ಟೆಲ್ ಅವಿವ್: ಇಸ್ರೇಲ್ (Israel) ಮೇಲೆ ಹಮಾಸ್ ಉಗ್ರರು (Hamas Militants) ನಡೆಸಿದ ದಾಳಿಯಲ್ಲಿ 300ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ. ದಾಳಿ ವೇಳೆ ಹಮಾಸ್ ಉಗ್ರರು ಇಸ್ರೇಲಿ ಮಹಿಳೆಯೊಬ್ಬರ (Israeli Woman) ಬೆತ್ತಲೆ ದೇಹವನ್ನು ತೆರೆದ ಟ್ರಕ್‌ನಲ್ಲಿ (Open Truck) ಮೆರವಣಿಗೆ (Parade) ಮಾಡಿ ಕ್ರೌರ್ಯ ಮೆರೆದಿದ್ದಾರೆ.
ದಾಳಿ ವೇಳೆ ಹುತಾತ್ಮರಾದ ಅಮಾಯಕ ನಾಗರಿಕರ ಮೃತದೇಹಗಳನ್ನು ತೆರೆದ ಟ್ರಕ್‌ನಲ್ಲಿ ಇರಿಸಿ ಮೆರವಣಿಗೆ ಮಾಡಿದ್ದು, ಮಹಿಳೆಯ ಬೆತ್ತಲೆ ದೇಹ ಮೆರವಣಿಗೆ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಇದನ್ನೂ ಓದಿ: ಇಸ್ರೇಲ್ ಮೇಲೆ ಹಮಾಸ್ ಉಗ್ರರ ದಾಳಿ – 300ಕ್ಕೂ ಹೆಚ್ಚು ಜನ ಸಾವು
ಪ್ಯಾಲೆಸ್ಟಿನಿಯನ್ ನಾಗರೀಕರು ಮಹಿಳೆಯ ಮೃತದೇಹವನ್ನು ನಿಂದಿಸಿ ಬಳಿಕ ಉಗುಳುವುದನ್ನು ಈ ವೀಡಿಯೋದಲ್ಲಿ ನೋಡಬಹುದು. ನಂತರ ಕಪಾಳಮೋಕ್ಷ ಮಾಡುವುದನ್ನು ಸಹಾ ವೀಡಿಯೋದಲ್ಲಿ ಕಾಣಬಹುದು. ಕ್ಷಿಪಣಿ ದಾಳಿಯ ಬಳಿಕ ಪ್ಯಾಲೆಸ್ಟಿನಿಯಾದವರು ದಕ್ಷಿಣ ಇಸ್ರೇಲ್‌ಗೆ ನುಸುಳಿದ್ದು, ತೆರೆದ ಟ್ರಕ್‌ಗಳಲ್ಲಿ ಬೀದಿ ಬೀದಿ ಸುತ್ತುತ್ತಿದ್ದಾರೆ. ಈ ವೇಳೆ ರಸ್ತೆಯಲ್ಲಿ ಸಿಕ್ಕ ಸಿಕ್ಕ ನಾಗರಿಕರನ್ನು ಕೊಲ್ಲುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಇಸ್ರೇಲ್, ಪ್ಯಾಲೆಸ್ಟೈನ್ ಮಧ್ಯೆ ಕಾದಾಟ ಯಾಕೆ? 6 ದಿನ ನಡೆದ ಯುದ್ಧದಲ್ಲಿ ಏನಾಯ್ತು? – ಇಲ್ಲಿದೆ ಪೂರ್ಣ ಮಾಹಿತಿ
ಹಮಾಸ್ ಉಗ್ರರು 5ಂಕ್ಕೂ ಹೆಚ್ಚು ಇಸ್ರೇಲ್ ಸೈನಿಕರನ್ನು ಒತ್ತೆಯಾಳಾಗಿ ಇಟ್ಟುಕೊಂಡಿದೆ ಎಂದು ತಿಳಿದುಬಂದಿದೆ. ಹಲವು ವರ್ಷಗಳಲ್ಲಿ ಇಸ್ರೇಲ್ ಮೇಲೆ ಹಮಾಸ್ ನಡೆಸಿದ ಅತ್ಯಂತ ಬೃಹತ್ ದಾಳಿ ಇದಾಗಿದೆ ಎಂದು ಹೇಳಲಾಗುತ್ತಿದೆ. ಈ ದಾಳಿಯಲ್ಲಿ ಪ್ರಾಣ ಕಳೆದಕೊಂಡವರ ಸಂಖ್ಯೆ ನಿಖರವಾಗಿ ತಿಳಿದುಬಂದಿಲ್ಲ. ಇದನ್ನೂ ಓದಿ: ಇಸ್ರೇಲ್ ಒಳಗೆ ನುಗ್ಗಿದ ಉಗ್ರರು – ಸಾರ್ವಜನಿಕರ ಮೇಲೆ ಗುಂಡಿನ ಮಳೆ
ಶನಿವಾರ ಬೆಳಗ್ಗೆ ಗಾಜಾ ಪಟ್ಟಿಯಿಂದ ಇಸ್ರೇಲ್‌ಗೆ ಸುಮಾರು 5,000 ರಾಕೆಟ್‌ಗಳನ್ನು ಹಾರಿಸಿ ದಾಳಿ ನಡೆಸಲಾಯಿತು. ಕ್ಷಿಪಣಿ ದಾಳಿಯ ನೆಪದಲ್ಲಿ ಹಮಾಸ್ ಉಗ್ರರು ಇಸ್ರೇಲ್ ಗಡಿಯೊಳಗೆ ನುಸುಳಿದ್ದಾರೆ. ಸುಮಾರು 50-60 ಉಗ್ರರು ಇಸ್ರೇಲ್ ಗಡಿಯನ್ನು ಪ್ರವೇಶಿಸಿ ವಿಧ್ವಂಸಕತೆಯನ್ನು ಸೃಷ್ಟಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಗಾಜಾಪಟ್ಟಿಯಿಂದ 5,000 ರಾಕೆಟ್ ದಾಳಿ – ಯುದ್ಧ ಘೋಷಿಸಿದ ಇಸ್ರೇಲ್
Web Stories