– ಕೆಲವೊಮ್ಮೆ ಕೊಟ್ಟು, ಬಿಟ್ಟು ನೋಡುತ್ತಾರೆ, ಅನುಭವದಿಂದ ಪಾಠ ಕಲಿತರೆ ಒಳ್ಳೆಯದು
ಬೆಂಗಳೂರು: ನಿನ್ನೆ ನಡೆದ ಘಟನೆ ಮುಂದಿಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಡಿಕೆ ಬ್ರದರ್ಸ್ ವಿರುದ್ಧ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ಮಾಡಿದ್ದಾರೆ.
ಮುಖ್ಯಮಂತ್ರಿಗಳ ಎದುರೇ ಕಾರ್ಯಕ್ರಮದಲ್ಲೇ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹಾಗೂ ಬಿಜೆಪಿಯ ಸಚಿವರ ನಡುವೆ ಜಟಾಪಟಿಯಾಗಿದೆ. ಸಿಎಂ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಸ್ಥಳೀಯರ ನಾಯಕರನ್ನು ಕಡೆಗಣಿಸಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿ ವೇದಿಕೆಯಲ್ಲೇ ಗಲಾಟೆ ಮಾಡಿದ್ದರು. ಈ ವಿಚಾರವಾಗಿ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Advertisement
Advertisement
ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ‘ಡಿಸೈನ್ ವೀರರಿಗೆ’ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಆಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ ಅಲ್ಲವೇ? ಎಂದು ಟ್ವೀಟ್ ಮಾಡುವ ಮೂಲಕವಾಗಿ ವಿರೋಧ ಪಕ್ಷದ ವಿರುದ್ಧವಾಗಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಮನಗರ ಶಾಂತಿಯ ಜಿಲ್ಲೆ, ಗೂಂಡಾ ರೀತಿಯ ವರ್ತನೆ ಮಾಡಿದ್ದು ತಪ್ಪು: ಎಚ್‍ಡಿಕೆ ಕಿಡಿ
Advertisement
ಹಾದಿ ತಪ್ಪಿದ ರಾಜಕಾರಣ ಬಹಳ ದಿನ ನಡೆಯಲ್ಲ. ಹಣ, ದರ್ಪ, ಧಮ್ಕಿ, ಧಿಮಾಕು ಇನ್ನು ಸಾಕು. ಜನ ಕೊಟ್ಟೂ ನೋಡುತ್ತಾರೆ, ಕೆಲವೊಮ್ಮೆ ಬಿಟ್ಟೂ ನೋಡುತ್ತಾರೆ. ಅನುಭವದಿಂದ ಪಾಠ ಕಲಿತರೆ ಒಳ್ಳೆಯದು. ಉಳಿದದ್ದು ಅವರಿಗೇ ಬಿಟ್ಟಿದ್ದು. 5/5
— H D Kumaraswamy (@hd_kumaraswamy) January 4, 2022
Advertisement
ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ. ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾ ನುಂಗಿ ನೀರು ಕುಡಿಯುತ್ತಿದ್ದಾರೆ ಎಂಬುದು ನನಗಿಂತ ಇಲ್ಲಿನ ಜನರಿಗೇ ಚೆನ್ನಾಗಿ ಗೊತ್ತು. ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ? ಆ ಕ್ಷಣ ಹತ್ತಿರ ಬಂದಿದೆಯೇನೋ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆಗೆ ಟಫ್‍ರೂಲ್ಸ್ ಅನ್ವಯ – ಬಿಜೆಪಿಯಿಂದ ಷಡ್ಯಂತ್ರ ಎಂದ ಕಾಂಗ್ರೆಸ್
