ಚೆನ್ನೈ: ಚಲಿಸುತ್ತಿದ್ದ ಖಾಸಗಿ ಬಸ್‍ನಿಂದ ಮಹಿಳೆ ಮತ್ತು ಮಗು ರಸ್ತೆ ಮೇಲೆ ಬಿದ್ದು, ಸಾವಿನದವಡೆಯಿಂದ ಪಾರಾದ ಮೈ ಜುಮ್ ಎನಿಸುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ತಮಿಳುನಾಡಿನ (Tamil Nadu) ಕಡಲೂರು ಜಿಲ್ಲೆಯ (Cuddalore District) ಜನನಿಬಿಡ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಈ ಘಟನೆಯ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೇವಲ ಒಂದು ನಿಮಿಷವಿರುವ ಈ ವೀಡಿಯೋದಲ್ಲಿ ಮಗುವನ್ನು ಹೊತ್ತೊಯ್ಯುತ್ತಿದ್ದ ಮಹಿಳೆ ಬಸ್‍ನಿಂದ ಏಕಾಏಕಿ ಕೆಳಗೆ ಬಿದ್ದಿದ್ದಾರೆ. ಆದರೆ ಈ ವೇಳೆ ಬಸ್ ಅನ್ನು ತಕ್ಷಣವೇ ನಿಲ್ಲಿಸಿದ್ದರಿಂದ ಪವಾಡ ಸದೃಶವಾಗಿ ತಾಯಿ, ಮಗು ಇಬ್ಬರು ಬಚಾವ್ ಆಗಿದ್ದಾರೆ. ಈ ವೇಳೆ ತಕ್ಷಣ ಸ್ಥಳಕ್ಕೆ ಧಾವಿಸಿದ ಜನರು ಮಹಿಳೆಗೆ ಏನಾದರೂ ಸಹಾಯ ಬೇಕಾ ಎಂದು ಕೇಳುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.
Advertisement
Advertisement
ಕಡಲೂರಿನಿಂದ ಪನ್ರುತಿ ಮತ್ತು ವಿಲ್ಲುಪುರಂಗೆ ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸರ್ಕಾರಿ ಮತ್ತು ಖಾಸಗಿ ಬಸ್‍ಗಳಲ್ಲಿ ಪ್ರಯಾಣಿಸುತ್ತಿರುತ್ತಾರೆ. ಪನ್ರುತಿಯಿಂದ ಕಡಲೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ನೆಲ್ಲಿಕುಪ್ಪಂ ಬಳಿ ಅತಿವೇಗವಾಗಿ ಬಂದು ಏಕಾಏಕಿ ಬ್ರೇಕ್ ಹಾಕಿದೆ. ಈ ವೇಳೆ ಬಸ್ಸಿನೊಳಗೆ ಮೆಟ್ಟಿಲುಗಳ ಬಳಿ ಮಗುವನ್ನು ಹಿಡಿದುಕೊಂಡು ಕುಳಿತಿದ್ದ ಮಹಿಳೆ ಮಗುವಿನೊಂದಿಗೆ ಮೆಟ್ಟಿಲುಗಳಿಂದ ಕೆಳಗೆ ಬಿದ್ದಿದ್ದಾರೆ. ಇದನ್ನೂ ಓದಿ: ನೀವು ಒಬ್ಬರನ್ನ ಮದ್ವೆಯಾಗಿ ಮೂವರನ್ನ ಇಟ್ಟುಕೊಳ್ತೀರಾ – ಹಿಂದೂಗಳ ಟೀಕಿಸಿದ್ದ ಶೌಕತ್ ಅಲಿ ವಿರುದ್ಧ ಕೇಸ್
Advertisement
Advertisement
ಇದೀಗ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಘಟನೆ ಸಂಬಂಧ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಇದುವರೆಗೆ ಈ ಬಗ್ಗೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ. ಇದನ್ನೂ ಓದಿ: 10ರ ಬಾಲಕಿಯನ್ನು ರೇಪ್ ಮಾಡಿ ಕೊಲೆ ಮಾಡಿದ್ದ ವ್ಯಕ್ತಿಗೆ ಮರಣದಂಡನೆ