ಬೆಂಗಳೂರು: ಕನ್ನಡಪರ ಹೋರಾಟಗಾರರು, ರೈತ ಹೋರಾಟಗಾರ ಮೇಲಿನ ಕೇಸ್ ವಾಪಸ್ ಪಡೆಯಲಾಗಿದೆ. ಕ್ಯಾಬಿನೆಟ್ ಸಬ್ ಕಮಿಟಿ ಮತ್ತು ಕ್ಯಾಬಿನೆಟ್ ನಿರ್ಧಾರ ಮಾಡಿ ಈ ಕೇಸ್ ವಾಪಸ್ ಪಡೆಯೋ ಪ್ರಕ್ರಿಯೆ ಮಾಡಿದ್ದೇವೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ (H K Patil) ಹೇಳಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಕಾನೂನು ಇಲಾಖೆ, ಪೊಲೀಸ್ ಇಲಾಖೆ ಕೇಸ್ ವಾಪಸ್ ಪಡೆಯೋದು ಬೇಡ ಅಂತ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ ಕ್ಯಾಬಿನೆಟ್ ಸಬ್ ಕಮಿಟಿ ಮತ್ತು ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ ಕೇಸ್ ವಾಪಸ್ ಪಡೆದಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಚುನಾವಣೆ ಆಯೋಗ, ಇವಿಎಂ ವಿಶ್ವಾಸಾರ್ಹತೆ ಕಳೆದುಕೊಂಡಿದೆ, ಅದಕ್ಕಾಗಿ ಬ್ಯಾಲೆಟ್ ಪೇಪರ್ ಜಾರಿ: ಹೆಚ್‌ಕೆ ಪಾಟೀಲ್
ಕನ್ನಡ ಹೋರಾಟಗಾರರು, ರೈತರ ಹೋರಾಟದ ಕೇಸ್‌ಗಳನ್ನು ವಾಪಸ್ ಪಡೆಯೋಕೆ ನಮ್ಮ ಸರ್ಕಾರ ನಿರ್ಧಾರ ಮಾಡಿದೆ. ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ ಆಗಿದ್ರೆ, ಸರ್ಕಾರದ ಆಸ್ತಿ ನಷ್ಟ ಆಗಿದ್ರೆ, ಅಂತಹ ಕೇಸ್‌ಗಳ ವಿಚಾರಣೆ ವಿಳಂಬವಾಗಿರಬಹುದು. ಆದರೆ ಕನ್ನಡಕ್ಕಾಗಿ ಹೋರಾಡಿದವರ ಕೇಸ್‌ಗಳನ್ನು ವಾಪಸ್ ತೆಗೆದುಕೊಳ್ಳುತ್ತೇವೆ. ವೈಯಕ್ತಿಕ ಕೇಸ್‌ಗಳ ಬಗ್ಗೆ ನಾನು ನೋಡಿಲ್ಲ. ನೋಡಿ ಮಾತನಾಡುತ್ತೇನೆ ಎಂದಿದ್ದಾರೆ.