ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಭಾನುವಾರ ಜಿಲ್ಲೆಯ ಮೂಡಿಗೆರೆ ಹಾಗೂ ಶೃಂಗೇರಿ ಭಾಗದಲ್ಲಿ ಧಾರಾಕಾರ ಮಳೆಯಾಗಿದರೆ ಕೊಪ್ಪ ಹಾಗೂ ಎನ್.ಆರ್.ಪುರದಲ್ಲಿ ಸಾಧಾರಣ ಮಳೆಯಾಗಿದೆ.
ಮೂಡಿಗೆರೆ ತಾಲೂಕಿನ ಕಳಸ ಭಾಗದಲ್ಲಿ ಧಾರಾಕಾರ ಮಳೆಯಾಗಿದ್ದು, ಆಲಿಕಲ್ಲು ಸಮೇತ ವರುಣ ಅಬ್ಬರಿಸಿದ್ದಾನೆ. ಬೃಹತ್ ಗಾತ್ರದ ಆಲಿಕಲ್ಲನ್ನು ಹಿಡಿದು ಯುವಕರು ಫೋಟೋ ಕ್ಲಿಕ್ಕಿಸಿಕೊಂಡು ಖುಷಿ ಪಟ್ಟಿದ್ದಾರೆ. ಇತ್ತ ಶೃಂಗೇರಿಯ ಸುತ್ತಮುತ್ತಲೂ ಭಾರೀ ಮಳೆಯಾಗಿದೆ.
Advertisement
Advertisement
ಮಳೆ ದೇವರೆಂದೇ ಖ್ಯಾತಿಯಾಗಿರುವ ಕಿಗ್ಗಾದ ಋಷ್ಯಶೃಂಗ ದೇವಾಲಯ ಸುತ್ತಮುತ್ತಲೂ ವರುಣನ ಅಬ್ಬರ ಮುಂದುವರಿದಿದೆ. ಕೊಪ್ಪ ತಾಲೂಕಿನ ತೆಂಗಿನಮನೆ, ಕಲ್ಕೆರೆ, ಜಯಪುರ ಸುತ್ತವೂ ಧಾರಾಕಾರ ಮಳೆಯಾಗಿದೆ. ಶೃಂಗೇರಿಯ ಮೆಣಸೆ ಬಳಿ ಭಾರೀ ಮಳೆ ಗಾಳಿಗೆ ಮರ ಧರೆಗುರುಳಿದೆ. ಭಾರೀ ಗಾಳಿಗೆ ವಿದ್ಯುತ್ ತಂತಿ ಮೇಲೆ ಮರ ಬಿದ್ದಿದ್ದು, ಲೈಟ್ ಕಂಬ ಕೂಡ ಮುರಿದು ಧರೆಗುರುಳಿದೆ.
Advertisement
ದಿನಬಿಟ್ಟು ದಿನ ಸುರಿಯುತ್ತಿರುವ ಭಾರೀ ಮಳೆಗೆ ಮಲೆನಾಡಿಗರು ಕಂಗಾಲಾಗಿದ್ದಾರೆ. ಕಳೆದ ವರ್ಷದಂತೆ ಈ ವರ್ಷವೂ ನಮ್ಮ ಬದುಕು ನೀರಲ್ಲಿ ತೊಯ್ದು ಹೋಗುತ್ತೇನೋ ಎಂದು ಆತಂಕಕ್ಕೀಡಾಗಿದ್ದಾರೆ.