ಹಾಸನ: ಸರ್ಕಾರಿ ಪ್ರವಾಸಿ ಮಂದಿರ (ಐಬಿ)ಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಹೊಳೇನರಸೀಪುರ ತಹಶೀಲ್ದಾರ್ ಪರ ಮಾಜಿ ಸಚಿವ ಎಚ್.ಡಿ.ರೇವಣ್ಣ ಬ್ಯಾಟ್ ಬೀಸಿದ್ದಾರೆ.
ಐಬಿಯಲ್ಲಿ ಅಧಿಕಾರಿಗಳ ಎಣ್ಣೆ ಪಾರ್ಟಿ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಚಿವರು, ಹೊಳೇನರಸೀಪುರ ತಹಶೀಲ್ದಾರ್ ಶ್ರೀನಿವಾಸ್ ಪ್ರಾಮಾಣಿಕ ವ್ಯಕ್ತಿ. ಅವರು ಮದ್ಯ ಸೇವನೆ ಮಾಡುವುದಿಲ್ಲ. ಅಧಿಕಾರಿಗಳು ಒಟ್ಟಿಗೆ ಕುಳಿತು ಊಟ ಮಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ಐಬಿಯಲ್ಲಿ ಹಾಸನ ತಹಶೀಲ್ದಾರ್ಗಳ ಗುಂಡು ತುಂಡು ಪಾರ್ಟಿ
Advertisement
Advertisement
ಸಂಸದರು ಅಧಿಕಾರಿಗಳ ಸಭೆ ಕರೆದಿದ್ದರು. ಸಭೆಯ ಬಳಿಕ ಊಟದ ವ್ಯವಸ್ಥೆ ಮಾಡಲಾಗಿತ್ತು. ಆದರೆ ಯಾರೋ ಇಬ್ಬರು ಮದ್ಯ ಸೇವಿಸಿ ಐಬಿಗೆ ನುಗ್ಗಿದ್ದರು. ಅಷ್ಟೇ ಅಲ್ಲದೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಈ ಸಂಬಂಧ ತಹಶೀಲ್ದಾರ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ದುರುದ್ದೇಶದಿಂದ ಯಾರೋ ಹೀಗೆ ಮಾಡಿದ್ದಾರೆ ಎಂದು ದೂರಿದರು.
Advertisement
ಮರಳು ಅಕ್ರಮ ಸಾಗಾಣಿಕೆ ಶ್ರೀನಿವಾಸ್ ಅವರು ಅವಕಾಶ ನೀಡಲ್ಲ. ತಾಲೂಕಿನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅದಕ್ಕಾಗಿ ಬ್ಲಾಕ್‍ಮೇಲ್ ಮಾಡಲು ಕೆಲವು ಎಣ್ಣೆ ಬಾಟಲಿ ಇಟ್ಟು ವಿಡಿಯೋ ಮಾಡಿದ್ದಾರೆ. ಈ ಸಂಬಂಧ ತನಿಖೆ ಆಗಬೇಕಿದೆ ಎಂದು ಹೊಸ ಬಾಂಬ್ ಸಿಡಿಸಿದರು.