ಹಾಸನ: ಎರಡು ರಾಷ್ಟ್ರೀಯ ಪಕ್ಷಗಳು ನನ್ನ ಹೆಸರಿನ ವ್ಯಕ್ತಿಯಿಂದ ನಾಮಪತ್ರ ಹಾಕಿಸಿವೆ. ನಾವು ಅಷ್ಟೊಂದು ಫೇಮಸ್ ಆಗಿದ್ದೀವಿ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಗರಂ ಆಗಿದ್ದಾರೆ.
Advertisement
ಎಂಎಲ್‍ಸಿ ಚುನಾವಣೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ರಾಷ್ಟ್ರೀಯ ಪಕ್ಷಗಳನ್ನು ದೂರವಿಟ್ಟು ಜೆಡಿಎಸ್ ಗೆ ಅವಕಾಶ ಕೊಡಬೇಕು. ಕಳೆದ ಬಾರಿ ತಪ್ಪು ಮಾಡಿದ್ದೇವೆ, ಈ ಬಾರಿ ಸರಿಮಾಡಿಕೊಳ್ಳಬೇಕು ಎಂದು ಸದಸ್ಯರು ತೀರ್ಮಾನ ಮಾಡಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳು ನನ್ನ ಹೆಸರಿನ ವ್ಯಕ್ತಿಯಿಂದ ನಾಮಪತ್ರ ಹಾಕಿಸಿವೆ. ನಾವು ಅಷ್ಟೊಂದು ಫೇಮಸ್ ಆಗಿದ್ದೀವಿ. ಎರಡು ಪಕ್ಷಗಳಿಗೆ ಈ ಪರಿಸ್ಥಿತಿ ಬಂದಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಇತಿಹಾಸದಲ್ಲಿಯೇ ಮೊದಲಬಾರಿಗೆ ಅಂಟಾರ್ಟಿಕಾದಲ್ಲಿ ಏರ್ಬಸ್ ವಿಮಾನ
Advertisement
Advertisement
ನಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಮನವಿ ಮಾಡುತ್ತೇನೆ. ಎರಡು ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಪ್ರತಿಸ್ಪರ್ಧಿ ಎಂದು ಹೇಳುತ್ತಿದ್ದಾರೆ. ಜೆಡಿಎಸ್ ಏನು ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ನಮ್ಮ ಬಗ್ಗೆ ಮಾತನಾಡಿ ಕಾಂಗ್ರೆಸ್ ಪರಿಸ್ಥಿತಿ ಏನಾಗಿದೆ ಎಂದು ಗೊತ್ತಲ್ಲ. ನಾವೇನು ಅದರ ಬಗ್ಗೆ ಮಾತನಾಡಲ್ಲ ಎಂದು ಟೀಕಿಸಿದರು.
Advertisement
ಮಾಜಿ ಸಿಎಂ ಕುಮಾರಸ್ವಾಮಿ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ಸಿನ ಕೆಲವು ಲೀಡರ್ ಗಳಿಗಿಲ್ಲ. ನಮ್ಮ ಮನೆ ಬಾಗಿಲಿಗೆ ಬಂದು ನೀವೇ ಐದು ವರ್ಷ ಸಿಎಂ ಆಗಿ ಅಂದಿದ್ದರು. ಕುಮಾರಸ್ವಾಮಿ ಅವರಿಗೆ ಒಳ್ಳೆಯ ಹೆಸರು ಬರುತ್ತೆ ಎಂದು ಸರ್ಕಾರವನ್ನು ಬೀಳಿಸಿದರು. ಇದೇ ರೀತಿ ದೇವೇಗೌಡರನ್ನು ಪ್ರಧಾನಿ ಮಾಡಿದ್ದರು. 10 ತಿಂಗಳಿಗೆ ಕೆಳಗೆ ಇಳಿಸಿದ್ರು. ಕುಮಾರಸ್ವಾಮಿ ಅವರ ವಿರುದ್ಧ ಯಾವುದೋ ಬುಡುಬುಡಿಕೆ ಕೈಯಲ್ಲಿ ಸ್ಟೇಟ್ ಮೆಂಟ್ ಕೊಡಿಸುತ್ತಿದ್ದಾರೆ ಎಂದು ಕಿಡಿಕಾಡಿದರು. ಇದನ್ನೂ ಓದಿ: ಪುನೀತ್‍ರಂತೆಯೇ ಯಾವಾಗಲು ಒಳ್ಳೆಯ ಕೆಲಸ ಮಾಡೋಣ: ವಿಜಯ ರಾಘವೇಂದ್ರ
ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ ಎಸಿಬಿ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾಮಕಾವಾಸ್ಥೆಗೆ ಮಾಡೋದು ಬೇಡ. ಚುನಾವಣೆ ಬಂದಿದೆ ಎಂದು ದಾಳಿ ಮಾಡೋದು ಬೇಡ. ಭ್ರಷ್ಟರ ಮೇಲೆ ದಾಳಿ ಮಾಡಲಿ ಎಂದು ಹೇಳಿದರು.