರೆಸ್ ಶಾಸಕಾಂಗ ಸಭೆಗೆ ಎಲ್ಲರೂ ಬರುತ್ತಾರೆ. ಯಾವುದೇ ಶಾಸಕರು ನಮ್ಮ ಪಕ್ಷ ಬಿಟ್ಟು ಹೋಗುವುದಿಲ್ಲ. ಬಿಜೆಪಿಯವರ ಆಪರೇಷನ್ ಕಮಲ ಯಶಸ್ವಿಯಾಗುವುದಿಲ್ಲ. ಅವರು ಈ ಹಿಂದೆ ಡೆಡ್ ಲೈನ್ ಕೊಟ್ಟಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಶಾಸಕ ನಾಗೇಂದ್ರ ಅವರಿಗೆ ಫೋನ್ ಮಾಡಿ ಮಾತಾಡಿದ್ದೇನೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv