ಮೈಸೂರು: ಶಂಖ ಊದುವುದಕ್ಕೆ ಜೆಡಿಎಸ್‍ನಲ್ಲಿ ಜನ ಇಲ್ಲ ಎಂಬ ಸಚಿವ ಈಶ್ವರಪ್ಪ ಹೇಳಿಕೆಗೆ, ನಮ್ಮ ಶಂಖವನ್ನ ನಾನೇ ಊದಬೇಕು. ಹೀಗಾಗಿ ಎಲ್ಲಾ ಕ್ಷೇತ್ರಗಳಲ್ಲಿಯೂ ನಾನೇ ಪ್ರಚಾರ ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.
Advertisement
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮಗೆ ಕಾರ್ಯಕರ್ತರೇ ಶಕ್ತಿ, ಕಾರ್ಯಕರ್ತರಿಗೆ ನಾಯಕನನ್ನು ಹುಟ್ಟುಹಾಕುವ ಸಾಮರ್ಥ್ಯ ಇರೋದು. ಹೀಗಾಗಿ ಬಂಡೇಳುವ ಶಾಸಕರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಪರ್ಯಾಯ ನಾಯಕರನ್ನು ಕಾರ್ಯಕರ್ತರೇ ಹುಡುಕಿಕೊಂಡಿದ್ದಾರೆ. ಚುನಾವಣೆ ಎದುರಿಸಲು ಮಾನಸಿಕವಾಗಿ ಸಿದ್ದರಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಮೋದಿ ನಂಗೆ ಫೋನ್ ಮಾಡಿದ್ರು: ಸಿಎಂ ಬೊಮ್ಮಾಯಿ
Advertisement
ನಮ್ಮ ಸಾಮರ್ಥ್ಯಕ್ಕನುಸಾರ ಏಳು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದೇವೆ. ಎಲ್ಲೆಲ್ಲಿ ಗೆಲುವಿಗೆ ಅವಕಾಶವಿದೆಯೋ ಅಲ್ಲಿ ಸ್ಪರ್ಧೆ ಮಾಡಲಾಗುತ್ತಿದೆ. ಸ್ಪರ್ಧೆ ಮಾಡದ ಕ್ಷೇತ್ರಗಳಲ್ಲಿ ಸ್ಥಳೀಯ ನಾಯಕರು ಪರಿಸ್ಥಿತಿಗೆ ಅನುಗುಣವಾಗಿ ತೀರ್ಮಾನ ಮಾಡುತ್ತಾರೆ. ನನ್ನ ಗುರಿ ಇರೋದು ಮುಂದಿನ ವಿಧಾನಸಭಾ ಚುನಾವಣೆ ಮೇಲೆ. 123 ಕ್ಷೇತ್ರಗಳನ್ನು ಗೆದ್ದು ಅಧಿಕಾರ ಹಿಡಿಯಬೇಕಿದೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ವಿಧಾನ ಪರಿಷತ್ ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು. ಇದನ್ನೂ ಓದಿ: ಯಲಹಂಕದಲ್ಲಿ ಹಾನಿಗೊಳಗಾದ ಮನೆಗಳಿಗೆ 10 ಸಾವಿರ ಪರಿಹಾರ: ಸಿಎಂ ಬೊಮ್ಮಾಯಿ
Advertisement
Advertisement
ಹೆಚ್.ಡಿ.ದೇವೇಗೌಡರು ಹಾಗೂ ರೇವಣ್ಣಗೆ ಸಂದೇಶ್ ನಾಗರಾಜ್ ಧನ್ಯವಾದ ತಿಳಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, 12ವರ್ಷ ಸಂದೇಶ್ ನಾಗರಾಜ್‍ಗೆ ಅವರೇ ಬೆಂಬಲ ನೀಡಿದ್ದಾರೆ. ಹಾಗಾಗಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಇದರ ಬಗ್ಗೆ ಹೆಚ್ಚು ಮಾತು ಬೇಡ ಎಂದರು.