ಬೆಂಗಳೂರು: ಹಲಗೇವಡೇರಹಳ್ಳಿ ನೋಟಿಫಿಕೇಶನ್ ಪ್ರಕರಣದ (Halagevaderahalli Denotification Case) ವಿಚಾರಣೆಗೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ (HD Kumaraswamy) ಮತ್ತೊಮ್ಮೆ ಗೈರಾಗಿದ್ದಾರೆ.
ಅಧಿಕ ರಕ್ತದೊತ್ತಡ ಕಾರಣ ನೀಡಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ (Special Courts for MP/MLA) ವಿಚಾರಣೆಯನ್ನು ಏಪ್ರಿಲ್ 18ಕ್ಕೆ ಮುಂದೂಡಿದೆ.
Advertisement
ಫೆ.16ರ ವಿಚಾರಣೆಗೆ ಕುಮಾರಸ್ವಾಮಿ ಗೈರಾಗಿದ್ದರು. ಈ ಸಂದರ್ಭದಲ್ಲಿ ಕೋರ್ಟ್ ವಿಚಾರಣೆಯನ್ನು ಮಾರ್ಚ್ 21ಕ್ಕೆ ಮುಂದೂಡಿ ಕಡ್ಡಾಯವಾಗಿ ಹಾಜರಾಗಬೇಕೆಂದು ಸೂಚಿಸಿತ್ತು. ಹಲವು ಬಾರಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಖುದ್ದು ಹಾಜರಾಗುವಂತೆ ಸೂಚಿಸಿತ್ತು. ಇದನ್ನೂ ಓದಿ: ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ : ನಟನ ನಿವಾಸಕ್ಕೆ ಫುಲ್ ಸೆಕ್ಯೂರಿಟಿ
Advertisement
Advertisement
ಕುಮಾರಸ್ವಾಮಿ ಸಿಎಂ ಆಗಿದ್ದಾಗ 2006 ರಲ್ಲಿ ಕಾನೂನು ಬಾಹಿರವಾಗಿ ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿ ಬಳಿ ಸರ್ವೇ ನಂಬರ್ 128, 130 ರಲ್ಲಿ 2.24 ಎಕರೆ ಭೂಮಿಯನ್ನು ಡಿನೋಟಿಫಿಕೇಶನ್ ಮಾಡಿದ್ದರು. ಈ ಡಿನೋಟಿಫಿಕೇಶನ್ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಚಾಮರಾಜನಗರ ಮೂಲದ ರೈತ ಮಹದೇವಸ್ವಾಮಿ ಲೋಕಾಯುಕ್ತದಲ್ಲಿ 2012ರಲ್ಲಿ ದೂರು ನೀಡಿದ್ದರು. ಈ ಪ್ರಕರಣದ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು 2018ರಲ್ಲಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದನ್ನೂ ಓದಿ: ಅಮೆಜಾನ್ನಲ್ಲಿ 2ನೇ ಸುತ್ತಿನ ವಜಾ ಪ್ರಕ್ರಿಯೆ ಆರಂಭ – 3 ತಿಂಗಳೊಳಗೆ 27 ಸಾವಿರ ಮಂದಿ ಮನೆಗೆ
Advertisement
ಬಿ ರಿಪೋರ್ಟ್ ಪ್ರಶ್ನಿಸಿ ಮಹದೇವಸ್ವಾಮಿ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯಕ್ಕೆ ದೂರು ನೀಡಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಬಿ ರಿಪೋರ್ಟ್ ವಜಾಗೊಳಿಸಿ ವಿಚಾರಣೆ ಕೈಗೆತ್ತಿಕೊಂಡು ವಿಚಾರಣೆಗೆ ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು.