ಮೈಸೂರು: ಸಿದ್ದರಾಮೋತ್ಸವಕ್ಕೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರ ಪುತ್ರ ಕೈ ಜೋಡಿಸಿದ್ದಾರೆ. ಸಿದ್ದರಾಮಯ್ಯ ಪರ ಮತ್ತು ವಿರುದ್ಧವಾಗಿ ಅಪ್ಪ -ಮಗ ನಿಂತಂತಾಗಿದೆ.
ಸಿದ್ದರಾಮಯ್ಯ ವಿರುದ್ಧ ಹೆಚ್ ವಿಶ್ವನಾಥ್ ಸದಾ ಟೀಕೆ ಮಾಡುತ್ತಾರೆ. ಆದರೆ, ಇತ್ತ ಸಿದ್ದರಾಮಯ್ಯ ಪರ ಅವರ ಪುತ್ರ ಅಮಿತ್ ದೇವರಹಟ್ಟಿ ನಿಂತಿದ್ದು, ಭಾನುವಾರ ಮೈಸೂರಿನಲ್ಲಿ ನಡೆದ ಸಿದ್ದರಾಮೋತ್ಸವದ ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಗೂಗಲ್ ಕೋ-ಫೌಂಡರ್ ಪತ್ನಿ ಜೊತೆಗಿನ ಸಂಬಂಧದ ಬಗ್ಗೆ ಕೊನೆಗೂ ಮೌನ ಮುರಿದ ಮಸ್ಕ್
ಕುರುಬ ಸಮುದಾಯದ ಪ್ರಮುಖ ಮುಖಂಡ ಪೂರ್ವಭಾವಿ ಸಭೆಯಲ್ಲಿ ವಿಶ್ವನಾಥ್ ಪುತ್ರ ಅಮಿತ್ ಭಾಗಿಯಾಗಿ ಸಿದ್ದರಾಮೋತ್ಸವಕ್ಕೆ ಜನರನ್ನು ಸೇರಿಸುವ ಹೊಣೆ ಹೊತ್ತರು. ನಾನು ಜಿಲ್ಲಾ ಪಂಚಾಯತ್‍ನಲ್ಲಿ ಗೆಲ್ಲಲು ಸಿದ್ದರಾಮಯ್ಯ ಕಾರಣ. ನನ್ನ ಪರ ಪ್ರಚಾರಕ್ಕೆ ಬಂದು ನನ್ನನ್ನು ಸಿದ್ದರಾಮಯ್ಯ ಗೆಲ್ಲಿಸಿದರು. ಇದನ್ನೂ ಓದಿ: ಬಸ್‍ಗಳ ನಡುವೆ ಭೀಕರ ಅಪಘಾತ – 8 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
ಸಿದ್ದರಾಮಯ್ಯ ಹೊಳೆಯುವ ವಜ್ರವಿದ್ದಂತೆ. ನಾವು(ಕುರುಬ ಸಮಾಜದವರು) ಮತ್ತಷ್ಟು ಹೊಳಪು ನೀಡುವ ಕೆಲಸ ಮಾಡಬೇಕು. ಶಾಸಕ ಹೆಚ್.ಪಿ. ಮಂಜುನಾಥ್, ಮುಖಂಡ ರವಿಶಂಕರ್ ಜೊತೆಗೂಡಿ ಹೆಚ್ಚಿನ ಜನರನ್ನು ಸೇರಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.