ಬಡ್ಡಿ ಸಮೇತ ತೀರಿಸದೇ ಹೋದ್ರೆ ನಾನು ದೇವೇಗೌಡ್ರ ಮಗನೇ ಅಲ್ಲ: ಹೆಚ್.ಡಿ ರೇವಣ್ಣ

Public TV
1 Min Read
HD Revanna

ಹಾಸನ: ನಾನು ಸಮಯಕ್ಕಾಗಿ ಕಾಯ್ತಾ ಇದಿನಿ, ಎಲ್ಲವನ್ನೂ ಬಡ್ಡಿ ಸಮೇತ ತೀರಿಸದೇ ಹೋದ್ರೆ ನಾನು ದೇವೇಗೌಡರ (H.D Devegowda) ಮಗನೇ ಅಲ್ಲ ಎಂದು ಮಾಜಿಸಚಿವ ಹೆಚ್.ಡಿ ರೇವಣ್ಣ (H.D Revanna) ಗುಡುಗಿದ್ದಾರೆ.

ಹಾಸನದ (Hassan) ದ್ಯಾಪಲಾಪುರ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ವೇಳೆ, ಕೆಲವರು ಹೇಳ್ತಾರೆ ದೇವೇಗೌಡರದು, ರೇವಣ್ಣ ಅವರದ್ದು ಮುಗಿತು ಅಂತಾರೆ. ಈ ಜಿಲ್ಲೆಗೆ ದೇವೇಗೌಡರ ಕೊಡುಗೆ ಏನೆಂದು ಜನರಿಗೆ ಗೊತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಒಂದು ವಿಶೇಷ ಪಡೆ ಅಗತ್ಯವಿದೆ: ಸಿಎಂ

ಕೆಲವು ಅಧಿಕಾರಿಗಳು ರೇವಣ್ಣ ಹಾಗೂ ದೇವೇಗೌಡರದು ಮುಗೀತು ಎಂದು ತಿಳಿದುಕೊಂಡಿದ್ದಾರೆ. ಹಿಂದೆ ಕೂಡ ಜಿಲ್ಲೆಯಲ್ಲಿ ಎಲ್ಲಾ ಸ್ಥಾನ ಸೋತಿದ್ದೆವು. ಬಳಿಕ ಐದೇ ವರ್ಷಕ್ಕೆ ದೇವೇಗೌಡರು ಅಧಿಕಾರಕ್ಕೆ ಬಂದಿದ್ದರು. ಹಾಸನಕ್ಕೆ ದೇವೇಗೌಡರ ಕೊಡುಗೆ ಏನು ಅಂತಾರೆ. ರೈಲ್ವೆ ಯೋಜನೆ, ಇಂಜಿನಿಯರಿಂಗ್, ಮೆಡಿಕಲ್ ಕಾಲೇಜು, ನಸಿರ್ಂಗ್ ಕಾಲೇಜು ಮಾಡಿದ್ದು ಯಾರು? ಹಾಸನ ಜಿಲ್ಲೆಯ ಶಿಕ್ಷಣಕ್ಕೆ ಕುಮಾರಸ್ವಾಮಿ ಐದು ಸಾವಿರ ಕೋಟಿ ರೂ. ಕೊಟ್ಟಿದ್ರು ಎಂದಿದ್ದಾರೆ.

ಕಾಂಗ್ರೆಸ್‍ನವರು ಹಾಸನ – ಮೈಸೂರು ರೈಲ್ವೆ ಯೋಜನೆ ಸ್ಥಗಿತ ಮಾಡಿದ್ದರು. ಆದರೆ ದೇವೇಗೌಡರು ಪ್ರಧಾನಿಯಾಗಿ ಹತ್ತೆ ತಿಂಗಳಿಗೆ ಆ ಯೋಜನೆ ಮಾಡಿದ್ರು. ಕಾಂಗ್ರೆಸ್‍ನವರು ಈ ಜಿಲ್ಲೆಯಲ್ಲಿ ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಈ ಜಿಲ್ಲೆ ಲೂಟಿಕೋರರ ಕೈ ಸೇರಿದೆ. ನಾನೂ ಇಲ್ಲೇ ಇರ್ತಿನೆ, ಇದೆಲ್ಲಾ ಎಷ್ಟು ದಿನ ಇರುತ್ತದೆ ನೋಡೋಣ. ಈ ದೇಶ ಉಳಿಯಬೇಕಾದರೆ ಮೋದಿಯವರು ಇರಲೇಬೇಕು. ಅವರಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ ಎಂದಿದ್ದಾರೆ. ಇದನ್ನೂ ಓದಿ: ಅಂಬೇಡ್ಕರ್‌ರನ್ನ ಸೋಲಿಸಿದ್ದು ಕಾಂಗ್ರೆಸ್ ಅಲ್ಲ ಎಂದು ಸಾಬೀತಾದ್ರೆ, ರಾಜೀನಾಮೆಗೆ ಸಿದ್ಧ: ಛಲವಾದಿ ಸವಾಲ್

Share This Article