ಹೆಚ್‌.ಡಿ.ರೇವಣ್ಣ ಎ1, ಪ್ರಜ್ವಲ್‌ ರೇವಣ್ಣ ಎ2 ಆರೋಪಿ – ಮನೆ ಕೆಲಸದಾಕೆಯಿಂದ ದೂರು

Public TV
3 Min Read
h.d.revanna prajwal revanna

– ಹೆಚ್‌.ಡಿ.ರೇವಣ್ಣ ವಿರುದ್ಧವೂ ಎಫ್‌ಐಆರ್‌ ದಾಖಲು

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ತಂದೆ ಹಾಗೂ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ (H.D.Revanna) ವಿರುದ್ಧವೂ ದೌರ್ಜನ್ಯ ಆರೋಪ ಕೇಳಿಬಂದಿದೆ. ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ದಾಖಲಿಸಿದ್ದಾರೆ.

ಹೊಳೆನರಸೀಪುರ (Holenarasipura) ನಗರ ಪೊಲೀಸ್‌ ಠಾಣೆಯಲ್ಲಿ ಇಬ್ಬರ ವಿರುದ್ಧ ದೂರು ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಹೆಚ್.ಡಿ.ರೇವಣ್ಣ ಎ1 ಮತ್ತು ಪ್ರಜ್ವಲ್‌ ರೇವಣ್ಣ ಎ2 ಆರೋಪಿಯಾಗಿದ್ದಾರೆ. 354 A, 354 D, 509 ಅಡಿ ಪ್ರಕರಣ ದಾಖಲಾಗಿದೆ. 2015 ರಲ್ಲಿ ಹೆಚ್.ಡಿ.ರೇವಣ್ಣ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ನೀಡಿದ್ದಾರೆ. ತಂದೆ ಮತ್ತು ಮಗನ ವಿರುದ್ಧ ಸಂತ್ರಸ್ತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಕೇಸ್ – ನೊಂದ ಮಹಿಳೆಯಿಂದ ಮಹಿಳಾ ಆಯೋಗಕ್ಕೆ ದೂರು

Prajwal Revanna

ಎಫ್‌ಐಆರ್‌ನಲ್ಲಿ ಏನಿದೆ?
ಹೆಚ್‌.ಡಿ.ರೇವಣ್ಣ ಅವರು ನನಗೆ ಹಾಸ್ಟೆಲ್‌ವೊಂದರಲ್ಲಿ ಅಡುಗೆ ಕೆಲಸ ಕೊಡಿಸಿದ್ದರು. 2013 ರಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಆಗಾಗ್ಗೆ ಮನೆಗೆ ಬರುವಂತೆ ಹೇಳುತ್ತಿದ್ದರು. ಭವಾನಿ ರೇವಣ್ಣ ನನ್ನ ಸೋದರತ್ತೆ ಮಗಳು. 2015 ರಲ್ಲಿ ರೇವಣ್ಣರ ಮಾತಿನಂತೆ ಹಾಸ್ಟೆಲ್‌ ಕೆಲಸಕ್ಕೆ ಸೇರಿಕೊಂಡಿದ್ದೆ. ಅದಾದ ನಾಲ್ಕು ವರ್ಷಗಳ ನಂತರ ಅವರ ಮೊದಲನೇ ಪುತ್ರ ಸೂರಜ್‌ ರೇವಣ್ಣ ಮದುವೆ ಸಮಯದಲ್ಲಿ ಮನೆಯ ಕೆಲಸ ಮಾಡುವಂತೆ ಕರೆಸಿಕೊಂಡಿದ್ದರು. ಅಲ್ಲಿ ಮೂರೂವರೆ ವರ್ಷಗಳ ಕಾಲ ಕೆಲಸ ಮಾಡಿಕೊಂಡಿದ್ದೆ. ಅವರ ಮನೆಗೆ ಕೆಲಸಕ್ಕೆ ಸೇರಿಕೊಂಡ ನಾಲ್ಕು ತಿಂಗಳ ನಂತರ ರೇವಣ್ಣ ಅವರು ತಮ್ಮ ಕೊಠಡಿಗೆ ಬರುವಂತೆ ಆಹ್ವಾನಿಸುತ್ತಿದ್ದರು.