ಹೌದು, ಹರದನಹಳ್ಳಿ ನನ್ನ ಜನ್ಮಸ್ಥಳ. ಬಿಡದಿ ನನ್ನ ಕರ್ಮಸ್ಥಳ. ಇದುವೇ ನನ್ನ ಪಾಲಿನ ಧರ್ಮಸ್ಥಳ. ಈ ಮಣ್ಣಲ್ಲಿಯೇ ನಾನು ಮಣ್ಣಾಗುವೆ ಎಂದು ಈಗಾಗಲೇ ಹೇಳಿದ್ದೇನೆ. ಇದರ ಹೊರತಾಗಿ ರಾಮನಗರಕ್ಕೆ ರಿಯಲ್ ಎಸ್ಟೇಟ್ ಮಾಡಲಿಕ್ಕೆ ನಾನು ಬಂದವನಲ್ಲ. 4/5
— H D Kumaraswamy (@hd_kumaraswamy) January 4, 2022
ನಾವು ಹಾಸನದಿಂದ ಬಂದಿದ್ದೇವೆ, ನಿಜ. ಇಲ್ಲಿನ ಜನ ನಮ್ಮನ್ನು ಮನೆ ಮಕ್ಕಳೆಂದು ಭಾವಿಸಿದ್ದಾರೆ. ನಾವೂ ಹಾಗೆಯೇ ನಡೆದುಕೊಂಡಿದ್ದೇವೆ. ಜನರ ಪ್ರೀತಿ, ಅಭಿಮಾನ, ನಮ್ಮ ದುಡಿಮೆ ಫಲವಾಗಿ ಜಿಲ್ಲೆಯಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಜನರೇ ನಮಗೆ ಅಧಿಕಾರ ನೀಡಿದ್ದಾರೆ. ಇದನ್ನೂ ಓದಿ: ಕಾರ್ಯಕ್ರಮದಲ್ಲಿ ಸಿಎಂ ಎದುರೇ ಡಿಕೆ ಸುರೇಶ್, ಅಶ್ವಥ್ ನಾರಾಯಣ ನಡುವೆ ಜಟಾಪಟಿ
ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ. ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾ ನುಂಗಿ ನೀರು ಕುಡಿಯುತ್ತಿದ್ದಾರೆ ಎಂಬುದು ನನಗಿಂತ ಇಲ್ಲಿನ ಜನರಿಗೇ ಚೆನ್ನಾಗಿ ಗೊತ್ತು. ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ? ಆ ಕ್ಷಣ ಹತ್ತಿರ ಬಂದಿದೆಯೇನೋ. 2/5
— H D Kumaraswamy (@hd_kumaraswamy) January 4, 2022
ಹೌದು, ಹರದನಹಳ್ಳಿ ನನ್ನ ಜನ್ಮಸ್ಥಳ. ಬಿಡದಿ ನನ್ನ ಕರ್ಮಸ್ಥಳ. ಇದುವೇ ನನ್ನ ಪಾಲಿನ ಧರ್ಮಸ್ಥಳ. ಈ ಮಣ್ಣಲ್ಲಿಯೇ ನಾನು ಮಣ್ಣಾಗುವೆ ಎಂದು ಈಗಾಗಲೇ ಹೇಳಿದ್ದೇನೆ. ಇದರ ಹೊರತಾಗಿ ರಾಮನಗರಕ್ಕೆ ರಿಯಲ್ ಎಸ್ಟೇಟ್ ಮಾಡಲಿಕ್ಕೆ ನಾನು ಬಂದವನಲ್ಲ ಎಂದು ವಾಗ್ದಾಳಿ ಮಾಡಿದ್ದರೆ.
ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ʼಡಿಸೈನ್ ವೀರರಿಗೆʼ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಆಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ! ಅಲ್ಲವೇ? 1/5
— H D Kumaraswamy (@hd_kumaraswamy) January 4, 2022
ಹಾದಿ ತಪ್ಪಿದ ರಾಜಕಾರಣ ಬಹಳ ದಿನ ನಡೆಯಲ್ಲ. ಹಣ, ದರ್ಪ, ಧಮ್ಕಿ, ಧಿಮಾಕು ಇನ್ನು ಸಾಕು. ಜನ ಕೊಟ್ಟೂ ನೋಡುತ್ತಾರೆ, ಕೆಲವೊಮ್ಮೆ ಬಿಟ್ಟೂ ನೋಡುತ್ತಾರೆ. ಅನುಭವದಿಂದ ಪಾಠ ಕಲಿತರೆ ಒಳ್ಳೆಯದು. ಉಳಿದದ್ದು ಅವರಿಗೇ ಬಿಟ್ಟಿದ್ದು ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.