ನವದೆಹಲಿ: ವಿರೋಧ ಪಕ್ಷದ ನಾಯಕರ (Opposition Leader) ಐಫೋನ್‌ಗೆ (Iphone) ಹ್ಯಾಕಿಂಗ್ (Hacking) ಎಚ್ಚರಿಕೆ ಸಂದೇಶ ಬಂದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ ಬೆನ್ನಲ್ಲೇ ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯು (IT) ಮುಂಬರುವ ಸಭೆಯಲ್ಲಿ ಆಪಲ್ ಅಧಿಕಾರಿಗಳನ್ನು ಕರೆಸಿಕೊಂಡು ಮಾಹಿತಿ ಪಡೆಯಲು ನಿರ್ಧರಿಸಿದೆ.
ಸಂಸದರ ಫೋನ್‌ಗೆ ಬಂದ ಇತ್ತೀಚಿನ ಎಚ್ಚರಿಕೆ ಬಗ್ಗೆ ಸಮಿತಿಯ ಕಾರ್ಯದರ್ಶಿ ಆಳವಾದ ಕಳವಳ ವ್ಯಕ್ತಪಡಿಸಿದ್ದು, ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಹೇಳಿದ್ದಾರೆ. ಮಂಗಳವಾರ ಹಲವು ವಿರೋಧ ಪಕ್ಷದ ನಾಯಕರು, ಸಂಸದರು ತಮ್ಮ ಐಫೋನ್‌ಗಳನ್ನು ರಾಜಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವ ‘ರಾಜ್ಯ ಪ್ರಾಯೋಜಿತ ದಾಳಿಕೋರರು’ ಕುರಿತು ಆಪಲ್‌ನಿಂದ ಅಧಿಸೂಚನೆಗಳನ್ನು ಸ್ವೀಕರಿಸಿದ್ದೇವೆ ಎಂದು ಹೇಳಿದಾಗ ವಿವಾದ ಭುಗಿಲೆದ್ದಿತು. ಸರ್ಕಾರ ಹ್ಯಾಕಿಂಗ್ ಮಾಡಲು ಪ್ರಯತ್ನಿಸಿದೆ ಎಂದು ಆರೋಪಿಸಿದರು. ಆದರೆ ಈ ಆರೋಪವನ್ನು ನಿರಾಕರಿಸಿದ ಸರ್ಕಾರ, ಈ ವಿಷಯದ ಬಗ್ಗೆ ಕೂಲಂಕುಷ ತನಿಖೆ ನಡೆಸಲಾಗುವುದು ಎಂದು ಹೇಳಿದೆ. ಇದನ್ನೂ ಓದಿ: ಬುದ್ಧಿವಂತ.. ಗಲ್ಫ್ ರಾಷ್ಟ್ರದಲ್ಲಿ ಒಳ್ಳೆ ಸಂಬಳದ ಕೆಲಸ ಬಿಟ್ಟು ಬಾಂಬ್ ಸ್ಫೋಟಿಸಿದ್ಯಾಕೆ; ತಲೆ ಕೆಡಿಸಿಕೊಂಡ ಪೊಲೀಸರು
Advertisement
Advertisement
ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ಶಶಿ ತರೂರ್, ಪವನ್ ಖೇರಾ, ಕೆ.ಸಿ ವೇಣುಗೋಪಾಲ್, ಸುಪ್ರಿಯಾ ಶ್ರಿನಾಟೆ, ಟಿಎಸ್ ಸಿಂಘ್ದೇವ್ ಮತ್ತು ಭೂಪಿಂದರ್ ಸಿಂಗ್ ಹೂಡಾ ಸೇರಿದ್ದಾರೆ. ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ, ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಈ ರೀತಿಯ ಎಚ್ಚರಿಕೆ ಸಂದೇಶ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ಹಿಂದೂ ಸಂಪ್ರದಾಯದಂತೆ ಉಪವಾಸ ಆಚರಿಸಿದ ಪಾಕ್ ಮಹಿಳೆ ಸೀಮಾ – ಕಾರಣ ಗೊತ್ತಾ.?
Advertisement
Advertisement
ಶಿವಸೇನಾ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ, ಆಮ್ ಆದ್ಮಿ ಪಕ್ಷದ (ಎಎಪಿ) ರಾಘವ್ ಚಡ್ಡಾ, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಕೆಲವು ಸಹಾಯಕರು ಕೂಡ ಆಪಲ್‌ನಿಂದ ಸಂದೇಶವನ್ನು ಸ್ವೀಕರಿಸಿದ್ದಾರೆ. ವಿವಾದ ಹೆಚ್ಚಾಗುತ್ತಿದ್ದಂತೆ ಆಪಲ್ ಸಂಸ್ಥೆ ಹೇಳಿಕೆ ಬಿಡುಗಡೆ ಮಾಡಿದ್ದು, ಯಾವುದೇ ನಿರ್ದಿಷ್ಟ ರಾಜ್ಯ ಪ್ರಾಯೋಜಿತ ದಾಳಿಕೋರ ಬೆದರಿಕೆ ಸೂಚನೆಗಳನ್ನು ನೀಡಿಲ್ಲ. ಇಂತಹ ಸಂದೇಶ ಸುಳ್ಳು ಎಚ್ಚರಿಕೆಗಳಾಗಿರಬಹುದು ಎಂದು ಹೇಳಿದೆ. ಇದನ್ನೂ ಓದಿ: ಚಿನ್ನ ಲೇಪಿತ ಅಮೃತಶಿಲೆಯ ಸಿಂಹಾಸನದ ಮೇಲೆ ತಲೆ ಎತ್ತಲಿದೆ ಶ್ರೀರಾಮನ ಮೂರ್ತಿ
Web Stories