ಬೆಂಗಳೂರು: ವಿಜಯನಗರ ವಿಧಾನಸಭಾ ಕ್ಷೇತ್ರದ ನಾಯಕರು,ಮಾಜಿ ಆಡಳಿತ ಪಕ್ಷದ ನಾಯಕರಾದ ಹೆಚ್.ರವೀಂದ್ರರವರ ಹುಟ್ಟುಹಬ್ಬ ಆಚರಣೆಯ ಪ್ರಯುಕ್ತವಾಗಿ 3ಸಾವಿರ ಮಹಿಳೆಯರಿಗೆ ಸೀರೆ ವಿತರಣೆ ಮಾಡಿ ಹುಟ್ಟುಹಬ್ಬ ಆಚರಣೆ ಮಾಡಲಾಗಿದೆ.
ಹೆಚ್.ರವೀಂದ್ರ ಅಭಿಮಾನಿಗಳ ಬಳಗ ವತಿಯಿಂದ ಕಾರ್ಯಕ್ರಮವನ್ನು ವಿಜಯನಗರದಲ್ಲಿ ಆಯೋಜಿಸಲಾಗಿತ್ತು. 3ಸಾವಿರ ಮಹಿಳೆಯರಿಗೆ ಸೀರೆ ವಿತರಣೆ ಮತ್ತು ಉಚಿತ ಆರೋಗ್ಯ ಶಿಬಿರ ಹಾಗೂ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಹೆಚ್.ರವೀಂದ್ರರವರು ಕೇಕ್ ಕತ್ತರಿಸಿ ಸಿಹಿ ತಿಂಡಿ ವಿತರಿಸಿದರು. ಕಂದಾಯ ಸಚಿವರಾದ ಆರ್.ಅಶೋಕ್ ರವರು ಮತ್ತು ಉನ್ನತ ಶಿಕ್ಷಣ ಸಚಿವ ಸಿ.ಎನ್.ಆಶ್ವಥ್ ನಾರಾಯಣ್ ರವರು ಮತ್ತು ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಹಾಗೂ ಕ್ಷೇತ್ರದ ಕಾರ್ಯಕರ್ತರು, ಸ್ಥಳೀಯ ನಾಗರಿಕರು ಹೆಚ್.ರವೀಂದ್ರರವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು. ಇದನ್ನೂ ಓದಿ: ಜಗಳವಾಡಿ ಕ್ಷಮೆ ಕೇಳುವುದರೊಳಗೆ ತಂದೆ ಹೆಣವಾಗಿದ್ದರು: ಅಭಿನವ್
ಹೆಚ್.ರವೀಂದ್ರರವರು, ಮಾತನಾಡಿ ವಿಜಯನಗರ ವಿಧಾನಸಭಾ ಕ್ಷೇತ್ರದ ಜನರು ಮತ್ತು ಬಿ.ಜೆ.ಪಿ.ಪಕ್ಷವು ನನ್ನ ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಸದಾ ಸಹಕಾರ ನೀಡುತ್ತಾ ಬಂದಿದೆ. ಮೂರು ಬಾರಿ ಪಾಲಿಕೆ ಸದಸ್ಯನಾಗಿ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿಮ್ಮ ಸಹಕಾರ ಬೆಂಬಲದಿಂದ ಸಾಧ್ಯವಾಯಿತು.ಜನರ ಸಮಸ್ಯೆ ನಿವಾರಣೆಯಾಗಬೇಕು. ಎಲ್ಲರು ನೆಮ್ಮದ್ದಿ ಇಂದ ಜೀವನ ಸಾಗಿಸಬೇಕು ಎಂಬ ಆಶಯ ನನ್ನದು ಎಂದು ಹೇಳಿದರು.