ಬೆಂಗಳೂರು: ಹಂಸಲೇಖ ಅವರು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಕಾರ್ಯಕ್ರಮದಲ್ಲಿ ಮುಂದಿನ ವಾರ ಭಾಗಿಯಾಗಲಿದ್ದಾರೆ ಎಂದು ಖಾಸಗಿ ವಾಹಿನಿಯ ಬ್ಯುಸಿನೆಸ್ ಹೆಡ್ ಆಗಿರುವ ರಾಘವೇಂದ್ರ ಹುಣಸೂರು ಅವರು ತಿಳಿಸಿದ್ದರು. ಆದರೆ ಈ ವಿಚಾರವಾಗಿ ಹಂಸಲೇಖ ಕೂಡಾ ಸೋಶಿಯಲ್ ಮೀಡಿಯಾದಲ್ಲಿ ಒಂದು ಪೋಸ್ಟ್ ಹಾಕಿದ್ದಾರೆ.
Advertisement
ಪೇಜಾವರ ಶ್ರೀಗಳ ವಿರುದ್ಧ ಟೀಕೆ ಮಾಡಿದ್ದ ಹಂಸಲೇಖ ಅವರು ಕಳೆದ ವಾರ ಸರಿಗಮಪ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿರಲಿಲ್ಲ. ಅದೇ ರೀತಿ ಈ ವಾರ ಕೂಡ ಹಂಸಲೇಖ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿಲ್ಲ. ಆದರೆ ಮುಂದಿನ ವಾರದಿಂದ ಹಂಸಲೇಖ ಅವರು ಸರಿಗಮಪ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ರಾಘವೇಂದ್ರ ಹುಣಸೂರು ಅವರು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದರು. ಇದೇ ಬೆನ್ನಲ್ಲೇ ಹಂಸಲೇಖ ಕೂಡಾ ಸೋಶಿಯಲ್ ಮೀಡಿಯಾ ಮೂಲಕವಾಗಿ ಒಂದು ಸಂದೇಶವನ್ನು ರವಾನಿಸಿದ್ದಾರೆ. ಇದನ್ನೂ ಓದಿ: ಯಾವುದೇ ಧರ್ಮ, ಸಮಾಜ ಜಾತಿಯನ್ನು ನಿಂದಿಸೋ ಉದ್ದೇಶ ನನ್ನದಲ್ಲ ತಪ್ಪಾಗಿದೆ: ಹಂಸಲೇಖ
Advertisement
Advertisement
ಹಂಸಲೇಖ ಪತ್ರದಲ್ಲಿ ಏನಿದೆ?: ನನ್ನ ಆರೋಗ್ಯ ಸ್ಥಿರವಾಗಿದೆ. ಸರಿಗಮಪ ನನ್ನ ಪ್ರೀತಿಯ ಭುಮಿಕೆ ಅದು ಮನಸ್ಸು, ಮನಸ್ಸುಗಳನ್ನು ನೇಯುವ ವೇದಿಕೆಯಾಗಿದೆ. ಸುಧಾರಣೆಗಳ ಸುಂದರ ಕಥೆಗಳನ್ನು ಓದಿಕೊಳ್ಳುತ್ತಿದ್ದೇನೆ. ಬೇಗ ಬಂದು ಸೇರಿಕೊಳ್ಳುತ್ತೇನೆ. MUSIC EVADES WARS ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮುಂದಿನ ವಾರದಿಂದ ಎಂದಿನಂತೆ ಗುರುಗಳು ನಮ್ಮೊಂದಿಗಿರುತ್ತಾರೆ: ರಾಘವೇಂದ್ರ ಹುಣಸೂರ್
Advertisement
ಕೆಲವು ದಿನಗಳ ಹಿಂದೆ ಮೈಸೂರಿನ ಮಾನಸಗಂಗೋತ್ರಿಯಲ್ಲಿಯಲ್ಲಿ ನಡೆದಿದ್ದ ಪ್ರಶಸ್ತಿ ಸಮಾರಂಭವೊಂದರ ಕಾರ್ಯಕ್ರಮದಲ್ಲಿ ಹಂಸಲೇಖ ಅವರು, ಪೇಜಾವರ ಶ್ರೀಗಳು ದಲಿತರ ಮನೆಗೆ ಹೋಗಿ ಕುಳಿತುಕೊಂಡು ಬಂದಿದ್ದಾರೆ. ಆದರೆ ದಲಿತರು ಕೋಳಿ ಕೊಟ್ರೆ ತಿಂತಾರಾ? ಕುರಿ ರಕ್ತ ಫ್ರೈ ಮಾಡಿ ಕೊಟ್ರೆ ತಿಂತಾರಾ. ಲಿವರ್ ಕೊಟ್ರೆ ತಿಂತಾರಾ? ದಲಿತರ ಮನೆಗೆ ಹೋಗುವುದು ದೊಡ್ಡ ವಿಷಯ ಅಲ್ಲ, ತಮ್ಮ ಮನೆಗೆ ಕರೆದುಕೊಂಡು ಹೋಗಿ ಅವರು ತಿಂದ ಲೋಟ, ತಟ್ಟೆ ತೊಳೆಯೋದು ದೊಡ್ಡ ವಿಷಯ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಅಭಿಮಾನ ಆವೇಶವಾಗಬಾರದು, ಅಭಿಮಾನ ಹಾಡಿನಂತಿರಬೇಕು: ಪತ್ರ ಬರೆದ ಹಂಸಲೇಖ
View this post on Instagram
ಸದ್ಯ ಇತ್ತೀಚೆಗಷ್ಟೇ ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದ ಹಂಸಲೇಖ ಅವರು ನನ್ನ ಹೇಳಿಕೆಯಿಂದ ತಪ್ಪಾಗಿದೆ. ಯಾವುದೇ ಧರ್ಮ, ಸಮಾಜ ಜಾತಿಯನ್ನು ನಿಂದಿಸೋ ಉದ್ದೇಶ ನನ್ನದಲ್ಲ. ಈ ಘಟನೆಯಿಂದ ತನಗೆ ತುಂಬಾ ನೋವಾಗಿರುವುದಾಗಿ ಹೇಳಿದ್ದರು.