ತ್ರಿಭಾಷಾ ಸೂತ್ರಕ್ಕೆ ಸಮಾಧಿ ಕಟ್ಟಲು ಕೇಂದ್ರ ಸರ್ಕಾರ ಹೊರಟಿದೆ – ಹೆಚ್‌ಡಿಕೆ ಆಕ್ರೋಶ

Public TV
1 Min Read
KUMARASWAMY

ಬೆಂಗಳೂರು: ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ (SSC) 20,000 ಹುದ್ದೆ ಆಯ್ಕೆಗೆ ಹಿಂದಿ-ಇಂಗ್ಲೀಷ್‌ನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ. ಆಯ್ಕೆಯಾದ ಅಭ್ಯರ್ಥಿಯನ್ನು ಯಾವ ರಾಜ್ಯಕ್ಕಾದರೂ ಕಳುಹಿಸಬಹುದು. ಕನ್ನಡ ಸೇರಿ ಯಾವುದೇ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶವಿಲ್ಲ. ಹಿಂದಿ ಹೇರಿಕೆ (Hindi Imposition), ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy) ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರಕ್ಕೆ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಎನ್ನುವ ಕೆಟ್ಟ ಹಠವಿದ್ದಂತೆ ಇದೆ. ಕನ್ನಡವೂ ಸೇರಿ ದಕ್ಷಿಣದ ಪ್ರಾದೇಶಿಕ ಭಾಷೆಗಳ ಬಗ್ಗೆ ಇನ್ನಿಲ್ಲದ ಅಸಹನೆ, ದ್ವೇಷ ಮೈಗೂಡಿಸಿಕೊಂಡಿದೆ ಎನಿಸುತ್ತಿದೆ. ತ್ರಿಭಾಷಾ ಸೂತ್ರಕ್ಕೆ ಹೇಗಾದರೂ ಸಮಾಧಿ ಕಟ್ಟಲೇಬೇಕೆಂದು ಹೊರಟಂತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಎಸ್‌.ಎಂ ಕೃಷ್ಣ ಸರ್ಕಾರದ ಸಂಪುಟದಲ್ಲಿ ಸಚಿವರಾಗಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನ

ಒಕ್ಕೂಟ ತತ್ವದಲ್ಲಿ ಆಡಳಿತ ನಡೆಸುವ ಪಕ್ಷಕ್ಕೇ ಒಪ್ಪಿಗೆ ಇಲ್ಲ ಎನ್ನುವುದನ್ನು ಇದು ತೋರಿಸುತ್ತಿದೆ. ಹಿಂದಿ ಭಾಷಿಗರನ್ನು ಕರ್ನಾಟಕ ಹಾಗೂ ದಕ್ಷಿಣ ಭಾರತದಲ್ಲಿ ತುಂಬುವ ದುಸ್ಸಾಹಸವಷ್ಟೇ ಇದು ಎಂದು ಕಿಡಿಕಾರಿದ್ದಾರೆ.

ಈ ವಿಷಯದಲ್ಲಿ ನಮ್ಮ 2 ಬೇಡಿಕೆಗಳಿವೆ. ಕನ್ನಡದಲ್ಲೂ ಪರೀಕ್ಷೆ ನಡೆಸಬೇಕು. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಬೇಕು. ಈ ಬದಲಾವಣೆ ನಂತರವಷ್ಟೇ ಸಿಬ್ಬಂದಿ ಆಯ್ಕೆ ಆಯೋಗ ಪರೀಕ್ಷೆ ನಡೆಸಬೇಕು ಎಂದು ಹೆಚ್‌ಡಿಕೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಪಾದಯಾತ್ರೆಯಲ್ಲಿ ರಾಹುಲ್-ಸಿದ್ದು ರನ್ನಿಂಗ್ ರೇಸ್

ಕನ್ನಡದಲ್ಲೇ ಪರೀಕ್ಷೆ ನಡೆಸಿದರೆ ಕರ್ನಾಟಕದ ಅನೇಕ ಪ್ರತಿಭಾವಂತ ಯುವಜನರು ಆಯ್ಕೆ ಆಗಲು ಅನುಕೂಲವಾಗುತ್ತದೆ. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರ ನೇಮಕವಾದರೆ, ಕರ್ನಾಟಕದ ಜನರಿಗೆ ಕನ್ನಡದಲ್ಲಿ ಸೇವೆ ದೊರೆಯುತ್ತದೆ. ತಪ್ಪಿದರೆ ಕೇಂದ್ರವು ಕನ್ನಡಿಗರ ಆಗ್ರಹಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *