Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಾವಿನ ಮನೆಯಲ್ಲಿ ಮತಫಸಲು ತೆಗೆಯುವ ನಿರ್ಲಜ್ಜ ನಡೆ ಅಸಹನೀಯ: ಹೆಚ್‌ಡಿಕೆ

Public TV
Last updated: February 23, 2022 12:01 pm
Public TV
Share
4 Min Read
KUMARASWAMY
SHARE

– ಅಧಿವೇಶನವನ್ನು ಹಳ್ಳ ಹಿಡಿಸಿದ್ದಕ್ಕೂ ಈ ಎಲ್ಲಾ ಪ್ರತಿಗಾಮಿ ಘಟನೆಗಳಿಗೆ ಸಂಬಂಧ ಇದೆ
– ಹಚ್ಚಹಸಿರಿನ ನಿರ್ಮಲ ಮಲೆನಾಡಿನಲ್ಲಿ ಹೊತ್ತಿ ಉರಿಯುತ್ತಿರುವ ದ್ವೇಷದಳ್ಳುರಿ‌ ಇಡೀ ರಾಜ್ಯಕ್ಕೇ ಶಾಪ

ಬೆಂಗಳೂರು : ಶಿವಮೊಗ್ಗ ಘಟನೆ ಮತ್ತು ಹಿಜಬ್‌ ಪ್ರಕರಣದ ವಿಚಾರಕ್ಕೆ ಕೂಡಲೇ ರಾಜ್ಯಪಾಲ ಮಧ್ಯೆ ಪ್ರವೇಶ ಮಾಡಬೇಕು ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಆಗ್ರಹಿಸಿ ಸರಣಿ ಟ್ವೀಟ್ ಮಾಡಿದ್ದಾರೆ. ರಾಜ್ಯಪಾಲರು ಮಧ್ಯೆ ಪ್ರವೇಶ ಮಾಡುವಂತೆ ಒತ್ತಾಯ ಮಾಡಿದ್ದಾರೆ.

ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ ಎದುರಾಗಿದೆ. ಅಭಿವೃದ್ಧಿ, ಆವಿಷ್ಕಾರ, ಸೃಜನಶೀಲ, ವಿಜ್ಞಾನ-ತಂತ್ರಜ್ಞಾನಕ್ಕೆ ಹೆಸರಾದ ಕರ್ನಾಟಕ ಈಗ ವಿರುದ್ಧ ದಿಕ್ಕಿನಲ್ಲಿ ಜಗತ್ತಿನ ಗಮನ ಸೆಳೆದು ಕೃತಾರ್ಥವಾಗುತ್ತಿದೆ. ರಾಷ್ಟ್ರೀಯ ಪಕ್ಷಗಳೆರಡೂ ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿ ಇಟ್ಟು ವಿಕೃತ ಕೇಕೆ ಹಾಕುತ್ತಿವೆ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮೆಲಾನಿಯಾ ಟ್ರಂಪ್, ಕೇಜ್ರಿವಾಲ್ ಶಾಲೆಯನ್ನು ಮಾತ್ರ ನೋಡಬೇಕೆಂದಿದ್ದರು: ದೆಹಲಿ ಸಿಎಂ

ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ ಎದುರಾಗಿದೆ. ಅಭಿವೃದ್ಧಿ, ಆವಿಷ್ಕಾರ, ಸೃಜನಶೀಲ, ವಿಜ್ಞಾನ-ತಂತ್ರಜ್ಞಾನಕ್ಕೆ ಹೆಸರಾದ ಕರ್ನಾಟಕ ಈಗ ವಿರುದ್ಧ ದಿಕ್ಕಿನಲ್ಲಿ ಜಗತ್ತಿನ ಗಮನ ಸೆಳೆದು ಕೃತಾರ್ಥವಾಗುತ್ತಿದೆ. ರಾಷ್ಟ್ರೀಯ ಪಕ್ಷಗಳೆರಡೂ ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿ ಇಟ್ಟು ʼವಿಕೃತ ಕೇಕೆʼ ಹಾಕುತ್ತಿವೆ. 1/8

