ಕಲಬುರಗಿ: ಎಚ್1ಎನ್1ಗೆ ಅಫಜಲಪುರದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಸಾರ್ವಜನಿಕರು ಆತಂಕದಲ್ಲಿದ್ದಾರೆ.
ಕಳೆದ 15 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಅಫಜಲಪುರ ಪಟ್ಟಣ ನಿವಾಸಿ ಲಕ್ಷ್ಮೀಪುತ್ರ ಎಚ್1 ಎನ್1ಗೆ ಬಲಿಯಾಗಿದ್ದಾರೆ. ಮೊದಲು ಜ್ವರ ಕಾಣಿಸಿಕೊಂಡ ವೇಳೆ ಲಕ್ಷ್ಮಿ ಪುತ್ರ ಅವರನ್ನು ಮಹಾರಾಷ್ಟ್ರದ ಸೊಲ್ಲಾಪುರ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಈ ವೇಳೆ ಅವರಿಗೆ ಎಚ್1 ಎನ್1 ಸೋಕು ತಗುಲಿರುವುದು ಖಚಿತವಾಗಿದೆ.
Advertisement
Advertisement
ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಿದರೂ ಯಾವುದೇ ಪ್ರಯೋಜನವಾಗದ ಕಾರಣ ಕಳೆದ ಎರಡು ದಿನಗಳ ಹಿಂದೆ ಹೆಚ್ಚಿನ ಚಿಕಿತ್ಸೆಗಾಗಿ ಹೈದ್ರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ಲಕ್ಷ್ಮೀಪುತ್ರ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿ ಮಹಾರಾಷ್ಟ್ರದ ಸೊಲ್ಲಾಪುರ ಬಬಲಾದ್ ಬಳಿ ಸಣ್ಣ ಉದ್ಯಮಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದನ್ನು ಓದಿ: ಏನಿದು ಎಚ್1ಎನ್1? ಹಂದಿ ಜ್ವರ ಬಂದ ಮೇಲೆ ಏನು ಮಾಡಬೇಕು?
Advertisement
ಸದ್ಯ ಮೃತ ಲಕ್ಷ್ಮೀಪುತ್ರ ಎಚ್1ಎನ್1 ಗೆ ನಿಂದ ಮೃತಪಟ್ಟಿರುವುದು ಖಚಿತವಾಗುತ್ತಿದಂತೆ ಈ ಭಾಗದ ಜನರಲ್ಲಿ ಆತಂಕ ಹೆಚ್ಚಾಗಿದೆ. ಇಷ್ಟಾದರೂ ಜಿಲ್ಲಾ ಆರೋಗ್ಯ ಇಲಾಖೆ ಈವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಅಲ್ಲದೇ ಸಾರ್ವಜನಿಕರಲ್ಲಿ ಸೋಂಕಿನ ಕುರಿತು ಜಾಗೃತಿ ಮೂಡಿಸುವ ಕಾರ್ಯವನ್ನು ಕೈಗೊಂಡಿಲ್ಲ. ಕೂಡಲೇ ಜನರಿಗೆ ಈ ಕುರಿತೆ ಎಚ್ಚರಿಕೆ ನೀಡಿ ಮಾಹಿತಿ ನೀಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv