– ಹಾವೇರಿಯಲ್ಲೂ ಬಿರುಗಾಳಿ, ಗುಡುಗು ಸಹಿತ ಮಳೆ
ಹಾಸನ: ಜಿಲ್ಲೆಯ ಅರಸೀಕೆರೆ (Arasikere) ನಗರ ಸೇರಿದಂತೆ, ತಾಲೂಕಿನ ಅಲ್ಲಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಳ್ಳುವುದರ ಜೊತೆಗೆ ಅಪಾರ ಪ್ರಮಾಣದ ಹಾನಿ ಕೂಡ ಸಂಭವಿಸಿದೆ.
ಬೇಸಿಗೆ ಬಿಸಿಲಿನ ತಾಪಕ್ಕೆ ನಲುಗಿದ್ದ ಜನತೆಗೆ ರಾತ್ರಿ ಸುರಿದ ಆಲಿಕಲ್ಲು ಸಹಿತ ಮಳೆ (Hailstorm) ಸ್ವಲ್ಪಮಟ್ಟಿಗೆ ವಾತಾವರಣವನ್ನು ತಂಪು ಮಾಡಿರುವುದು ಸಂತಸ ತರಿಸಿದ್ದರೆ, ಮಳೆಯ ಜೊತೆಗೆ ಬೀಸಿದ ಬಿರುಗಾಳಿ ಹಲವು ಮನೆಗಳ ಮೇಲ್ಛಾವಣಿಯನ್ನು ನೆಲಕ್ಕೆ ಬೀಳಿಸಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಇದನ್ನೂ ಓದಿ: ಕಾಶ್ಮೀರದ ಹಲವೆಡೆ ಭದ್ರತಾ ಸಿಬ್ಬಂದಿ ಭರ್ಜರಿ ಕಾರ್ಯಾಚರಣೆ – ಇದುವರೆಗೆ 175ಕ್ಕೂ ಹೆಚ್ಚು ಮಂದಿ ವಶಕ್ಕೆ
ತಾಲೂಕು ದಂಡಾಧಿಕಾರಿ ಸಂತೋಷ್‌ಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಕಾರ್ಯಾಚರಣೆಗೆ ಇಳಿದಿದ್ದು, ತೊಂದರೆಗೆ ಸಿಲುಕಿರುವ ರೈತರು, ಜನರ ಆಗು ಹೋಗುಗಳಿಗೆ ಸ್ಪಂದಿಸುತ್ತಿದ್ದಾರೆ. ಮಳೆಯ ನಡುವೆಯೇ ನಗರದ ತಗ್ಗು ಪ್ರದೇಶದ ಬಡಾವಣೆಗಳಿಗೆ ಭೇಟಿ ನೀಡಿದ ತಹಶೀಲ್ದಾರ್ ಸಂತೋಷ್ ಕುಮಾರ್ ಮತ್ತು ನಗರಸಭೆ ಅಧಿಕಾರಿಗಳು ಮಳೆ, ಗಾಳಿಯಿಂದ ಹಾನಿಗೊಳಗಾದ ಮನೆಗಳನ್ನು ಪರಿಶೀಲಿಸಿದರು. ಅಲ್ಲದೇ ನಿರಾಶ್ರಿತರಿಗೆ ಸೂಕ್ತ ಪರಿಹಾರ ದೊರಕಿಸಿ ಕೊಡುವ ಭರವಸೆ ನೀಡಿದರು. ಇದನ್ನೂ ಓದಿ: ನಾನು ಭಾರತದ ಸೊಸೆ, ಇಲ್ಲೇ ಇರುತ್ತೇನೆ: ಸೀಮಾ ಹೈದರ್
ಇನ್ನು ಹಾವೇರಿ (Haveri) ಜಿಲ್ಲೆಯ ಹಲವೆಡೆ ಬಿರುಗಾಳಿ ಮತ್ತು ಗುಡುಗು ಸಿಡಿಲು ಸಮೇತ ಧಾರಾಕಾರವಾಗಿ ಮಳೆಯಾಗಿದೆ. ಹಾವೇರಿ ನಗರ ಸೇರಿದಂತೆ ಜಿಲ್ಲೆಯ ಹಲವೆಡೆಗಳಲ್ಲಿ ಬಿರುಗಾಳಿ ಬೀಸಿದ ಪರಿಣಾಮ 5ಕ್ಕೂ ಅಧಿಕ ಮರಗಳು ಧರಗೆ ಉರುಳಿವೆ. ಹೀಗಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದನ್ನೂ ಓದಿ: ಲಂಡನ್‌ನಲ್ಲಿ ಭಾರತೀಯರ ಪ್ರತಿಭಟನೆ ವೇಳೆ ಕತ್ತು ಕೊಯ್ಯುವ ಸನ್ನೆ ಮಾಡಿದ ಪಾಕ್ ಅಧಿಕಾರಿ
ಹಾವೇರಿ ಟು ಗುತ್ತಲ ರಸ್ತೆ ಬೃಹತ್ ಗಾತ್ರದ ಬೇವಿನಮರ ಬಿದ್ದು ರಸ್ತೆ ಸಂಚಾರ ಬಂದ್ ಆಗಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಮರ ತೆರವು ಕಾರ್ಯಚರಣೆ ನಡೆಸುತ್ತಿದ್ದಾರೆ. ಹಾವೇರಿ ನಗರದ ಕೆಲವು ಭಾಗಗಳಲ್ಲಿ ಬಿರುಗಾಳಿಗೆ ಮರಗಳು ಧರಗೆ ಉರುಳಿದ್ದು, ಕೆಲಕಾಲ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಬಳಿಕ ಮರಗಳ ತೆರವು ಕಾರ್ಯಚರಣೆ ಮಾಡಲಾಗಿದೆ. ಇದನ್ನೂ ಓದಿ: ಇರಾನ್‌ನ ಪೋರ್ಟ್ ಸಿಟಿಯಲ್ಲಿ ಬಾಂಬ್ ಸ್ಫೋಟ – ನಾಲ್ವರು ಸಾವು, 500ಕ್ಕೂ ಹೆಚ್ಚು ಜನರಿಗೆ ಗಾಯ