ರಾಮನಗರ: ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ರಾಜೀನಾಮೆ ನೀಡುತ್ತಾರೆ. ಚನ್ನಪಟ್ಟಣ ಕ್ಷೇತ್ರವನ್ನ ಉಳಿಸಿಕೊಳ್ತಾರೆ ಎಂದು ಚನ್ನಪಟ್ಟಣದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ (D.K.Suresh) ವ್ಯಂಗ್ಯವಾಡಿದ್ದಾರೆ.
ಚನ್ನಪಟ್ಟಣ (Channapatna) ಕೃತಜ್ಞತಾ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣಕ್ಕೆ ಇನ್ನೂ ಉಪಚುನಾವಣೆ ಘೋಷಣೆ ಆಗಿಲ್ಲ. ಯಾಕಂದ್ರೆ ಹಾಲಿ ಶಾಸಕರು ಇನ್ನೂ ರಾಜೀನಾಮೆ ನೀಡಿಲ್ಲ. ನಮಗೆ ವಿಶ್ವಾಸ ಇದೆ. ಹೆಚ್‌ಡಿಕೆ ಯಾವುದೇ ಕಾರಣಕ್ಕೂ ಚನ್ನಪಟ್ಟಣ ಬಿಟ್ಟು ಹೋಗಲ್ಲ. ಅವರಿಗೆ ಅಧಿಕಾರಕ್ಕಿಂತ ಕ್ಷೇತ್ರದ ಜನ, ಕಾರ್ಯಕರ್ತರು ಮುಖ್ಯ ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಬೆಂಗ್ಳೂರಲ್ಲಿ ಬೆಳಗ್ಗೆ 5ರಿಂದ ರಾತ್ರಿ 10ರ ವರೆಗೆ ಪಾರ್ಕ್‍ಗಳು ಓಪನ್: ಡಿಕೆಶಿ
Advertisement
Advertisement
ನಾನು ಸಾಕಷ್ಟು ಬಾರಿ ಅವರ ಮಾತುಗಳನ್ನ ಆಲಿಸಿದ್ದೇನೆ. ಚನ್ನಪಟ್ಟಣ, ರಾಮನಗರ ನನ್ನ ಎರಡು ಕಣ್ಣುಗಳು ಎಂದಿದ್ದರು. ಅಧಿಕಾರ ಇದ್ದಾಗ, ಇಲ್ಲದಿದ್ದಾಗ ಅವರ ಮಾತುಗಳನ್ನ ನೋಡಿದ್ದೇನೆ. ಅಲ್ಲದೇ ಅವರು ಹೃದಯವಂತರು ಕೂಡಾ. ಹಾಗಾಗಿ ಚನ್ನಪಟ್ಟಣ ಉಳಿಸಿಕೊಳ್ತಾರೆ ಎನ್ನುವ ವಿಶ್ವಾಸ ಇದೆ ಎಂದು ಲೇವಡಿ ಮಾಡಿದ್ದಾರೆ.
Advertisement
Advertisement
ಚನ್ನಪಟ್ಟಣ ಸ್ಪರ್ಧೆಗೆ ಕಾರ್ಯಕರ್ತರ ಒತ್ತಾಯ ವಿಚಾರ ಕುರಿತು ಮಾತನಾಡಿ, ಅವರು ರಾಜೀನಾಮೆ ಕೊಟ್ಟಮೇಲೆ ತಾನೆ ಉಪಚುನಾವಣೆ ವಿಚಾರ. ನಾನು ಈಗಾಗಲೇ ಸೋತಿದ್ದೇನೆ. ಜನ ನನ್ನನ್ನ ತಿರಸ್ಕಾರ ಮಾಡಿದ್ದಾರೆ. ಅಭ್ಯರ್ಥಿ ಆಯ್ಕೆ ಬಗ್ಗೆ ಹೈಕಮಾಂಡ್ ಹಾಗೂ ರಾಜ್ಯ ನಾಯಕರು ತೀರ್ಮಾನ ಮಾಡ್ತಾರೆ. ಅಚ್ಚರಿ ಅಭ್ಯರ್ಥಿಯನ್ನ ಚನ್ನಪಟ್ಟಣಕ್ಕೆ ಕೊಡ್ತಾರೆ ಎಂದು ಡಿ.ಕೆ.ಸುರೇಶ್ ತಿಳಿಸಿದ್ದಾರೆ. ಇದನ್ನೂ ಓದಿ: ಗುರಿ ಸಾಧಿಸದೇ ಇದ್ರೆ ಶಿಸ್ತು ಕ್ರಮ – ವಾಣಿಜ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