ಬಳ್ಳಾರಿ: ಫೆ.13 ರಿಂದ 15ರ ವರೆಗೆ ಮೂರು ದಿನಗಳ ಕಾಲ ಹಂಪಿ ಉತ್ಸವದ (Hampi Utsava) ಹಿನ್ನೆಲೆ ಬುಧವಾರ (ಫೆ.11) ಸಂಜೆ ಹಂಪಿಯ ತುಂಗಭದ್ರಾ ನದಿಯ ದಡದಲ್ಲಿ ಅದ್ಧೂರಿಯಾಗಿ ತುಂಗಭದ್ರಾ (Tunga Bhadra Arati) ಆರತಿ ನೆರೆವೇರಿಸಲಾಯಿತು.
ಅರ್ಚಕರು ಸಾಲಾಗಿ ನಿಂತು, ಮಂತ್ರಘೋಷಗಳ ನಡುವೆ ದೊಡ್ಡದಾದ ಕಂಚಿನ ದೀಪಗಳಿಂದ ನದಿಗೆ ಆರತಿ ಬೆಳಗಿದರು. ನದಿಯ ನೀರಿನಲ್ಲಿ ಪ್ರತಿಫಲಿಸುವ ದೀಪದ ಬೆಳಕು, ಮಂತ್ರಗಳ ಪಠಣ ಮತ್ತು ಶಂಖನಾದವು ಭಕ್ತರಲ್ಲಿ ಹಾಗೂ ಪ್ರವಾಸಿಗರಲ್ಲಿ ಭಕ್ತಿಭಾವ ಮೂಡಿಸಿತು. ಇದನ್ನೂ ಓದಿ: ಮಂಡ್ಯ | ಐದು ದಿನಗಳ ಕಾವೇರಿ ಆರತಿಗೆ ತೆರೆ
ದೇಶ – ವಿದೇಶಗಳ ಸಾವಿರಾರು ಪ್ರವಾಸಿಗರು ತುಂಗಭದ್ರಾ ಆರತಿಯನ್ನು ಕಣ್ತುಂಬಿಕೊಂಡರು. ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್, ಮಾಜಿ ಶಾಸಕ ಭೀಮಾನಾಯ್ಕ್, ಡಿಸಿ ಕವಿತಾ ಮನ್ನಿಕೇರಿ, ಎಸ್‌ಪಿ ಜಾಹ್ನವಿ, ಸಿಇಒ ಅಕ್ರಂ ಷಾ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಇದನ್ನೂ ಓದಿ: ಇಂದಿನಿಂದ 5 ದಿನ ಕಾವೇರಿ ಆರತಿ – ಮದುವಣಗಿತ್ತಿಯಂತೆ ಸಿಂಗಾರಗೊಂಡ ಕೆಆರ್‌ಎಸ್

