Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ – ಈ ಅಪಮಾನಕ್ಕೆ ಸಿಎಂ, ಡಿಸಿಎಂ ಹೊಣೆಗಾರರು: ಹೆಚ್‌ಡಿಕೆ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ – ಈ ಅಪಮಾನಕ್ಕೆ ಸಿಎಂ, ಡಿಸಿಎಂ ಹೊಣೆಗಾರರು: ಹೆಚ್‌ಡಿಕೆ ಕಿಡಿ

Bengaluru City

ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ – ಈ ಅಪಮಾನಕ್ಕೆ ಸಿಎಂ, ಡಿಸಿಎಂ ಹೊಣೆಗಾರರು: ಹೆಚ್‌ಡಿಕೆ ಕಿಡಿ

Public TV
Last updated: September 18, 2025 2:29 pm
Public TV
Share
2 Min Read
H.D.Kumaraswamy
SHARE

– ಚುನಾವಣಾ ಗ್ಯಾರಂಟಿಗಳಿಗೆ ರಾಜ್ಯದ ಅಭಿವೃದ್ಧಿ ಬಲಿಯಾಗಿ ಗ್ರೇಟರ್ ಬೆಂಗಳೂರು ಗಬ್ಬೆದ್ದು ನಾರುತ್ತಿದೆ: ಕೇಂದ್ರ ಸಚಿವ

ಬೆಂಗಳೂರು: ಗ್ರೇಟರ್‌ ಬೆಂಗಳೂರು ಗುಂಡಿಮಯ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy) ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಾಕಿರುವ ಹೆಚ್‌ಡಿಕೆ, ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಧಾರಾಕಾರ ಮಳೆ; ಹಲವೆಡೆ ಅವಾಂತರ – ರಸ್ತೆಗೆ ಉರುಳಿದ ಮರ, ವಿದ್ಯುತ್‌ ಕಂಬ

ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರು ಈ ಅಪಮಾನಕ್ಕೆ ಹೊಣೆಗಾರರು. ಬೆಂಗಳೂರು ಮತ್ತು ಕರ್ನಾಟಕ ಇವತ್ತು ಅದಕ್ಷರು, ಭ್ರಷ್ಟರ ಕೈಯ್ಯಲ್ಲಿ ಸಿಕ್ಕಿ ನರಳುತ್ತಿವೆ.…

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) September 18, 2025

ಪೋಸ್ಟ್‌ನಲ್ಲಿ ಏನಿದೆ?
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಇಬ್ಬರು ಈ ಅಪಮಾನಕ್ಕೆ ಹೊಣೆಗಾರರು. ಬೆಂಗಳೂರು ಮತ್ತು ಕರ್ನಾಟಕ ಇವತ್ತು ಅದಕ್ಷರು, ಭ್ರಷ್ಟರ ಕೈಯ್ಯಲ್ಲಿ ಸಿಕ್ಕಿ ನರಳುತ್ತಿವೆ. ಹೆಜ್ಜೆ ಹೆಜ್ಜೆಗೂ ಸಾವಿನ ಗುಂಡಿ. ಕಂಡೆಲ್ಲೆಲ್ಲ ಕಸದ ರಾಶಿ. ಗ್ರೇಟರ್ ಬೆಂಗಳೂರು ಎಂದರೆ ಇದೇನಾ? ಜಿಬಿಎ ಏನು ಮಾಡುತ್ತಿದೆ? ಜನರ ತೆರಿಗೆ ದುಡ್ಡು ನುಂಗಿ ಗೊರಕೆ ಹೊಡೆಯುತ್ತಿದೆಯಾ?

ಬೆಂಗಳೂರಿನಲ್ಲಿ ಆಡಳಿತದ ಘೋರ ವೈಫಲ್ಯವಾಗಿದೆ ಎಂದು ಉದ್ಯಮಿಗಳು ದೂರಿರುವುದು ಸರಿ ಇದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಉದ್ಯಮಿಗಳು ಸರ್ಕಾರದ ವೈಫಲ್ಯವನ್ನು ಇಷ್ಟು ಕಠಿಣವಾಗಿ ಎತ್ತಿ ತೋರಿಸಿರುವುದು ಇತಿಹಾಸದಲ್ಲಿ ಇದೇ ಮೊದಲು. ಈ ಸರ್ಕಾರಕ್ಕೆ ಎಳ್ಳಷ್ಟೂ ಸಂಕೋಚ, ಆತ್ಮಾಭಿಮಾನವಿಲ್ಲ. ಕನ್ನಡಿಗರ ಸ್ವಾಭಿಮಾನವನ್ನು ಗುಂಡಿಪಾಲು ಮಾಡಿದೆ. ಇದನ್ನೂ ಓದಿ: ಕೆಟ್ಟ ರಸ್ತೆಯಿಂದ ಬೆಂಗಳೂರು ತೊರೆಯಲು ಮುಂದಾದ 10,900 ಕೋಟಿ ಮೌಲ್ಯದ BlackBuck ಕಂಪನಿ

