– ಉಕ್ಕು ವಲಯದ ಬೆಳವಣಿಗೆ, ಹೊಸ ಹೂಡಿಕೆಗಳ ಬಗ್ಗೆ ಸಚಿವದ್ವಯರ ಮಾತುಕತೆ
ನವದೆಹಲಿ: ಉಕ್ಕು ಸಚಿವಾಲಯದ ವಿವಿಧ ಅಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D.Kumaraswamy) ಅವರು ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಉಕ್ಕು ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಸಂಸತ್ತಿನಲ್ಲಿ ಕೇಂದ್ರದ ಹಣಕಾಸು ಸಚಿವರ ಕಚೇರಿಯಲ್ಲಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ ಅವರು, ಪ್ರಮುಖ ಅಭಿವೃದ್ಧಿ ಆದ್ಯತೆಗಳ ಕುರಿತು ವಿವರವಾದ ಚರ್ಚೆಗಳನ್ನು ನಡೆಸಿದರು. ಇದನ್ನೂ ಓದಿ: ಬೆಂಗಳೂರು – ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್ಗೆ ಕೇಂದ್ರದಿಂದ ಸಕರಾತ್ಮಕ ಸ್ಪಂದನೆ
ಉಕ್ಕು ಸಚಿವಾಲಯದ ಹೊಸ ಹೂಡಿಕೆಗಳು ಮತ್ತು ಈಗಾಗಲೇ ನಡೆಯುತ್ತಿರುವ ಯೋಜನೆಗಳನ್ನು ಬಗ್ಗೆ ಹಾಗೂ ಉಕ್ಕು ವಲಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಚಿವರ ಜತೆ ಸಮಾಲೋಚನೆ ನಡೆಸಲಾಯಿತು ಎಂದು ಸಚಿವ ಕುಮಾರಸ್ವಾಮಿ ತಿಳಿಸಿದ್ದಾರೆ.
ಸುಸ್ಥಿರ ಬೆಳವಣಿಗೆಯನ್ನು ಉತ್ತೇಜಿಸುವ ಮತ್ತು ವಿಕಸಿತ ಭಾರತ-2047 ದೃಷ್ಟಿಕೋನವನ್ನು ಮುನ್ನಡೆಸುವ ಭವಿಷ್ಯತ್ತಿನ ಕೇಂದ್ರದ ಆಯವ್ಯಯವನ್ನು ಮಂಡಿಸಿದ್ದಕ್ಕಾಗಿ ಹಣಕಾಸು ಸಚಿವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ ಎಂದು ಸಚಿವರು ಹೇಳಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ; ಹೆಚ್ಡಿಕೆ ಮಹತ್ವದ ಚರ್ಚೆ