ಮನೆಯಲ್ಲಿ 6 ಜನ ಹೆಣ್ಣುಮಕ್ಕಳು ಕೆಲಸ ಮಾಡುತ್ತಿದ್ದರು. ಎಲ್ಲರೂ ಪ್ರಜ್ವಲ್‌ ರೇವಣ್ಣ ಅವರು ಬಂದಾಗ ನಮಗೆ ಭಯವಾಗುತ್ತದೆ ಎಂದು ಭಯ ಹೊರ ಹಾಕುತ್ತಿದ್ದರು. ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಹುಡುಗರು ಸಹ ನನಗೆ ಮತ್ತು ಕೆಲಸ ಮಾಡುತ್ತಿದ್ದ ಹೆಣ್ಣುಮಕ್ಕಳಿಗೆ ಎಚ್ಚರಿಕೆಯಿಂದ ಇರುವಂತೆ ಹೇಳುತ್ತಿದ್ದರು. ಭವಾನಿ ಅವರು ಮನೆಯಲ್ಲಿ ಇಲ್ಲದಿದ್ದ ಸಮಯದಲ್ಲಿ ರೇವಣ್ಣ ಅವರು ಸ್ಟೋರ್‌ ರೂಮ್‌ನಲ್ಲಿ ಕೈ ಹಿಡಿದು ಎಳೆಯುತ್ತಿದ್ದರು. ಹಣ್ಣು ಕೊಡುವ ಮೈ ಮುಟ್ಟುತ್ತಿದ್ದರು. ಸೀರೆಯ ಪಿನ್‌ ಕಿತ್ತು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ – ಸಮಗ್ರ ತನಿಖೆಗೆ ಎಸ್‌ಐಟಿ ರಚನೆ

ಪ್ರಜ್ವಲ್‌ ರೇವಣ್ಣ ಅಡುಗೆ ಮನೆಯಲ್ಲಿ ಇದ್ದಾಗ ಹಿಂದಿನಿಂದ ಬಂದು ಮೈ ಮುಟ್ಟುತ್ತಾ ಹೊಟ್ಟೆ ಭಾಗದಲ್ಲಿ ಜಿಗುಟುತ್ತಿದ್ದರು. ಎಣ್ಣೆ ಹಚ್ಚಲು ನನ್ನನ್ನು ಕಳಿಸು ಎಂದು ಕೆಲಸ ಮಾಡುವ ಹುಡುಗನ ಹೇಳಿ ಕಳುಹಿಸುತ್ತಿದ್ದರು. ಇದೇ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು. ಮನೆಯಲ್ಲಿದ್ದಾಗ ಫೋನ್‌ ಮಾಡುತ್ತಿದ್ದರು. ನನ್ನ ಮಗಳು ಇದ್ದಾಗ ವೀಡಿಯೋ ಕಾಲ್‌ ಮಾಡಿ ಅಸಭ್ಯ ಸಂಭಾಷಣೆ ಮೂಲಕ ಪ್ರಚೋದಿಸಲು ಯತ್ನಿಸುತ್ತಿದ್ದರು. ಮಗಳು ಹೆದರಿಕೊಂಡು ನಂಬರ್‌ ಬ್ಲಾಕ್‌ ಮಾಡಿದ್ದಳು. ಇದರಿಂದ ಮನೆಯಿಂದ ಕೆಲಸ ಬಿಟ್ಟು ಹೊರ ಬಂದೆ.

ಈಚೆಗೆ ಜಿಲ್ಲೆಯಾದ್ಯಂತ ಪ್ರಜ್ವಲ್‌ ರೇವಣ್ಣ ಅವರು ನಡೆಸಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯದ ವೀಡಿಯೋ ವಾಟ್ಸಪ್‌ನಲ್ಲಿ ಹರಿದಾಡುತ್ತಿದೆ. ಅದರಲ್ಲಿ ನನ್ನ ವೀಡಿಯೋಗಳು ಕೂಡ ಇದೆ. ಮತ್ತೊಬ್ಬ ಮಹಿಳೆಯ ವೀಡಿಯೋ ಕೂಡ ಇದ್ದು, ಆಕೆಯ ಪತಿ ಕೂಡ ಭಯಭೀತರಾಗಿದ್ದಾರೆ. ಇದರಿಂದ ಮಾನಸಿಕ ಹಿಂಸೆ ಆಗಿದ್ದು, ಹಲವಾರು ಮಹಿಳೆಯರ ಮೇಲೆ ನಡೆಸಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಸುದ್ದಿ ಮಾಧ್ಯಮವೊಂದರಲ್ಲಿ ಪ್ರಸಾರವಾಗಿದೆ. ಇದನ್ನು ನೋಡಿ ವಾಹಿನಿಗೆ ಬಂದು ಹೇಳಿಕೆ ನೀಡಿದ್ದೇನೆ. ನನಗೆ ಜೀವ ಭಯ ಇರುವುದರಿಂದ ನಮ್ಮ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿರುವ ಹೆಚ್‌.ಡಿ.ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ವಿರುದ್ಧ ಕಾನೂನು ರೀತಿ ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ಸಂತ್ರಸ್ತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ: SIT ತನಿಖೆಗೆ ರಾಜ್ಯ ಸರ್ಕಾರ ತೀರ್ಮಾನ

Share This Article