– ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು: ಸಿದ್ದರಾಮಯ್ಯ ಕಾಲೆಳೆದ ಕೇಂದ್ರ ಸಚಿವ
ಬೆಂಗಳೂರು: ಸಿಬಿಐ (CBI) ರಾಜ್ಯ ಪ್ರವೇಶಕ್ಕೆ ರಾಜ್ಯ ಸರ್ಕಾರದಿಂದ ನಿರ್ಬಂಧ ಮಾಡಿರೋ ವಿಚಾರಕ್ಕೆ ಸರ್ಕಾರದ ನಡೆಗೆ ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Advertisement
ಟ್ವೀಟ್‌ನಲ್ಲಿ ಏನಿದೆ?
ಶ್ರೀಮಾನ್ ಸಿದ್ದರಾಮಯ್ಯನವರೇ ನಿಮ್ಮ ಸಿದ್ವಿಲಾಸಕ್ಕೆ ಉಘೇಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ. ಇಂದು ಮುಡಾ ಹಗರಣದಿಂದ (MUDA Scam) ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ. Karma hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಧಾರ್ಮಿಕ ಮತಾಂತರವು ರಾಷ್ಟ್ರೀಯ ಮೌಲ್ಯ, ಸಾಂವಿಧಾನಿಕ ತತ್ವಗಳಿಗೆ ವಿರುದ್ಧ: ಉಪರಾಷ್ಟ್ರಪತಿ
Advertisement
ಶ್ರೀಮಾನ್ ಸಿದ್ದರಾಮಯ್ಯನವರೇ..
ನಿಮ್ಮ ‘ಸಿದ್ವಿಲಾಸ’ಕ್ಕೆ ಉಘೇಉಘೇ ಎನ್ನಲೇಬೇಕು.
ಅಂದು: ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ!
ಇಂದು: ಮೂಡಾಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇsss ಗತಿ!!
Karma Hit back ಎಂದರೇ ಇದೇ ಅಲ್ಲವೇ @siddaramaiah ನವರೇ?
ನಿಮ್ಮ ಗ್ರಹಚಾರಕ್ಕೆ…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 27, 2024
Advertisement
Advertisement
ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ಸಿದ್ದಾಪರಾದ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ. ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ. ಅದೇ ಈ ನೆಲದ ಕಾನೂನಿನ ಶಕ್ತಿ ಏನಂತೀರಿ? ಮುಡಾಸಿದ್ವಿಲಾಸ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಇಸ್ರೇಲ್ ವೈಮಾನಿಕ ದಾಳಿ – ಹಿಬ್ಜುಲ್ಲಾ ಡ್ರೋನ್ ಘಟಕದ ಮುಖ್ಯಸ್ಥನ ಹತ್ಯೆ