– 50 ಕೋಟಿ ಖರ್ಚು ಮಾಡಿ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿಲ್ಲ
ಮೈಸೂರು: ಮುಂಬರುವ ಯಾವುದೇ ಚುನಾವಣೆಯಲ್ಲಿ (Election) ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಎಂಎಲ್‌ಸಿ ಹೆಚ್ ವಿಶ್ವನಾಥ್ (H Vishwanath) ಚುನಾವಣಾ ರಾಜಕೀಯಕ್ಕೆ (Election Politics) ಗುಡ್ ಬೈ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ (Mysuru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಹಲವು ಬಾರಿ ಚುನಾವಣೆ ಎದುರಿಸಿದಾಗ ಜನರೇ ಹಣ ನೀಡಿ ಆಶೀರ್ವಾದ ಮಾಡಿದ್ದರು. ಆದರೆ ಈಗ ಹಣ ನೀಡಿ ಚುನಾವಣೆ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ವಿಧಾನಸಭೆ ಚುನಾವಣೆ ಎದುರಿಸಲು 50 ಕೋಟಿ ರೂ. ಹಣ ಬೇಕು. ರಿಯಲ್ ಎಸ್ಟೇಟ್ ನಡೆಸುವವರು ನಿವೇಶನಗಳನ್ನಾದರೂ ಮಾರಾಟ ಮಾಡಿ ಚುನಾವಣೆ ಎದುರಿಸುತ್ತಾರೆ. ನನಗೆ ಒಂದು ಮನೆ ಒಂದು ನಿವೇಶನ ಮಾತ್ರ ಇವೆ. 50 ಕೋಟಿ ರೂ. ಖರ್ಚು ಮಾಡಿ ಚುನಾವಣೆ ಎದುರಿಸುವಷ್ಟು ಶಕ್ತಿ ಈಗ ನನ್ನಲ್ಲಿ ಇಲ್ಲ ಎಂದರು. ಇದನ್ನೂ ಓದಿ: ಇಡಿ ಎಂಟ್ರಿಯಾಗುತ್ತಿದ್ದಂತೆ ಮಹಡಿಯಿಂದ ಬಿತ್ತು 500 ರೂ. ನೋಟುಗಳ ಮಳೆ!
ನನ್ನ ಮಕ್ಕಳು ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಅವರ ಶಕ್ತಾನುಸಾರ ರಾಜಕೀಯದಲ್ಲಿ ಮುಂದುವರಿಯುತ್ತಾರೆ. ನಾನು ಸಹ ರಾಜಕೀಯದಲ್ಲಿ ಮುಂದುವರಿಯುತ್ತೇನೆ, ಆದರೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ತುಮಕೂರಿನಲ್ಲಿ ಮುಂದುವರಿದ ನವಿಲುಗಳ ಸರಣಿ ಸಾವು – ಮತ್ತೆರಡು ಕಳೇಬರ ಪತ್ತೆ