— H D Kumaraswamy (@hd_kumaraswamy) February 23, 2022

ಶಿಕ್ಷಣದ ಕಾಶಿ ಕರ್ನಾಟಕದ ಶಾಲೆ-ಕಾಲೇಜುಗಳಲ್ಲಿ ಸಂಘರ್ಷದ ವಾತಾವರಣ ಸೃಷ್ಟಿಸಿ ಮಕ್ಕಳಲ್ಲಿ ದ್ವೇಷದ ವಿಷವುಕ್ಕಿಸಲಾಗುತ್ತಿದೆ. ಎರಡು ವರ್ಷದಿಂದ ಕೋವಿಡ್‌ ಹೊಡೆತದಿಂದ ಮಲಗಿರುವ ವಿದ್ಯಾರಂಗವನ್ನು ಸರ್ವನಾಶ ಮಾಡುವ ಹುನ್ನಾರವಷ್ಟೇ ಇದು. ಬಡವರ ಮಕ್ಕಳು ಓದಿ ವಿದ್ಯಾವಂತರಾಗಬಾರದೇ? ಎಂದು ಪ್ರಶ್ನೆ ಮಾಡಿದ್ದಾರೆ.

ಶಿಕ್ಷಣದ ಕಾಶಿ ಕರ್ನಾಟಕದ ಶಾಲೆ-ಕಾಲೇಜುಗಳಲ್ಲಿ ಸಂಘರ್ಷದ ವಾತಾವರಣ ಸೃಷ್ಟಿಸಿ ಮಕ್ಕಳಲ್ಲಿ ದ್ವೇಷದ ವಿಷವುಕ್ಕಿಸಲಾಗುತ್ತಿದೆ. ಎರಡು ವರ್ಷದಿಂದ ಕೋವಿಡ್‌ ಹೊಡೆತದಿಂದ ಮಲಗಿರುವ ವಿದ್ಯಾರಂಗವನ್ನು ಸರ್ವನಾಶ ಮಾಡುವ ಹುನ್ನಾರವಷ್ಟೇ ಇದು.
ಬಡವರ ಮಕ್ಕಳು ಓದಿ ವಿದ್ಯಾವಂತರಾಗಬಾರದೇ? 2/8

— H D Kumaraswamy (@hd_kumaraswamy) February 23, 2022

ಎರಡೂ ರಾಷ್ಟ್ರೀಯ ಪಕ್ಷಗಳು ರಾಜ್ಯಾದ್ಯಂತ ರಾಜಕೀಯ ಕೊರೊನಾವನ್ನು ಹಬ್ಬಿಸುತ್ತಿವೆ. ಆ ಮೂಲಕ ಜನರ ಮನಸ್ಸುಗಳನ್ನು ಹಾಳು ಮಾಡುತ್ತಿವೆ. ಈ ಮಹಾಮಾರಿಗೆ ಲಸಿಕೆ ಇಲ್ಲ. ಜನರು ಈ ಹುನ್ನಾರವನ್ನು ಅರ್ಥ ಮಾಡಿಕೊಂಡರೆ ಒಳ್ಳೆಯದು ಎಂದು ಕಿವಿಮಾತು ಹೇಳಿದ್ದಾರೆ.  ಇದನ್ನೂ ಓದಿ: ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಕಹಳೆ – ರಷ್ಯಾ ಮೇಲೆ ಹಣಕಾಸು ಸೇರಿ ವಿವಿಧ ನಿರ್ಬಂಧ ಹೇರಿದ ಅಮೆರಿಕ!

ಎರಡೂ ರಾಷ್ಟ್ರೀಯ ಪಕ್ಷಗಳು ರಾಜ್ಯಾದ್ಯಂತ ʼರಾಜಕೀಯ ಕೊರೊನಾʼವನ್ನು ಹಬ್ಬಿಸುತ್ತಿವೆ. ಆ ಮೂಲಕ ಜನರ ಮನಸ್ಸುಗಳನ್ನು ಹಾಳು ಮಾಡುತ್ತಿವೆ. ಈ ಮಹಾಮಾರಿಗೆ ಲಸಿಕೆ ಇಲ್ಲ. ಜನರು ಈ ಹುನ್ನಾರವನ್ನು ಅರ್ಥ ಮಾಡಿಕೊಂಡರೆ ಒಳ್ಳೆಯದು. 3/8

