ಭುವನೇಶ್ವರ್: ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚಿಸಿ (Fraud case) ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ (Chaitra Kundapura) ಗ್ಯಾಂಗ್‍ನ ಎ3 ಆರೋಪಿ ಅಭಿನವ ಹಾಲಶ್ರೀಯನ್ನು (Halashree) ಸಿಸಿಬಿ ಒಡಿಸ್ಸಾದಲ್ಲಿ ಬಂಧಿಸಿದೆ.
ಪ್ರಕರಣ ದಾಖಲಾದಾಗಿನಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಇದೀಗ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದು, ಬೆಂಗಳೂರಿಗೆ ಕರೆತರಲಾಗುತ್ತಿದೆ. ಆರೋಪಿ ಬಂಧನಕ್ಕೆ ಸಿಸಿಬಿ ಅಧಿಕಾರಿಗಳು ತೀವ್ರ ಹುಡುಕಾಟ ನಡೆಸುತ್ತಿದ್ದರು. ಹೈದರಾಬಾದ್‍ನಲ್ಲಿ ಅಡಗಿದ್ದ ಮಾಹಿತಿ ಮೇರೆಗೆ ಅಲ್ಲಿಗೂ ಅಧಿಕಾರಿಗಳ ತಂಡವನ್ನು ಕಳುಹಿಸಲಾಗಿತ್ತು. ಅಲ್ಲದೇ ಸ್ವಾಮೀಜಿ ಆಪ್ತರ ತೀವ್ರ ವಿಚಾರಣೆ ಕೂಡ ನಡೆಸಲಾಗಿತ್ತು. ಇದೀಗ ಒಡಿಸ್ಸಾದ ಹೋಟೆಲ್ ಒಂದರಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಕೋಟಿ ಕೋಟಿ ವಂಚನೆ ಪ್ರಕರಣ – ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿಗೆ ಸಿಸಿಬಿ ಆಕ್ಷೇಪಣೆ ಸಾಧ್ಯತೆ
ಆರೋಪಿ ಹಾಲಶ್ರೀ ಫೋನ್ ಬಳಸದೆ ಪದೇ ಪದೇ ಇರುವ ಸ್ಥಳ ಬದಲಾಯಿಸುತ್ತಿದ್ದು, ಬಂಧನಕ್ಕೆ ಸ್ವಲ್ಪ ಕಷ್ಟವಾಗಿತ್ತು. ಆದರೆ ಇದೀಗ ಆರೋಪಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವುದು ಖಚಿತವಾಗಿದೆ. ಸ್ವಾಮೀಜಿಗಾಗಿ ಪ್ರತ್ಯೇಕವಾಗಿ ಎರಡು ತಂಡಗಳು ಕಾರ್ಯಚರಣೆ ನಡೆಸುತ್ತಿದ್ದವು. ಇದನ್ನೂ ಓದಿ: ಚೈತ್ರಾ ಕುಂದಾಪುರ ಡೀಲ್ ಕೇಸ್- RSS ಕದ ತಟ್ಟಿದ್ದ ಗೋವಿಂದ ಪೂಜಾರಿ!
Web Stories