ಮಂಡ್ಯ: ಮಗು ತಪ್ಪು ಮಾಡಿದ್ರೆ ತಂದೆ ಎಷ್ಟು ನೋವು ತಿಂತಾನೋ, ನಾನು ಅಷ್ಟೇ ನೋವು ತಿಂತಿದ್ದೀನಿ. ಆ ಮಗು ಕೂಡ ಅಷ್ಟೇ ನೋವು ಅನುಭವಿಸುತ್ತಿರುತ್ತದೆ ಎಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಭಾವುಕರಾಗಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Case) ನಟ ದರ್ಶನ್ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ವಿಚಾರ ಕುರಿತು ಮಂಡ್ಯದಲ್ಲಿ (Mandya) ಮಾತನಾಡಿದ ಅವರು, ದರ್ಶನ್ ನನ್ನ ಮಗು ಅಂತ ತಿಳಿದುಕೊಳ್ಳಿ. ಮಗು ತಪ್ಪು ಮಾಡಿದ್ರೆ ತಂದೆ ಎಷ್ಟು ನೋವು ತಿಂತಾನೋ, ನಾನು ಅಷ್ಟೇ ನೋವು ತಿಂತಿದ್ದೀನಿ. ಆ ಮಗು ಕೂಡ ಅಷ್ಟೇ ನೋವು ತಿಂತಿರುತ್ತೆ. ನಾವು ಆತ ಕೊಟ್ಟಿರುವ ಕೊಡುಗೆ ಕಡೆ ಗಮನ ಕೊಡೋಣ ಎಂದು ತಿಳಿಸಿದ್ದಾರೆ.
- Advertisement
ಅತ್ಯುನ್ನತ ಸ್ಥಾನಕ್ಕೆ ಏರಿದವನು ಮತ್ತೆ ಕೆಳಗೆ ಬೀಳೋದು ಬೇಡ. ಕೇರಳ ಚಿತ್ರೋದ್ಯಮ ಹೀಗೇ ಆಗಿತ್ತು. ಅದೀಗ ಉತ್ತುಂಗದಲ್ಲಿದೆ. ಕೆಳಗೆ ಬಿದ್ದು ಮತ್ತೆ ಮೇಲೆ ಎದ್ದಿದೆ. ನಮ್ಮದು ಚಂದನವನ. ಒಂದು ಮಳೆಗೆ ಮರ ಒಣಗಿದರೇನಂತೆ. ಇನ್ನೊಂದು ಮಳೆಗೆ ಕಾಡು ಬೆಳೆದೇ ಬೆಳೆಯುತ್ತೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಕೆಟ್ಟ ಕಾಮೆಂಟ್ ಮಾಡೋರನ್ನ ಬ್ಲಾಕ್ ಮಾಡಿಬಿಡಿ ಅಷ್ಟೇ: ಅದ್ವಿತಿ ಶೆಟ್ಟಿ
- Advertisement
ಸಿನಿಮಾ ಕಲಾವಿದರಾದವರು ಚಿಕ್ಕದಾಗಿ ಯೋಚನೆ ಮಾಡಬೇಕು. ಸಿಟ್ಟನ್ನ ಸ್ಕ್ರಿಪ್ಟ್ ಮಾಡಬೇಕು, ದ್ವೇಷವನ್ನ ಕ್ಯಾರೆಕ್ಟರ್ ಮಾಡಬೇಕು. ನಾವು ಆ ರೀತಿ ಸಿನಿಮಾದಲ್ಲಿ ತೋರಿಸಬೇಕು ಅಷ್ಟೇ. ನಿಜ ಜೀವನದಲ್ಲಿ ಸ್ಕ್ರಿಪ್ಟನ್ನ ತರಬಾರದು. ನಿಜ ಜೀವನದಲ್ಲಿ ಕ್ಯಾರೆಕ್ಟರ್ ಆಗಬಾರದು. ಇದು ಕಲಾವಿದರ ಕರ್ತವ್ಯ ಎಂದು ನಟ ದರ್ಶನ್‌ಗೆ ಹಂಸಲೇಖ ಕಿವಿಮಾತು ಹೇಳಿದ್ದಾರೆ. ಇದನ್ನೂ ಓದಿ: ಪಿಎಂ ನರೇಂದ್ರ ಮೋದಿಗೆ ಮದುವೆ ಆಮಂತ್ರಣ ನೀಡಿದ ‘ಮಾಣಿಕ್ಯ’ ನಟಿ