— H D Kumaraswamy (@hd_kumaraswamy) February 23, 2022

ಅಧಿಕೃತ ಪ್ರತಿಪಕ್ಷದ ಸ್ವಪ್ರತಿಷ್ಠೆ, ಆಡಳಿತ ಪಕ್ಷದ ಅಸಮರ್ಥತೆಗೆ ವಿಧಾನ ಕಲಾಪ ಆಪೋಶನವಾಯಿತು. ನಾನು ಹೊಡೆದಂಗೆ ಮಾಡುತ್ತೇನೆ. ನೀನು ಅತ್ತಂಗೆ ಮಾಡು ಎನ್ನುವಂತೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಕುಮ್ಮಕ್ಕಾಗಿ ಕಲಾಪಕ್ಕೆ ಕುಣಿಕೆ ಬಿಗಿದು ಜನರ ಆಶೋತ್ತರಗಳನ್ನು ಸದನದಲ್ಲೇ ಸಮಾಧಿ ಮಾಡಿದವು.ನಿಗದಿತ ವೇಳಾಪಟ್ಟಿಗಿಂತ 3 ದಿನ ಮೊದಲೇ ಮುಗಿದ ಅಧಿವೇಶನದಲ್ಲಿ ಆರೂವರೆ ಕೋಟಿ ಕನ್ನಡಿಗರಿಗೆ ಸೊನ್ನೆ ಸುತ್ತಲಾಗಿದೆ. ಜನಪ್ರತಿನಿಧಿಗಳ ಕೇವಲ ಟಿಎ-ಡಿಎಗಾಗಿ ಮತ್ತು ವೇತನ, ಭತ್ಯೆ ಏರಿಸಿಕೊಳ್ಳಲಷ್ಟೇ ಅಧಿವೇಶನ ನಡೆದಿದೆ. ಜನರು ಏನೆಂದುಕೊಂಡಾರು? ಎಂಬ ಕನಿಷ್ಠ ಭಯವೂ ಇಲ್ಲದ ಆತ್ಮವಂಚನೆಯ ಪರಾಕಾಷ್ಠೆ ಇದು ಎಂದು ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಟಿವಿ ಚರ್ಚೆಗೆ ಮೋದಿ ಆಹ್ವಾನಿಸಿದ್ದ ಪಾಕ್ ಪ್ರಧಾನಿಗೆ ಖಡಕ್ ಉತ್ತರ ಕೊಟ್ಟ ಶಶಿ ತರೂರ್

ಅಧಿಕೃತ ಪ್ರತಿಪಕ್ಷದ ಸ್ವಪ್ರತಿಷ್ಠೆ, ಆಡಳಿತ ಪಕ್ಷದ ಅಸಮರ್ಥತೆಗೆ ವಿಧಾನ ಕಲಾಪ ಆಪೋಶನವಾಯಿತು. ʼನಾನು ಹೊಡೆದಂಗೆ ಮಾಡುತ್ತೇನೆ, ನೀನು ಅತ್ತಂಗೆ ಮಾಡುʼ ಎನ್ನುವಂತೆ ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಕುಮ್ಮಕ್ಕಾಗಿ ʼಕಲಾಪಕ್ಕೆ ಕುಣಿಕೆʼ ಬಿಗಿದು ಜನರ ಆಶೋತ್ತರಗಳನ್ನು ಸದನದಲ್ಲೇ ಸಮಾಧಿ ಮಾಡಿದವು. 4/8

— H D Kumaraswamy (@hd_kumaraswamy) February 23, 2022

ಹಿಜಬ್, ಕೇಸರಿ ಶಾಲು ಮತ್ತು ಶಿವಮೊಗ್ಗದಲ್ಲಿ ನಡೆದ ಯುವಕನ ಕೊಲೆ.ಇವೆಲ್ಲಾ ಯಾರಿಂದ, ಯಾರಿಗಾಗಿ ನಡೆಯುತ್ತಿವೆ? ಈ ಟೂಲ್ʼಕಿಟ್ ರೂವಾರಿಗಳು ಯಾರು? ಅಧಿವೇಶನವನ್ನು ಹಳ್ಳ ಹಿಡಿಸಿದ್ದಕ್ಕೂ ಈ ಎಲ್ಲಾ ಪ್ರತಿಗಾಮಿ ಘಟನೆಗಳಿಗೆ ಸಂಬಂಧ ಇದೆ ಎನ್ನುವ ಅನುಮಾನ ನನ್ನದು ಎಂದಿದ್ದಾರೆ.

