ಬಳ್ಳಾರಿ: ಜಿಲ್ಲೆಯಲ್ಲಿ ಸುರಿದ ಆಲಿಕಲ್ಲು (Hailstorm) ಸಹಿತ ಭಾರೀ ಮಳೆಯಿಂದ (Rain) ಬೆಳೆಗಳು ಹಾಳಾಗಿದ್ದು ಅನ್ನದಾತರು (Farmers) ಸಂಕಷ್ಟಕ್ಕೀಡಾಗಿದ್ದಾರೆ. ಮಳೆಗೆ ಭತ್ತದ ಬೆಳೆ ಸಂಪೂರ್ಣ ಹಾಳಾಗಿದ್ದು ರೈತರು ಸಾಲದ ಸುಳಿಗೆ ಸಿಲುಕುವಂತಾಗಿದೆ.
ಕಂಪ್ಲಿ (Kampli) ತಾಲೂಕಿನ ವ್ಯಾಪ್ತಿಯ 150 ಎಕರೆಗೂ ಅಧಿಕ ಭತ್ತದ ಬೆಳೆ ಆಲಿಕಲ್ಲು ಮಳೆಗೆ ನಾಶವಾಗಿದೆ. ಈಗಾಗಲೇ ಭತ್ತ ಕಟಾವಿಗೆ ಬಂದಿತ್ತು. ಆದರೆ ಮಳೆಗೆ ಕಟಾವಿಗೆ ಬಂದಿದ್ದ ಭತ್ತದ ಬೆಳೆ ಹಾಳಾಗಿದೆ. ಬೆಳೆ ಹಾಳಾಗಿದ್ರೂ ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮೋದಿ
ಲಕ್ಷಾಂತರ ಖರ್ಚು ಮಾಡಿ ಬೆಳೆ ಬೆಳೆದಿದ್ದೆವು. ಆದರೆ ಇನ್ನೇನು ಬೆಳೆ ಕಟಾವು ಮಾಡಬೇಕು ಎನ್ನುವಷ್ಟರಲ್ಲಿ ಮಳೆರಾಯ ಆಹುತಿ ಪಡೆದಿದ್ದಾನೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು, ನಾವು ಸಾಲದ ಸುಳಿಗೆ ಸಿಲುಕಿದ್ದೇವೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: Anytime, Anywhere – ಬ್ರಹ್ಮೋಸ್ ಹಾರಿಸಿ ಎಲ್ಲದ್ದಕ್ಕೂ ಸಿದ್ಧ ಎಂದ ನೌಕಾಸೇನೆ
ಜಯನಗರ ಜಿಲ್ಲೆಯಾದ್ಯಂತ ಭಾರಿ ಗಾಳಿ, ಸಿಡಿಲು ಸಹಿತ ಸುರಿದ ಮಳೆಗೆ ಹಲವು ಅವಾಂತರ ಸೃಷ್ಟಿಯಾಗಿವೆ. ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ತುಂಬಿನಕೇರಿ ತಾಂಡಾದಲ್ಲಿ ರೈತ ಸಂಕ್ರನಾಯ್ಕ್ ಎನ್ನುವವರಿಗೆ ಸೇರಿದ್ದ ಎತ್ತು ಸಿಡಿಲು ಬಡಿದು ಸಾವನ್ನಪ್ಪಿದೆ. ಪೂರ್ವ ಮುಂಗಾರು ಮಳೆ ಉತ್ತಮವಾಗಿದ್ದರಿಂದ ಕೃಷಿ ಚಟುವಟಿಕೆ ಚುರುಕುಕೊಂಡಿದೆ. ಹೀಗಾಗಿ ವಾರದ ಹಿಂದೆಯಷ್ಟೇ ಸಂಕ್ರಾನಾಯ್ಕ್ ಎತ್ತು ಖರೀದಿಸಿದ್ದರು.
ಲ್ಲೆಯ ಹಲವೆಡೆ ಬಾರಿ ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ರಾಜ್ಯ ಹೆದ್ದಾರಿ 25 ರ ಉಪನಾಯಕನಹಳ್ಳಿ ಗ್ರಾಮದ ಲಕ್ಷ್ಮೀ ಪೌಲ್ಟ್ರೀ ಫಾರಂ ಬಳಿ ರಸ್ತೆಗೆ ಮರಗಳು ಉರುಳಿ ಬಿದ್ದಿವೆ.