ಗದಗ: ನಿರಂತರ ಮಳೆಯಿಂದ ಬೆಳೆ ಹಾನಿಯಾದ ಪ್ರದೇಶಗಳಿಗೆ ಗದಗ (Gadag) ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ (H K Patil) ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗದಗ ತಾಲೂಕಿನ ಬಿಂಕದಕಟ್ಟಿ ಭಾಗದಲ್ಲಿ ಹೆಸರು ಹಾಗೂ ಮೆಕ್ಕೆಜೋಳ ಬೆಳೆ ಹಾನಿಯಾಗಿತ್ತು. ಬಿಂಕದಕಟ್ಟಿ ರೈತ ಶ್ರೀನಿವಾಸ್ ಇಟಗಿ ಅವರ 10 ಎಕ್ರೆ ಜಮೀನಿನಲ್ಲಿ ಬೆಳೆದ ಹೆಸರು ಬೆಳೆ ಸಂಪೂರ್ಣ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರು ಬೆಳೆಹಾನಿ ವೀಕ್ಷಣೆ ನಡೆಸಿ ಪರಿಹಾರದ ಭರವಸೆ ನೀಡಿದರು. ಇದನ್ನೂ ಓದಿ: ಡಿಕೆಶಿ ಆರ್‌ಎಸ್‌ಎಸ್ ಗೀತೆ ಹಾಡಿದ್ದನ್ನು ಸ್ವಾಗತಿಸುತ್ತೇವೆ: ಅಶ್ವಥ್ ನಾರಾಯಣ್
ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ನಿಖರ ಸಮೀಕ್ಷೆ ನಡೆಸಿ, ಹಾನಿಗೊಳಗಾದ ಪ್ರತಿ ಎಕರೆಯ ಲೆಕ್ಕವನ್ನು ದಾಖಲಿಸುವಂತೆ ಸೂಚನೆ ನೀಡಿದರು. ರೈತರ ಕಷ್ಟವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಅವರಿಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ ದೊರೆಯಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆಗೆ ಶಾಸಕ ಯತ್ನಾಳ್ ಆಕ್ಷೇಪ
ಗದಗ ಜಿಲ್ಲೆಯಲ್ಲಿ ಆ.1 ರಿಂದ ಆ.18 ವರೆಗೆ ವಾಡಿಕೆ ಮಳೆ 46.9 ಮೀ.ಮೀ ಆಗಬೇಕಿತ್ತು. ಆದ್ರೆ 140.2 ರಷ್ಟು ಮಳೆ ಆಗುವ ಮೂಲಕ 198.9% ರಷ್ಟು ಅಧಿಕ ಮಳೆಯಾಗಿದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 94,884 ಹೆಕ್ಟೇರ್ ಬೆಳೆ ಹಾನಿಗೀಡಾಗಿದೆ. ಇದರಲ್ಲಿ ಹೆಸರು ಬೆಳೆ 67,533 ಹೆಕ್ಟೇರ್ ನಷ್ಟು ಹಾನಿಯಾಗಿದೆ ಎಂದು ಪ್ರಾಥಮಿಕ ಸಮೀಕ್ಷೆ ಮೂಲಕ ಅಂದಾಜಿಸಲಾಗಿದೆ. ಇನ್ನು ಸಮೀಕ್ಷಾಕಾರ್ಯ ನಡೆದಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು. ಇದನ್ನೂ ಓದಿ: ಪ್ರೀತ್ಸೆ ಪ್ರೀತ್ಸೆ ಎಂದು ವಿದ್ಯಾರ್ಥಿನಿಯ ಹಿಂದೆ ಬಿದ್ದು, ಕೊಲೆ ಬೆದರಿಕೆ – ಪಾಗಲ್ ಪ್ರೇಮಿ ಅರೆಸ್ಟ್
ಈ ವೇಳೆ ಎಡಿಸಿ ದುರಗೇಶ್ ಕೆ.ಆರ್, ಎಸಿ ಗಂಗಪ್ಪ, ತಹಶೀಲ್ದಾರ್ ಶ್ರೀನಿವಾಸ್ ಕುಲಕರ್ಣಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೆ, ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಶೈಲೇಂದ್ರ ಬಿರಾದಾರ ಸೇರಿದಂತೆ ಅನೇಕ ಅಧಿಕಾರಿಗಳು, ರೈತರು ಉಪಸ್ಥಿತರಿದ್ದರು.