ನಿಗದಿತ ವೇಳಾಪಟ್ಟಿಗಿಂತ 3 ದಿನ ಮೊದಲೇ ಮುಗಿದ ಅಧಿವೇಶನದಲ್ಲಿ ಆರೂವರೆ ಕೋಟಿ ಕನ್ನಡಿಗರಿಗೆ ಸೊನ್ನೆ ಸುತ್ತಲಾಗಿದೆ. ಜನಪ್ರತಿನಿಧಿಗಳ ಕೇವಲ ಟಿಎ-ಡಿಎಗಾಗಿ ಮತ್ತು ವೇತನ, ಭತ್ಯೆ ಏರಿಸಿಕೊಳ್ಳಲಷ್ಟೇ ಅಧಿವೇಶನ ನಡೆದಿದೆ. ಜನರು ಏನೆಂದುಕೊಂಡಾರು? ಎಂಬ ಕನಿಷ್ಠ ಭಯವೂ ಇಲ್ಲದ ʼಆತ್ಮವಂಚನೆಯ ಪರಾಕಾಷ್ಠೆʼ ಇದು. 5/8

— H D Kumaraswamy (@hd_kumaraswamy) February 23, 2022

ಸತ್ಯವೇನೆಂಬುದು ಜನರಿಗೆ ಗೊತ್ತಾಗಬೇಕು. ಸಾವಿನ ಮನೆಯಲ್ಲಿ ಮತಫಸಲು ತೆಗೆಯುವ ನಿರ್ಲಜ್ಜ ನಡೆ ಅಸಹನೀಯ. ಶಾಂತಿಯನ್ನು ಕದಡಿದ ಪಾಪ ಸುಮ್ಮನೆ ಬಿಡುವುದಿಲ್ಲ. ಹಚ್ಚಹಸಿರಿನ ನಿರ್ಮಲ ಮಲೆನಾಡಿನಲ್ಲಿ ಹೊತ್ತಿ ಉರಿಯುತ್ತಿರುವ ದ್ವೇಷದಳ್ಳುರಿ‌ ಇಡೀ ರಾಜ್ಯಕ್ಕೇ ಶಾಪವಾಗಿ ಪರಿಣಮಿಸಲಿದೆ ಎಂದಿದ್ದಾರೆ.

ಸಾವಿನ ಮನೆಯಲ್ಲಿ ಮತಫಸಲು ತೆಗೆಯುವ ನಿರ್ಲಜ್ಜ ನಡೆ ಅಸಹನೀಯ. ಶಾಂತಿಯನ್ನು ಕದಡಿದ ಪಾಪ ಸುಮ್ಮನೆ ಬಿಡುವುದಿಲ್ಲ. ಹಚ್ಚಹಸರಿನ ನಿರ್ಮಲ ಮಲೆನಾಡಿನಲ್ಲಿ ಹೊತ್ತಿ ಉರಿಯುತ್ತಿರುವ ʼದ್ವೇಷದಳ್ಳುರಿʼ ಇಡೀ ರಾಜ್ಯಕ್ಕೇ ಶಾಪವಾಗಿ ಪರಿಣಮಿಸಲಿದೆ. 7/8

— H D Kumaraswamy (@hd_kumaraswamy) February 23, 2022

ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶ ಮಾಡಬೇಕು. ಅವರು ಯಾರ ಕೈಗೊಂಬೆಯೂ ಆಗಬಾರದು ಎಂದು ನಾನು ಮತ್ತೊಮ್ಮೆ ಆಗ್ರಹಿಸುತ್ತೇನೆ. ಶಾಂತಿ-ಭದ್ರತೆ ನಿರ್ವಹಣೆಯಲ್ಲಿ ವಿಫಲವಾಗಿರುವ ಸರಕಾರಕ್ಕೆ ರಾಜ್ಯಪಾಲರು ಕಿವಿ ಹಿಂಡಲೇಬೇಕು ಎಂದು ಒತ್ತಾಯ ಮಾಡಿದ್ದಾರೆ.

