ಬೆಳಗಾವಿ: ಕೈ ಕಾಲು ಕಟ್ಟಿ ಹಾಕಿ ಸಿನಿಮೀಯ ರೀತಿಯಲ್ಲಿ ದರೋಡೆ ಮಾಡಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ನಿನ್ನೆ ತಡರಾತ್ರಿ ವೇಳೆಯಲ್ಲಿ ನಡೆದಿದೆ.
ಶಕುಂತಲಾ ಸಾತಪ್ಪ ಕಿಲ್ಲೆದಾರ ಎಂಬುವವರ ಮನೆಗೆ ನುಗ್ಗಿ ಮನೆಯಲ್ಲಿದ್ದ ಮೂವರ ಕೈಕಾಲು ಕಟ್ಟಿ, ಕುತ್ತಿಗೆಗೆ ಚಾಕು ಹಿಡಿದು ಬೆದರಿಸಿ ಕಳ್ಳತನ ಮಾಡಿದ್ದಾರೆ. ನಗರದ ಎರಡು ಮನೆಯಲ್ಲಿ ಕಳ್ಳತನವಾಗಿದೆ. ರಾಮ ಕಿಲ್ಲೆದಾರ ಎಂಬುವವರ ಮನೆಯ ಬೀಗ ಮುರಿದು ಕಳ್ಳತನ ಮಾಡಲಾಗಿದ್ದು, ಎಂಟರಿಂದ ಹತ್ತು ಜನರ ಡಕಾಯಿತರಿಂದ ಈ ಕೃತ್ಯ ನಡೆದಿದೆ. ಇದನ್ನೂ ಓದಿ: 13ರ ಬಾಲಕಿ ಮೇಲೆ 16 ಮಂದಿಯಿಂದ ಸಾಮೂಹಿಕ ಅತ್ಯಾಚಾರ – ನೋವಿನ ಕಥೆ ಬಿಚ್ಚಿಟ್ಟ ತಂದೆ!
ಎರಡು ಮನೆಯಲ್ಲಿ ಒಟ್ಟು 140 ಗ್ರಾಮ ಚಿನ್ನ 75 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಾನಿಂಗ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಕೇಶ್ವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.