ಬೆಂಗಳೂರು: ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ತಿರುಗಾಡಿದಷ್ಟು ನಾವು ದೇವಸ್ಥಾನಕ್ಕೆ ಹೋಗಿಲ್ಲ. ಕುಲದೇವರಿಗೆ ಹೋಗಿ ಪೂಜೆ ಮಾಡಬಾರದೇ ಎಂದು ಲೋಕೋಪಯೋಗಿ ಸಚಿವ ರೇವಣ್ಣ ಪ್ರಶ್ನಿಸಿ ಬಿಎಸ್‍ವೈಗೆ ಟಾಂಗ್ ಕೊಟ್ಟಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಟೆಂಪಲ್ ರನ್ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ನಮ್ಮ ಮನೆ ದೇವರಿಗೆ ಪೂಜೆ ಮಾಡುವುದು ತಪ್ಪಾ? ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಜಮ್ಮು-ಕಾಶ್ಮೀರದ ವೈಷ್ಣವಿ ದೇವಿ ದೇವಸ್ಥಾನಕ್ಕೆ ಹೋಗಿದ್ದರು. ನಾವು ಇನ್ನು ಅಲ್ಲಿಯವರೆಗೆ ಹೋಗಿಲ್ಲ, ಇಲ್ಲಿಯ ದೇವರನ್ನು ಅಷ್ಟೇ ನೋಡುತ್ತಿದ್ದೇವೆ. ಅವರಂತೆ ದೇಶದ ಹಾಗೂ ರಾಜ್ಯದ ವಿವಿಧ ದೇವಸ್ಥಾನಗಳಿಗೆ ಹೋಗಿಲ್ಲ ಎಂದು ಕಾಲೆಳೆದರು.
Advertisement
ಕುಮಾರಸ್ವಾಮಿ 42 ದೇವಸ್ಥಾನಕ್ಕೆ ಹೋಗಿದ್ದರಿಂದಲೇ ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ, ರೈತರ ಸಾಲ ಮನ್ನಾ ಆಗುತ್ತಿದೆ ಎಂದು ತಮ್ಮ ಟೆಂಪಲ್ ರನ್ ಸಮರ್ಥಿಸಿಕೊಂಡರು.
Advertisement
Advertisement
ಚುನಾವಣೆ ಬಂದಾಗ ರಾಜಕಾರಣ ಮಾಡೋಣ. ಪ್ರಧಾನಿ ನರೇಂದ್ರ ಮೋದಿಗೆ ಮಧ್ಯಪ್ರವೇಶಿಸಿ ಮಹದಾಯಿ ಸಮಸ್ಯೆಯನ್ನು ಇತ್ಯರ್ಥ ಮಾಡುಬೇಕೆಂದು ರಾಜ್ಯದ 17 ಜನ ಬಿಜೆಪಿ ಸಂಸದರು ಹಾಗೂ ಬಿಎಸ್ ಯಡಿಯೂರಪ್ಪ ಕೇಳಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡ ಸಚಿವರು, ನಾವು 36.5 ಟಿಎಂಸಿ ನೀರು ಕೇಳಿದ್ದೇವು. ಆದರೆ ನಮಗೆ ಸೂಕ್ತ ನ್ಯಾಯ ಸಿಕ್ಕಿಲ್ಲ ಎಂದು ಪ್ರತಿಕ್ರಿಯಿಸಿದರು.
Advertisement
ಮಳೆಯಿಂದಾಗಿ ರಸ್ತೆಗಳು ಹಾಳಾಗಿದ್ದು, ಜನ ಸಾಮಾನ್ಯರಿಗೆ ತೊಂದರೆಯಾಗದಂತೆ ಶೀಘ್ರ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು ಪರಿಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಣಕ್ಕೆ ಯಾವುದೇ ಚಿಂತೆಬೇಡವೆಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ರಸ್ತೆಯ ಮೇಲೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿಯಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿತ್ತು. ಶೀಘ್ರವೇ ರಸ್ತೆ ದುರಸ್ತಿಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ ಎಂದು ಸಚಿವರು ಹೇಳಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv