Connect with us

ಹೆಚ್‍ಡಿಕೆಗೆ ಕೊರೊನಾ ಸೋಂಕು

ಹೆಚ್‍ಡಿಕೆಗೆ ಕೊರೊನಾ ಸೋಂಕು

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿದೆ. ತಮ್ಮ ಕೋವಿಡ್ ವರದಿ ಪಾಸಿಟಿವ್ ಬರುತ್ತಲೇ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿರುವ ಕುಮಾರಸ್ವಾಮಿ ಅವರು, ತಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

ಕೆಲ ದಿನಗಳ ಹಿಂದೆ ಮಾಜಿ ಪ್ರಧಾನಿಗಳಾದ ದೇವೇಗೌಡರು ಮತ್ತು ಅವರ ಶ್ರೀಮತಿ ಚನ್ನಮ್ಮ ಅವರಿಗೂ ಸೋಂಕು ತಗುಲಿತ್ತು. ಇದೀಗ ಕುಮಾರಸ್ವಾಮಿ ಅವರಿಗೂ ಸೋಂಕು ತಗುಲಿದೆ. ನಿನ್ನೆಯಷ್ಟೆ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೂ ಕೊರೊನಾ ದೃಢಪಟ್ಟ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಯಡಿಯೂರಪ್ಪನವರ ಮೊಮ್ಮಗಳು ಸೌಂದರ್ಯ ಮತ್ತು ಪತಿ ಡಾ.ನಿರಂಜನ್ ಅವರಿಗೂ ಸೋಂಕು ತಗುಲಿದೆ. ಯಡಿಯೂರಪ್ಪನವರು ದಾಖಲಾದ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Advertisement
Advertisement
Advertisement