ಬೆಂಗಳೂರಿನ ಹಲವೆಡೆ ಆಲಿಕಲ್ಲು ಮಳೆ – ವಾಹನ ಸವಾರರ ಪರದಾಟ

Public TV
1 Min Read
Bengaluru Rain

– ಮುಂದಿನ 3 ಗಂಟೆಗಳಲ್ಲಿ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಹಲವಡೆ ಆಲಿಕಲ್ಲು ಸಹಿತ ಮಳೆಯಾಗಿದ್ದು (Rain),  ವಾಹನ ಸವಾರರು ಪರದಾಡಿದ್ದಾರೆ.

Bengaluru Rain 1

ಮಲ್ಲೇಶ್ವರಂ, ಕಾರ್ಪೋರೇಷನ್, ವಿಧಾನಸೌಧ, ಜಯನಗರ, ಫ್ರೇಜರ್ ಟೌನ್, ಶಿವಾಜಿನಗರ ಸುತ್ತಮುತ್ತ ವರುಣನ ಅಬ್ಬರ ಜೋರಾಗಿದೆ. 8ನೇ ಮೈಲಿ, ದಾಸರಹಳ್ಳಿ, ಮಾದಾವರ, ಮಾದನಾಯಕನಹಳ್ಳಿ ಸುತ್ತಮುತ್ತ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ನೀವು ಬರೋದು ಬೇಡ – ತನ್ನ ಪ್ರಜೆಗಳನ್ನೇ ದೇಶಕ್ಕೆ ಸೇರಿಸದ ಪಾಕ್‌

ಬೆಂಗಳೂರು ನಗರ ಹಾಗೂ ಗ್ರಾಮಾಂತರ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾಸನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಜೋರು ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಕುಡುಪು ಪ್ರಕರಣದಲ್ಲಿ ಪೊಲೀಸರು ಅಮಾಯಕರನ್ನ ಫಿಕ್ಸ್ ಮಾಡಲು ಹೊರಟಿದ್ದಾರೆ: ಭರತ್ ಶೆಟ್ಟಿ

Share This Article