ನವದೆಹಲಿ: ಕಾಶಿ ವಿಶ್ವನಾಥ್ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿ ಸಿವಿಲ್ ಕೋರ್ಟ್ ನಡೆಸುತ್ತಿದ್ದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಸೀದಿಯ ಆವರಣದಲ್ಲಿ ವೀಡಿಯೋಗ್ರಫಿ ಸರ್ವೆಗೆ ಆದೇಶ ನೀಡಿದ ವಾರಣಾಸಿ ಸಿವಿಲ್ ಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಗೆ ಇಂದು ಸುಪ್ರೀಂಕೋರ್ಟ್ ಸಮ್ಮತಿ ಸೂಚಿಸಿದೆ. ಅಂಜುಮನ್ ಇಂತೇಜಾಮೀಯ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಡಿ.ವೈ ಚಂದ್ರಚೂಡ್ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆಗೆ ಒಪ್ಪಿಗೆ ಸೂಚಿಸಿತು. ಇದನ್ನೂ ಓದಿ: ಕೊರೊನಾ ಲಸಿಕೆಯಂತೆ ಗೋಧಿ ರಫ್ತು ಮಾಡಲಾಗುದಿಲ್ಲ: ಭಾರತ
Advertisement
Advertisement
ವಿಚಾರಣೆ ವೇಳೆ ವಾದ ಮಂಡಿಸಿದ ಹಿಂದೂಪರ ಸಂಘಟನೆಗಳ ವಕೀಲರು, ವಾರಣಾಸಿ ಸಿವಿಲ್ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ ಅರ್ಜಿದಾರರ ಪರ ವಕೀಲರು ಅನಾರೋಗ್ಯಕ್ಕೀಡಾಗಿದ್ದು ನಿನ್ನೆಯಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನಾಳೆ ಅವರು ಕೋರ್ಟ್‌ಗೆ ಹಾಜರಾಗಲಿದ್ದು, ನಾಳೆ ಈ ಬಗ್ಗೆ ವಿಸ್ತೃತ ವಿಚಾರಣೆ ನಡೆಸಿ ಎಂದು ಮನವಿ ಮಾಡಿದರು.
Advertisement
ಈ ವೇಳೆ ಮಧ್ಯಪ್ರದೇಶ ಮಾಡಿದ ಮಸೀದಿ ಪರ ವಕೀಲರು, ವಾರಣಾಸಿ ಸಿವಿಲ್ ಕೋರ್ಟ್‌ನಲ್ಲಿ ಮಸೀದಿಯ ಗೋಡೆ ಕೆಡವಿ ಉತ್ಕನನ ನಡೆಸಲು ಮತ್ತು ವಝುಖಾನ ಕೆಳಭಾಗದಲ್ಲಿ ಪರಿಶೀಲನೆ ನಡೆಸಲು ಸೂಚನೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದು, ಇಂದು ಈ ಅರ್ಜಿಗಳು ವಿಚಾರಣೆಗೆ ಬರಲಿದೆ. ಇಂದು ಟ್ರಯಲ್ ಕೋರ್ಟ್ ಈ ಬಗ್ಗೆ ಆದೇಶ ನೀಡುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದರು. ಇದನ್ನೂ ಓದಿ: ಜನಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಶಾಕ್ – 1,000 ರೂ. ದಾಟಿದ LPG ಸಿಲಿಂಡರ್ ದರ
Advertisement
ವಾದ ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ ನಾಳೆ ಈ ಬಗ್ಗೆ ವಿಚಾರಣೆ ನಡೆಸಲಾವುದು ಅಲ್ಲಿಯವರೆಗೂ ವಾರಣಾಸಿ ಸಿವಿಲ್ ಕೋರ್ಟ್‌ಗೆ ಅರ್ಜಿದಾರರು ಹೋಗದಂತೆ ಹಾಗೂ ಆದೇಶಕ್ಕಾಗಿ ಕೋರ್ಟ್‌ಗೆ ಒತ್ತಾಯಿಸಿದಂತೆ ತಿಳಿಸಲು ಸೂಚನೆ ನೀಡಿತು. ಅಲ್ಲದೇ ಈ ಸಂಬಂಧ ಯಾವುದೇ ಆದೇಶಗಳನ್ನು ನೀಡದಂತೆ ಸಿವಿಲ್ ಕೋರ್ಟ್‌ಗೂ ಸೂಚನೆ ನೀಡಿತು.
ಈ ಹಿಂದೆ ಪ್ರಕರಣ ವಿಚಾರಣೆ ನಡೆಸಿದ್ದ ಕೋರ್ಟ್, ಪತ್ತೆಯಾಗಿರುವ ಶಿವಲಿಂಗವನ್ನು ಸಂರಕ್ಷಣೆ ಮಾಡಬೇಕು. ಈ ಭಾಗದಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಬೇಕು ಎಂದು ಸೂಚಿಸಿ ಮಸೀದಿಯ ಭಾಗದಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿತ್ತು. ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ. ಇದನ್ನೂ ಓದಿ: ಅಸ್ಸಾಂನಲ್ಲಿ ಭೀಕರ ಪ್ರವಾಹ – 9 ಮಂದಿ ಸಾವು, ಸಂಕಷ್ಟದಲ್ಲಿ ಲಕ್ಷಾಂತರ ಜನ