ಬೆಂಗಳೂರು: ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ಮನೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಚ್. ವಿಶ್ವನಾಥ್ ಭೇಟಿ ನೀಡಿದರು.
ವಿಶ್ವನಾಥ್ ಕಳೆದ ವಾರವಷ್ಟೇ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿದ್ದರು. ಈಗ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿ ಮಾಡಿದ್ದು, ಎಲ್ಲರಿಗೂ ಕುತೂಹಲ ಮೂಡಿಸಿದೆ. ರಾಮಲಿಂಗಾ ರೆಡ್ಡಿ ಕೂಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ಹೊರಹಾಕಿದ್ದರು.
Advertisement
Advertisement
ವಿಶ್ವನಾಥ್ ಅವರು ರಾಮಲಿಂಗಾ ರೆಡ್ಡಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸಿದ್ದರಾಮಯ್ಯ ಅವರ ವರ್ತನೆಯಿಂದ ಕಾಂಗ್ರೆಸ್‍ನ ಕೆಲವು ಶಾಸಕರು ಅಸಮಾಧಾನಗೊಂಡಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಅವರ ವಿರೋಧಿ ಬಣವನ್ನು ಒಟ್ಟಿಗೆ ಮಾಡಿ ಮತ್ತೊಂದು ರೀತಿಯ ಕಾರ್ಯ ತಂತ್ರಕ್ಕೆ ರೂಪಿಸುತ್ತಿದ್ದಾರಾ ಎಂಬ ಅನುಮಾನ ಶುರುವಾಗಿದೆ.
Advertisement
ಒಟ್ಟಿನಲ್ಲಿ ಕಳೆದ ವಾರವಷ್ಟೇ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿದ್ದ ಎಚ್. ವಿಶ್ವನಾಥ್, ಇದೀಗ ರಾಮಲಿಂಗಾ ರೆಡ್ಡಿ ಅವರ ಮನೆಗೆ ಭೇಟಿ ನೀಡಿದ್ದು, ಎಲ್ಲರಿಗೂ ಕೂತೂಹಲ ಮೂಡಿದೆ.