TAGGED:bengaluruh d kumaraswamyಶಿವಮೊಗ್ಗಹಿಜಬ್ಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Abhiman Studio
ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ – ಅಭಿಮಾನಿಗಳಿಂದ ತೀವ್ರ ಆಕ್ರೋಶ
Bengaluru City Cinema Districts Karnataka Latest Main Post Sandalwood
Lankasura film team gave good news Vinod Prabhakar 1
ಮಾದೇವ ನಂತರ ಲಂಕಾಸುರನಾಗಿ ಮರಿ ಟೈಗರ್ ಅಬ್ಬರ
Cinema Latest
Manoranjan Ravichandran New Movie
ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾಗೆ ಮುಹೂರ್ತ
Cinema Latest Sandalwood Top Stories
Actor Milind
`ಅನ್‌ಲಾಕ್ ರಾಘವ’ ಖ್ಯಾತಿಯ ಮಿಲಿಂದ್‌ಗೆ ಲಾಟ್ರಿ; ನಾಲ್ಕು ಚಿತ್ರಗಳಿಗೆ ಸಹಿ ಮಾಡಿದ ನಟ
Cinema Latest Sandalwood Top Stories
Kantara Chapter 1 First look of Kanakavati Rukmini Vasanth unveiled on Varamahalakshmi
ಕಾಂತಾರ ಚಾಪ್ಟರ್ 1| ಕನಕವತಿಯ ಮೊದಲ ನೋಟ ವರಮಹಾಲಕ್ಷ್ಮಿಯಂದು ಅನಾವರಣ
Cinema Latest Top Stories

You Might Also Like

R Ashok 1
Bengaluru City

ರಾಹುಲ್‌ ಗಾಂಧಿಯದ್ದು ಆಟಂ ಬಾಂಬ್‌ ಅಲ್ಲ, ಟುಸ್‌ ಪಟಾಕಿ: ಆರ್‌.ಅಶೋಕ್ ಲೇವಡಿ

Public TV
By Public TV
7 minutes ago
nirmala sitharaman budget
Latest

ಆದಾಯ ತೆರಿಗೆ ಮಸೂದೆ-2025 ಹಿಂಪಡೆದ ಕೇಂದ್ರ – ಆ.11ರಂದು ಹೊಸ ಆವೃತ್ತಿ ಪರಿಚಯ

Public TV
By Public TV
29 minutes ago
trump modi
Latest

ಅಮೆರಿಕದ ಶಸ್ತ್ರಾಸ್ತ್ರ, ವಿಮಾನ ಖರೀದಿಸುವ ಯೋಜನೆ ಸ್ಥಗಿತಗೊಳಿಸಿಲ್ಲ: ಭಾರತದ ರಕ್ಷಣಾ ಸಚಿವಾಲಯ ಸ್ಪಷ್ಟನೆ

Public TV
By Public TV
36 minutes ago
Sanju Samson
Cricket

CSKಗೆ ಗುಡ್‌ಬೈ ಹೇಳಲು ಅಶ್ವಿನ್ ನಿರ್ಧಾರ – ಚೆನ್ನೈ ಸೂಪರ್‌ ಕಿಂಗ್ಸ್‌ ಸೇರಲು ಸಂಜು ಕಾತರ?

Public TV
By Public TV
45 minutes ago
Davanagere Accident
Crime

ದಾವಣಗೆರೆ | ಸ್ಕೂಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ – ಆರ್‌ಟಿಓ ಅಧೀಕ್ಷಕ ಸಾವು

Public TV
By Public TV
1 hour ago
CHALUVARAYASWAMY
Bengaluru City

ಕೃಷಿ, ತೋಟಗಾರಿಕೆ ಉತ್ಪನ್ನಗಳಿಗೆ ಬೆಂಬಲ ಬೆಲೆ; ರೈತರಿಗೆ ಸಿಗಲಿದೆ 8 ಸಾವಿರ ಕೋಟಿ: ಚಲುವರಾಯಸ್ವಾಮಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?