ತೆರಿಗೆ ಹಾಕುವುದರಲ್ಲಿ ಸರ್ಕಾರದ್ದು ರಾಕೆಟ್ ವೇಗ. ಗುಂಡಿ ಮುಚ್ಚುವುದರಲ್ಲಿ ಕೊನೇಪಕ್ಷ ಆಮೆ ವೇಗವೂ ಇಲ್ಲ. ಕೊಳ್ಳೆ ಹೊಡೆಯುವುದರಲ್ಲಿ ಇರುವ ಉನ್ಮಾದ, ಅಭಿವೃದ್ಧಿಯತ್ತ ವಿಪರೀತ ಉಪೇಕ್ಷೆ. ಚುನಾವಣಾ ಗ್ಯಾರಂಟಿಗಳಿಗೆ ರಾಜ್ಯದ ಅಭಿವೃದ್ಧಿ ಬಲಿಯಾಗಿ ಗ್ರೇಟರ್ ಬೆಂಗಳೂರು ಗಬ್ಬೆದ್ದು ನಾರುತ್ತಿದೆ! ಗುಂಡಿ ಮುಚ್ಚುವುದಕ್ಕೆ ಬಿಡಿಗಾಸಿಲ್ಲದ ಸರ್ಕಾರ ಜನರಿಂದ ಕಿತ್ತುಕೊಳ್ಳುತ್ತಿರುವ ತೆರಿಗೆ ಹಣ ಏನು ಮಾಡುತ್ತಿದೆ? ಅದು ಯಾರ ಕಿಸೆ ಸೇರುತ್ತಿದೆ? ಇದಕ್ಕೆ ಉತ್ತರ ಬೇಕು.

ಕಂಪನಿಗಳು ರಾಜ್ಯ ಸರ್ಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆರಾಜ್ಯಗಳತ್ತ ವಲಸೆ ಹೋಗುತ್ತಿವೆ. ಆ ರಾಜ್ಯಗಳು ಇಂಥ ಸಮಯಕ್ಕೇ ಕಾಯುತ್ತಾ ರಿಯಾಯ್ತಿ ಮೇಲೆ ರಿಯಾಯ್ತಿಗಳನ್ನು ನೀಡುತ್ತಿವೆ. ಭಂಡ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ. ಈ ಸರ್ಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ. ಇದನ್ನೂ ಓದಿ: ಬೆಂಗಳೂರಲ್ಲಿ ರಸ್ತೆ ಗುಂಡಿಗಳನ್ನ ಮುಚ್ಚಲು ಡೆಡ್‌ಲೈನ್‌ ಫಿಕ್ಸ್‌ ಮಾಡಿದ ಡಿಸಿಎಂ ಡಿಕೆಶಿ

ಕಂಪನಿಗಳಿಗೆ ನನ್ನ ಮನವಿ ಇಷ್ಟೇ;
ನೀವು ಬೆಂಗಳೂರು ಬಿಡುವುದು ಬೇಡ. ಈ ನಗರಕ್ಕೆ ಮಹಾನ್ ಪರಂಪರೆ, ಹಿನ್ನೆಲೆ ಇದೆ. ಈ ಎಮ್ಮೆ ಚರ್ಮದ ಸರ್ಕಾರಕ್ಕೆ ಪಾಠ ಕಲಿಸುತ್ತೇವೆ. ನಿಮ್ಮ ಜತೆ ನಾವು, ಇಡೀ ಕರ್ನಾಟಕದ ಜನತೆ ಇದ್ದೇವೆ. ಹೋಗುತ್ತೇವೆ ಎನ್ನುವ ಮಾತನ್ನು ಮನಸ್ಸಿನಿಂದ ತೆಗೆದುಬಿಡಿ. ನಾವೆಲ್ಲರೂ ಸೇರಿ ಬೆಂಗಳೂರು ನಗರವನ್ನು ಬದಲಿಸೋಣ. We will Make Bengaluru Great Again ಎಂದು ಹೆಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

TAGGED:Bengaluru Road Potholesh d kumaraswamyಬೆಂಗಳೂರು ರಸ್ತೆ ಗುಂಡಿಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

mohammed bin salman and trump
Latest

ಇರಾನ್‌ ಮೇಲೆ ದಾಳಿ ನಡೆಸಿ – ಟ್ರಂಪ್‌ಗೆ ಹಲವು ಬಾರಿ ಫೋನ್‌ ಮಾಡಿ ಒತ್ತಡ ಹೇರಿದ್ದ ಸೌದಿ

Public TV
By Public TV
9 minutes ago
iran
Latest

ಇರಾನ್‌ ದಾಳಿಗೆ ಅಮೆರಿಕದ ಮೂವರು ಸೈನಿಕರು ಸಾವು

Public TV
By Public TV
41 minutes ago
Strait of Hormuz closed india oil
Latest

ವಿಶ್ವದ ಪ್ರಮುಖ ತೈಲಮಾರ್ಗ ಹಾರ್ಮೂಜ್‌ ಜಲಸಂಧಿ ಬಂದ್‌ – ಭಾರತದ ಮೇಲೆ ಪರಿಣಾಮ ಏನು?

Public TV
By Public TV
1 hour ago
5 thousand people participated Hindu Virata procession in Bagalkote
Districts

ಬಾಗಲಕೋಟೆಯಲ್ಲಿ ವಿರಾಟ್‌ ಹಿಂದೂ ಶೋಭಾಯಾತ್ರೆ – 5 ಸಾವಿರ ಮಂದಿ ಭಾಗಿ

Public TV
By Public TV
2 hours ago
Dubai Kannadigas 2
Bengaluru City

ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ, ರಕ್ಷಣೆಗೆ ಸಹಾಯವಾಣಿ ಬಿಡುಗಡೆ

Public TV
By Public TV
2 hours ago
pm modi meeting
Latest

ಇಸ್ರೇಲ್‌-ಇರಾನ್‌ ಯುದ್ಧ; ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?