ಕೊಪ್ಪಳ: ಭವಿಷ್ಯದಲ್ಲಿ ಮುರುಗೇಶ ನಿರಾಣಿ ಸಿಎಂ ಆಗಬಹುದು ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವ ಹಾಲಪ್ಪಆಚಾರ್ ಭವಿಷ್ಯ ನುಡಿದಿದ್ದಾರೆ.
ಸಿಎಂ ಬದಲಾವಣೆ ಬಗ್ಗೆ ಗ್ರಾಮೀಣ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ಹೇಳಿಕೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಬಗ್ಗೆ ಸಚಿವ ಈಶ್ವರಪ್ಪ ಅವರೊಂದಿಗೆ ನಾನು ಮಾತನಾಡಿದ್ದೇನೆ. ಭವಿಷ್ಯದಲ್ಲಿ ಮುರುಗೇಶ ನಿರಾಣಿ ಸಿಎಂ ಆಗಬಹುದು ಎಂದಿದ್ದಾರೆ. ಹಾಗೆಂದ ಮಾತ್ರಕ್ಕೆ ಈಗಲೇ ಸಿಎಂ ಬದಲಾವಣೆ ಅಂತಾ ಅಲ್ಲ. ನಿರಾಣಿ ಅವರಿಗೆ ಸಣ್ಣ ವಯಸ್ಸು. ಮುಂದೆ ಯಾವಾಗಲೋ ಆಗಬಹುದು ಅಂತಾ ಹೇಳಿರಬಹುದು. ಅದಕ್ಕೆ ನಾವು ಇವತ್ತೇ ಬದಲಾವಣೆ ಅಂತಾ ಅರ್ಥ ಮಾಡಿಕೊಳ್ಳಬೇಡಿ. ಬಿಜೆಪಿ ವ್ಯಕ್ತಿ ಆಧಾರಿತ ಪಕ್ಷ ಅಲ್ಲ ಎಂದು ಹೇಳಿದರು. ಇದನ್ನೂ ಓದಿ: ಎವರ್ ಗ್ರೀನ್ ಹೀರೋಯಿನ್ ಸುಧಾರಾಣಿ ಇನ್ಮುಂದೆ ಡಾ.ಸುಧಾರಾಣಿ
Advertisement
Advertisement
ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆ ಪ್ರತಿಕ್ರಿಯೆ ನೀಡಿದ ಅವರು, ಕೊಪ್ಪಳ – ರಾಯಚೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ. ಎಲ್ಲ ಸ್ಥಳೀಯ ಸಂಸ್ಥೆ ಸದಸ್ಯರು ಬಿಜೆಪಿ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಒಟ್ಟು 6,249 ಮತಗಳಿವೆ ಈ ಪೈಕಿ.ಶೇ 70ರಷ್ಟು ಮತ ಪಡೆಯುತ್ತೇವೆ. ಕೇಂದ್ರ, ರಾಜ್ಯ ಸರ್ಕಾರ ಮಾಡಿದ ಕೆಲಸ ಮುಂದಿಟ್ಟುಕೊಂಡು ಮತ ಕೇಳುತ್ತೇವೆ. ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Advertisement
Advertisement
ಓಮಿಕ್ರಾನ್ ಹರಡುವ ಆತಂಕದ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಹಾಲಪ್ಪ, ಈಗಿರುವ ಕೋವಿಡ್ ಮಾರ್ಗಸೂಚಿ ಕಟ್ಟು ನಿಟ್ಟಾಗಿ ಜಾರಿಗೆ ಮಾಡುತ್ತೇವೆ. ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕೊರೊನಾ ಬಗ್ಗೆ ಇಂದೇ ವಿಶೇಷ ಸಭೆ ಕರೆದು ಚರ್ಚೆ ಮಾಡುತ್ತೇವೆ. ಇಡೀ ರಾಜ್ಯದಲ್ಲಿ ಓಮಿಕ್ರಾನ್ ಪತ್ತೆ ಆಗಿರುವ ಮಾಹಿತಿ ಇಲ್ಲ ಎಂದರು.