ಬೆಂಗಳೂರು: ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್ (Electricity) ದರ ಏರಿಕೆ ಆಗಿದೆ. ಏನೀ ಹುನ್ನಾರ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಸರ್ಕಾರಕ್ಕೆ ಪ್ರಶ್ನೆ ಮಾಡಿದರು.
ಈ ಕುರಿತು ಟ್ವೀಟ್ ಮಾಡಿರುವ ಅವರು, ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರ್ಕಾರ, ಕರೆಂಟ್ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ. ಪ್ರತಿ ಯೂನಿಟ್ಗೆ 24 ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ ಮತ್ತು ಖಂಡನೀಯ ಎಂದರು.
Advertisement
Advertisement
ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ (BJP) ಸರ್ಕಾರ ವಿದ್ಯುತ್ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್ ದರವನ್ನು ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
Advertisement
ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ @BJP4Karnataka ಸರಕಾರ ವಿದ್ಯುತ್ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ.1/4#ನವರಾತ್ರಿಗೆ_ಕರೆಂಟ್_ಶಾಕ್
— H D Kumaraswamy (@hd_kumaraswamy) September 24, 2022
Advertisement
ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ವಿದ್ಯುತ್ ಉತ್ಪಾದನೆ ಉತ್ತಮವಾಗಿದೆ. ಆದರೂ ಖರೀದಿ ವೆಚ್ಚದಲ್ಲಿ 1,244 ಕೋಟಿ ರೂ. ಹೆಚ್ಚಳ ಆಗಿದೆ ಎನ್ನುವ ಲೆಕ್ಕವನ್ನು ನಂಬುವ ರೀತಿಯಲ್ಲಿಲ್ಲ. ಇಂಧನ ವಲಯದ ಕೆಲ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ ಆಗುತ್ತಿದೆ ಎಂದು ಕಿಡಿಕಾರಿದರು.
ರಾಜ್ಯ @BJP4Karnataka ಸರಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಛಾತೈಲದ ಬೆಲೆ ನಿರಂತರ ಇಳಿದರೂ ದೇಶದಲ್ಲಿ ತೈಲಬೆಲೆ ಇಳಿಸದ ಕೇಂದ್ರದ @BJP4India ಸರಕಾರದ ಹಾದಿಯಲ್ಲೇ ರಾಜ್ಯ @BJP4Karnataka ಸರಕಾರವೂ ಸಾಗಿದೆ. ವಿದ್ಯುತ್ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ. 4/4#ನವರಾತ್ರಿಗೆ_ಕರೆಂಟ್_ಶಾಕ್
— H D Kumaraswamy (@hd_kumaraswamy) September 24, 2022
ರಾಜ್ಯ ಬಿಜೆಪಿ ಸರ್ಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಚಾತೈಲದ ಬೆಲೆ ನಿರಂತರವಾಗಿ ಇಳಿದರೂ ದೇಶದಲ್ಲಿ ತೈಲಬೆಲೆ ಇಳಿಸದ ಕೇಂದ್ರದ ಸರ್ಕಾರದ ಹಾದಿಯಲ್ಲೇ ರಾಜ್ಯ ಸರಕಾರವೂ ಸಾಗಿದೆ. ವಿದ್ಯುತ್ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ ಎಂದು ಅವರು ದೂರಿದರು. ಇದನ್ನೂ ಓದಿ: ಶಾಲೆ ಕ್ಲೋಸ್ ಮಾಡಿರುವ ಬಗ್ಗೆ ಯಾವುದೇ ಮಾಹಿತಿಯಿಲ್ಲ: ಬಿ.ಸಿ ನಾಗೇಶ್
ವಿದ್ಯುತ್ ಸೋರಿಕೆ, ಕಳವು ತಡೆಲಾಗದ, ನವೀನ ತಂತ್ರಜ್ಞಾನ ಅಳವಡಿಸಿಕೊಳ್ಳದ @BJP4Karnataka ಸರಕಾರ ಅದಕ್ಷತೆಯ ಆಡಂಬೋಲ. ʼಬಡವರನ್ನು ಸುಲಿದು ಬಿಸ್ನೆಸ್ ಕ್ಲಾಸಿನ ಜನರ ಜೇಬು ತುಂಬುʼ ಎನ್ನುವುದು ಬಿಜೆಪಿ ತತ್ತ್ವ. ಅದನ್ನೇ ಕರ್ನಾಟಕದಲ್ಲೂ ಎಗ್ಗಿಲ್ಲದೆ ಮಾಡುತ್ತಿದೆ.#ನವರಾತ್ರಿಗೆ_ಕರೆಂಟ್_ಶಾಕ್
— H D Kumaraswamy (@hd_kumaraswamy) September 24, 2022
ವಿದ್ಯುತ್ ಸೋರಿಕೆ, ಕಳವು ತಡೆಯಲಾಗದ, ನವೀನ ತಂತ್ರಜ್ಞಾನ ಅಳವಡಿಸಿಕೊಳ್ಳದ ಬಿಜೆಪಿ ಸರ್ಕಾರ ಅದಕ್ಷತೆಯ ಆಡಂಬೋಲ. ಬಡವರನ್ನು ಸುಲಿದು ಬಿಸ್ನೆಸ್ ಕ್ಲಾಸಿನ ಜನರ ಜೇಬು ತುಂಬು ಎನ್ನುವುದು ಬಿಜೆಪಿ ತತ್ತ್ವ. ಅದನ್ನೇ ಕರ್ನಾಟಕದಲ್ಲೂ ಎಗ್ಗಿಲ್ಲದೆ ಮಾಡುತ್ತಿದೆ ಎಂದು ಹೆಚ್ಡಿಕೆ ಟೀಕಿಸಿದರು. ಇದನ್ನೂ ಓದಿ: ಆಪ್ ಸರ್ಕಾರದ ವಿರುದ್ಧ ಎಲ್ಜಿ ವಾರ್ – ಮನೀಷ್ ಸಿಸೋಡಿಯಾ ವಿರುದ್ಧ ತನಿಖೆಗೆ ಸೂಚನೆ