ಬೆಂಗಳೂರು: ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಸದಸ್ಯತ್ವಕ್ಕೆ ನಾಡೋಜ ಹಂಪ ನಾಗರಾಜಯ್ಯ ರಾಜೀನಾಮೆ ನೀಡಿದ್ದು, ಈ ಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರವಾನಿಸಿದ್ದಾರೆ.
ರೋಹಿತ್ ಚಕ್ರತೀರ್ಥ ವಿರುದ್ಧ ಸಿಡಿದೆದ್ದ ಅವರು, ಕುವೆಂಪು ಕನ್ನಡ ಜ್ಞಾನಪೀಠ ಪ್ರಶಸ್ತಿ ತಂದ ಮೊದಲಿಗರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನವನ್ನು ಪ್ರಾರಂಭಿಸಿದ್ದರು. ಅಷ್ಟೇ ಅಲ್ಲದೇ ಅತ್ಯುನ್ನತ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಆದರೆ ಕುವೆಂಪು ಹಾಗೂ ಅವರ ಜನಾಂಗವನ್ನು ಅವಾಚ್ಯ ಶಬ್ದದಿಂದ ನಿಂದಿಸಿ, ರಾಷ್ಟ್ರಗೀತೆ ಹಾಗೂ ನಾಡಗೀತೆಯನ್ನು ಲೇವಡಿ ಮಾಡಿದ ವ್ಯಕ್ತಿಯ ವಿರುದ್ಧ ಕ್ರಮಕೈಗೊಂಡಿಲ್ಲ. ಬದಲಾಗಿ ಜವಾಬ್ದಾರಿ ಕೊಟ್ಟಿದ್ದಾರೆ ಎಂದು ಸರ್ಕಾರದ ಆಕ್ರೋಶ ವ್ಯಕ್ತಪಡಿಸಿದರು.
Advertisement
Advertisement
ಅಮೂಲ್ಯ ಕೃತಿಗಳಿಂದ ಹೊಸಗನ್ನಡ ಸಾಹಿತ್ಯದ ಎಲ್ಲಾ ಪ್ರಕಾರಗಳನ್ನು ಪ್ರಕಟಿಸಿ ಭಾರತೀಯ ಸಾಹಿತ್ಯದಲ್ಲಿ ಕನ್ನಡಕ್ಕೂ ಕರ್ನಾಟಕಕ್ಕೂ ಮಹಾಕವಿ ಕುವೆಂಪು ಅವರು ಗೌರವ ತಂದರು. ಇಂತಹವರನ್ನು ನಿಂದಿಸಿರುವುದು ಅಪಾಯಕಾರಿ ಬೆಳವಣಿಗೆ ಆಗಿದೆ. ಇದರಿಂದ ತಪ್ಪು ಸಂದೇಶಗಳು ರವಾನೆ ಮಾಡಿದಂತಾಗಿದೆ. ವ್ಯಕ್ತಿಗಳ ತೇಜೋವಧೆ ಮಾಡುವುದನ್ನು ಸರ್ಕಾರ ಸಹಿಸುವುದಿಲ್ಲ ಎಂಬ ನಂಬಿಕೆಯೂ ಹುಸಿಯಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮಂಗಳೂರಿನಲ್ಲಿ ಹಿಜಬ್ ಹೈಡ್ರಾಮಾ – 12 ಮಂದಿ ಮನೆಗೆ ವಾಪಸ್
Advertisement
Advertisement
ರಾಷ್ಟ್ರಗೀತೆ, ನಾಡಗೀತೆ, ರಾಷ್ಟ್ರಕವಿ ಕುವೆಂಪು ಅವರನ್ನು ಅಪಮಾನಿಸುತ್ತಿದ್ದರೂ ನೋಡಿಕೊಂಡು ಸುಮ್ಮನಿರುವುದು ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸುಪ್ರೀಂ ಹಿರಿಯ ವಕೀಲ ಸಂಕೇತ ಏಣಗಿ ಬಿಜೆಪಿಗೆ ಸೆಳೆಯಲು ಲಿಂಗಾಯತ ನಾಯಕರ ಸರ್ಕಸ್