ಬೆಂಗಳೂರು: ಕ್ರೈಸ್ತ ಸಮುದಾಯದವರಿಗೆ ಲೋಕಸಭಾ ಚುನಾವಣೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಎಚ್.ಟಿ.ಸಾಂಗ್ಲಿಯಾನ ಅವರು ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿದ್ದಾರೆ.
ಕ್ರೈಸ್ತ ಸಮುದಾಯದವರು ಯಾವುದೇ ಪಕ್ಷ ನೋಡದೆ, ಪ್ರಾಮಾಣಿಕ, ಯೋಗ್ಯ ಹಾಗೂ ಅಭಿವೃದ್ಧಿಗೆ ಶ್ರಮಿಸುವ ಅಭ್ಯರ್ಥಿಯ ಮತ ಹಾಕುವಂತೆ ಸಾಂಗ್ಲಿಯಾನ ಮನವಿ ಮಾಡಿಕೊಂಡಿದ್ದಾರೆ.
Advertisement
ಸದ್ಯ ಕೆಪಿಸಿಸಿ ಉಪಾಧ್ಯಕ್ಷರಾಗಿದ್ದ ಅವರು, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಕೈ ತಪ್ಪಿದ್ದರಿಂದ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಕಾಂಗ್ರೆಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
Advertisement
Advertisement
ಈ ಹಿಂದೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ವಿಧಾನ ಪರಿಷತ್‍ನ ಸದಸ್ಯ ಐವಾನ್ ಡಿಸೋಜಾ ಅವರು, ಎಚ್.ಟಿ.ಸಾಂಗ್ಲಿಯಾನ ಅವರಿಗೆ ಟಿಕೆಟ್ ನಿರಾಕರಿಸುವ ಮೂಲಕ ಕ್ರೈಸ್ತ ಸಮುದಾಯಕ್ಕೆ ಕಾಂಗ್ರೆಸ್ ಯಾವುದೇ ಅನ್ಯಾಯ ಮಾಡಿಲ್ಲ ಎಂದು ಹೇಳಿದ್ದರು.
Advertisement
ಎಚ್.ಟಿ.ಸಾಂಗ್ಲಿಯಾನ ಅವರು ಐಪಿಎಸ್ ಅಧಿಕಾರಿಯಾಗಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಬಳಿಕ ರಾಜಕೀಯ ಪ್ರವೇಶ ಮಾಡಿದ ಅವರು 2004ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2008ರಲ್ಲಿ ಕಾಂಗ್ರೆಸ್ ಸೇರಿದ್ದ ಸಾಂಗ್ಲಿಯಾನ 2009ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದಿಂದ ಸ್ಪರ್ಧಿಸಿ ಪಿಸಿ ಮೋಹನ್ ವಿರುದ್ಧ 35 ಸಾವಿರ ಮತಗಳ ಅಂತರದಿಂದ ಸೋತಿದ್ದರು.