ಕೊಡಗಿನಲ್ಲಿ ಭಾರೀ ಮಳೆ – 2 ದಿನ ಆರೆಂಜ್ ಅಲರ್ಟ್, ಗುರುವಾರ ಶಾಲಾ ಕಾಲೇಜುಗಳಿಗೆ ರಜೆ

Public TV
1 Min Read
Kodagu Rain 2

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಉತ್ತಮ‌ ಮಳೆಯಾಗುತ್ತಿದ್ದು (Heavy Rain In Kodagu), ಮುಂಜಾಗ್ರತಾ ಕ್ರಮವಾಗಿ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Kodagu Rain 3

ಮಡಿಕೇರಿ (Madikeri) ತಾಲ್ಲೂಕಿನಲ್ಲಿ ಗಾಳಿ ಸಹಿತ ಅಧಿಕ ಮಳೆಯಾಗುತ್ತಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ನದಿ ನೀರಿನ ಮಟ್ಟ ಏರಿಕೆಯಾಗಿದೆ. ಮಡಿಕೇರಿಯಲ್ಲಿ ನಿರಂತರ ಗಾಳಿಮಳೆಯಾಗುತ್ತಿದ್ದು, ಮೈಕೊರೆಯುವ ಚಳಿ ಮತ್ತು ಮಂಜು ಮುಸುಕಿದ ವಾತಾವರಣದಿಂದ ಜನ ಹಾಗೂ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಮತ್ತಷ್ಟು ಬಲ – ವಾಯುಪಡೆಗೆ 3 ಅಪಾಚೆ ಹೆಲಿಕಾಪ್ಟರ್‌, ಪಾಕ್ ಗಡಿಯಲ್ಲಿ ನಿಯೋಜನೆಗೆ ನಿರ್ಧಾರ

Kodagu Rain 4

ಜಿಲ್ಲೆಯ ವಿವಿಧೆಡೆ ಮಳೆ ಮುಂದುವರೆದಿದ್ದು, ಗ್ರಾಮೀಣ ಭಾಗದಲ್ಲಿ ನಷ್ಟ ಸಂಭವಿಸುತ್ತಿದ್ದಾರೆ ಜನ. ಕೆಲವು ಗ್ರಾಮಗಳಲ್ಲಿ ಮರ, ಸಣ್ಣ ಪ್ರಮಾಣದ ಗುಡ್ಡ, ವಿದ್ಯುತ್ ಕಂಬ ಬಿದ್ದಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿದೆ. ರಸ್ತೆಗಳು ಸಂಪೂರ್ಣ ಹದಗೆಟ್ಟು ವಾಹನ ಸಂಚಾರ ದುಸ್ತರವಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಪ್ರಸ್ತುತ ವರ್ಷ ಜನವರಿಯಿಂದ ಇಲ್ಲಿಯವರೆಗೆ ನಿಗಧಿಗಿಂತ ಅಧಿಕ ಮಳೆಯಾಗಿದೆ. ಇದನ್ನೂ ಓದಿ: ಚಾ.ನಗರ| ರೈತರ ಜಮೀನಿಗೆ ನುಗ್ಗಿದ ಕಾಡಾನೆಗಳು- ಲಕ್ಷಾಂತರ ಮೌಲ್ಯದ ಬೆಳೆ ನಾಶ

ಮುಂದಿನ ದಿನಗಳಲ್ಲಿ ಮಳೆ ಮತ್ತಷ್ಟು ಹೆಚ್ಚಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜಿಲ್ಲಾಡಳಿತ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಅಲ್ಲದೇ ಡಿಸಿ ಜಿಲ್ಲಾಧಿಕಾರಿ ವೆಂಕಟರಾಜ, ಗುರುವಾರ (ಜು.17) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಸಿರಿಯಾ ಮಿಲಿಟರಿ ಹೆಡ್‌ಕ್ವಾಟ್ರಸ್‌ ಮೇಲೆ ಇಸ್ರೇಲ್ ದಾಳಿ – ಲೈವ್‌ನಿಂದಲೇ ಎದ್ದು ಓಡಿದ ಟಿವಿ ಆಂಕರ್

Share This Article