ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೆಗೌಡರ (H.D.Devegowda) ಕುಟುಂಬ, ಜಾತ್ಯತೀತ ಜನತಾದಳ (JDS) ಹಾಗೂ ಪಂಚರತ್ನ ಯೋಜನೆಗಳ ಬಗ್ಗೆ ಲಘುವಾಗಿ ಮಾತನಾಡಿರುವ ಬಿಜೆಪಿ (BJP) ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ (B.L.Santhosh) ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಆಕ್ರೋಶ ವ್ಯಕ್ತಪಡಿಸಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯಿಸಿದ ಅವರು, ಅವನ್ಯಾರೋ ಜೋಳಿಗೆ ಇಡ್ಕೊಂಡು ಓಡಾಡೋನು ಏನೋ ಹೇಳಿದ್ದಾನೆ. ಕರ್ನಾಟಕಕ್ಕೂ ನಿನಗೂ ಏನ್ ಸಂಬಂಧ. ಕರ್ನಾಟಕಕ್ಕೆ ನಿನ್ನ ಕೊಡುಗೆ ಏನು ಎಂದು ಸಂತೋಷ್ ಅವರನ್ನು ಏಕವಚನದಲ್ಲೇ ಪ್ರಶ್ನಿಸಿದರು. ಇದನ್ನೂ ಓದಿ: ಬೆರಕೆ ಅಂದ್ರೆ ಏನು? ಆ ಸಿ.ಟಿ ರವಿಗೆ ಸದ್ಬುದ್ಧಿ ಇಲ್ಲ – ಸಿದ್ದರಾಮಯ್ಯ
Advertisement
Advertisement
ಮಿಸ್ಟರ್ ಸಂತೋಷ್, ಲೂಟಿ ದರೋಡೆ ಮಾಡಿ ಕರ್ನಾಟಕ ಹಣವನ್ನ ಕೊಂಡೊಯ್ದಿದ್ದೀರಾ. ಸಂತೋಷವಾಗಿದ್ದೀರಂತೆ ಲೂಟಿ ಹೊಡೆದು. ರಾಜ್ಯದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಮಾಡುವವರು, ವಾಮಾಚಾರ ಮಾಡುವವರಿಂದ ಹಣ ತೆಗೆದುಕೊಂಡು ಅಪರೇಶನ್ ಕಮಲ ಮಾಡಿ ನಮ್ಮ ಸರ್ಕಾರ ತೆಗೆದಿರಿ ಎಂದು ಸಂತೋಷ್ ವಿರುದ್ಧ ಕಿಡಿಕಾರಿದರು.
Advertisement
ಪ್ರಧಾನಿಗಳ ಬಳಿ ಕೇಳಿ, ನಮ್ಮ ಕುಟುಂಬ ಏನು ಅಂತ. ನಮ್ಮ ಮನೆತನ, ಮಾಜಿ ಪ್ರಧಾನಿಗಳೇ ಹೇಳ್ತಾರೆ. ಲಘುವಾಗಿ ನಮ್ಮ ಪಕ್ಷದ ಬಗ್ಗೆ ಮಾತನಾಡಬೇಡಿ. 2023ಕ್ಕೆ ನಿಮ್ಮ ಪರಿಸ್ಥಿತಿ ಏನಾಗಿರುತ್ತದೆ ಎನ್ನುವುದನ್ನು ಒಮ್ಮೆ ಊಹೆ ಮಾಡಿಕೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
Advertisement
ನಿಮ್ಮದು 40% ಸರ್ಕಾರ. ನಮ್ಮ ಬಗ್ಗೆ ಮಾತಾಡಲು ನೈತಿಕತೆ ನಿಮಗೆ ಇಲ್ಲ. ಮೋದಿ ಹೆಸರಿನಲ್ಲಿ ಹೊಟ್ಟೆಪಾಡು ನೋಡ್ಕೊಂಡಿರೋರು ನೀವು. ನಾನು ಸರ್ಕಾರ ಮಾಡೋಣ ಎಂದು ನಿಮ್ಮ ಮನೆ ಬಾಗಿಲಿಗೆ ಬಂದಿರಲಿಲ್ಲ. ಯಾರು ಯಾರ ಮನೆ ಬಾಗಿಲಿಗೆ ಬಂದಿದ್ದರು ಎನ್ನುವುದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತು. ನಮ್ಮ ಪಕ್ಷದ ಬಗ್ಗೆ ಲಘುವಾಗಿ ಮಾತಾಡ್ಬೇಡಿ ಮಿಸ್ಟರ್ ಅಶೋಕ್, ಮಿಸ್ಟರ್ ಸಂತೋಷ್ ಎಂದು ಸಂತೋಷ್ ಹಾಗೂ ಕಂದಾಯ ಸಚಿವ ಆರ್.ಅಶೋಕ್ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಒಡೆತನ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ
ಬಿಜೆಪಿಯವರು ದರೋಡೆಕೋರರು, ಲೂಟಿಕೋರರು. ಇಂಥ ಬಿಜೆಪಿಯವರ ಜೊತೆ ಸೇರಿ ನಾನು ಸರ್ಕಾರ ನಡೆಸುವುದಕ್ಕೆ ಆಗುತ್ತಾ? ಪಂಚರತ್ನ ಯೋಜನೆಗಳನ್ನು ಜಾರಿ ಮಾಡುವುದಕ್ಕೆ ಆಗುತ್ತಾ? 2023ರ ಚುನಾವಣೆ ನಂತರ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತದೆ. ಆಗ ಬಿಜೆಪಿಯವರು ನಮ್ಮ ಮುಂದೆ ಅರ್ಜಿ ಹಿಡಿದು ಬರುತ್ತಾರೆ ನೋಡೋಣ. ಸಮಾಜವನ್ನು ಒಡೆಯುವ, ಜನರ ನಡುವೆ ದ್ವೇಷ ಭಿತ್ತುವ ಇಂಥವರ ಜತೆ ಸರ್ಕಾರ ರಚನೆ ಮಾಡಲು ಸಾಧ್ಯವೇ ಎಂದು ಖಾರವಾಗಿ ಪ್ರಶ್ನಿಸಿದರು.
ಸಚಿವ ಅಶೋಕ್ ಮೇಲೆ ಹರಿಹಾಯ್ದ ಕುಮಾರಸ್ವಾಮಿ ಅವರು, ಬಾಯಿಗೆ ಬಂದ ಹಾಗೆ ಮಾತನಾಡಬೇಡಿ. ಚುನಾವಣೆ ಆದ ಮೇಲೆ ಮಾತನಾಡಿ ಎಂದು ಟಾಂಗ್ ಕೊಟ್ಟರು. ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಭೋಜೆಗೌಡ, ಮಾಜಿ ಸದಸ್ಯ ಹೆಚ್.ಎಂ.ರಮೇಶಗೌಡ ಮುಂತಾದವರು ಉಪಸ್ಥಿತರಿದ್ದರು. ಇದನ್ನೂ ಓದಿ: ಜೆಡಿಎಸ್‌ನ 93 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್?