DharwadDistrictsKarnatakaLatestMain Post

ಪ್ರಿಯಾಂಕ್ ಖರ್ಗೆ ಸರ್ಟಿಫಿಕೇಟ್ ನಮಗೆ ಬೇಕಾಗಿಲ್ಲ: ಹಾಲಪ್ಪ ಆಚಾರ್

ಧಾರವಾಡ: ಪ್ರಿಯಾಂಕ್ ಖರ್ಗೆ ಅವರ ಸರ್ಟಿಫಿಕೇಟ್ ನಮಗೆ ಬೇಕಾಗಿಲ್ಲ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಅವರು ತಿರುಗೇಟು ನೀಡಿದ್ದಾರೆ.

ಬಿಜೆಪಿಯವರು ಕೇವಲ ದುಡ್ಡು ಮಾಡುತ್ತಿದ್ದಾರೆ ಎಂಬ ಶಾಸಕ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಕುರಿತಂತೆ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಅಧಿಕಾರ ನಡೆಸಿದ ಕಾಂಗ್ರೆಸ್ಸಿಗರ ಆಡಳಿತ ನೋಡಿಯೇ ಜನ ಈಗ ನರೇಂದ್ರ ಮೋದಿ ಅವರಿಗೆ ಅಧಿಕಾರ ನೀಡಿದ್ದಾರೆ. ಮುಂದೆಯೂ ನರೇಂದ್ರ ಮೋದಿ ಅವರೇ ಅಧಿಕಾರಕ್ಕೆ ಬರುತ್ತಾರೆ. ಪ್ರಿಯಾಂಕ್ ಖರ್ಗೆ ಅವರ ಸರ್ಟಿಫಿಕೇಟ್ ನಮಗೆ ಬೇಕಾಗಿಲ್ಲ ಎಂದರು. ಇದನ್ನೂ ಓದಿ: ರಾಜವಂಶಗಳು ತಮ್ಮ ಸ್ವಾರ್ಥಕ್ಕೆ ಉಕ್ರೇನ್ ಸಮಸ್ಯೆಯನ್ನ ಬಳಸಿಕೊಳ್ಳುತ್ತೀವೆ: ಮೋದಿ ಕಿಡಿ

ಸಿಎಂ ಬೊಮ್ಮಾಯಿ ಅವರ ಬಜೆಟ್ ಎಲ್ಲರಿಗೂ ತೃಪ್ತಿ ತಂದಿದೆ. ನೀರಾವರಿ ಹಾಗೂ ರೈತರಿಗೆ ಅನುಕೂಲವಾಗುವಂತೆ ಬಜೆಟ್ ಮಂಡನೆ ಮಾಡಲಾಗಿದೆ. ಪ್ರತಿಯೊಂದು ನೀರಾವರಿ ಯೋಜನೆಗೂ ಸುಮ್ಮನೆ ದುಡ್ಡು ಇಡುವುದಿಲ್ಲ. ಎಲ್ಲದಕ್ಕೂ ಅನುಕೂಲ ಆಗಲಿ ಎಂದು ದುಡ್ಡು ಇಡಲಾಗುತ್ತದೆ ಎಂದು ಹೇಳಿದರು.

ಇದೇ ವೇಳೆ ಮಹಾದಾಯಿ ಯೋಜನೆ ಜಾರಿಗೆ ಬಗ್ಗೆ ಸಿಎಂ ಮುತುವರ್ಜಿ ವಹಿಸುತ್ತಾರೆ. ಅವರು ಇದೇ ಜಿಲ್ಲೆಯವರು. ಖಂಡಿತ ಈ ಬಗ್ಗೆ ಸಿಎಂ ತ್ವರಿತಗತಿಯಲ್ಲಿ ಕೆಲಸ ಮಾಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಜೀವದ ಮೇಲೆ ಅಸೆ ಬಿಟ್ಟು, ಒಂದು ವಾರ ನಡೆದುಕೊಂಡು ಬಂದು ಉಕ್ರೇನ್ ದಾಟಿದೆ: ಸೀನ್ಯ

Leave a Reply

Your email address will not be published.

Back to top button